AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ.

Crime News: ಕಾಂಚೀಪುರಂನಲ್ಲಿ ಬಾಯ್​ಫ್ರೆಂಡ್ ಎದುರೇ ಕಾಲೇಜು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 14, 2023 | 5:22 PM

Share

ಚೆನ್ನೈ: ಬೆಂಗಳೂರು-ಪುದುಚೇರಿ ಹೆದ್ದಾರಿ ಬಳಿ ತಮಿಳುನಾಡಿನ ಕಾಂಚೀಪುರಂನಲ್ಲಿ (Kanchipuram) 20 ವರ್ಷದ ಕಾಲೇಜು ವಿದ್ಯಾರ್ಥಿನಿಯ ಬಾಯ್​ಫ್ರೆಂಡ್ ಎದುರಲ್ಲೇ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಗುರುವಾರ ಸಂಜೆ 7 ಗಂಟೆ ವೇಳೆಗೆ ಆ ಯುವತಿ ಮತ್ತು ಆಕೆಯ ಬಾಯ್​ಫ್ರೆಂಡ್ ಖಾಸಗಿ ಕಾಲೇಜಿನ ಬಳಿ ಮಾತನಾಡುತ್ತಿದ್ದಾಗ 5 ಜನರ ಗುಂಪು ಅವರನ್ನು ಸುತ್ತುವರೆದು, ಆ ಯುವಕನಿಗೆ ಚಾಕು ತೋರಿಸಿ ಹೆದರಿಸಿತ್ತು. ನಂತರ ಅವರು ಆ ಯುವತಿಯ ಮೇಲೆ ಒಬ್ಬರಾದ ನಂತರ ಒಬ್ಬರು ಅತ್ಯಾಚಾರ ನಡೆಸಿದ್ದಾರೆ.

ಆ ಯುವತಿ ಜೋರಾಗಿ ಕಿರುಚಿಕೊಂಡಾಗ ಗಲಾಟೆ ಮಾಡಿದರೆ ಅಲ್ಲೇ ಕೊಲೆ ಮಾಡಿ, ಹೂತುಹಾಕುವುದಾಗಿ ಅವರು ಹೆದರಿಸಿದ್ದಾರೆ. ಇದರಿಂದ ಆಕೆಯ ಬಾಯ್​​ಫ್ರೆಂಡ್ ಕೂಡ ಅಸಹಾಯಕನಾಗಿ ನಿಂತಿದ್ದ. ಬಳಿಕ ಆ ಯುವತಿ ಮತ್ತು ಆಕೆಯ ಸ್ನೇಹಿತ ತಪ್ಪಿಸಿಕೊಂಡು ತಮ್ಮ ಸಂಬಂಧಿಕರ ಮನೆಗೆ ತೆರಳಿದ್ದಾರೆ. ಬಳಿಕ ಆ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ, ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ತನ್ನ ಮೇಲೆ ಅತ್ಯಾಚಾರವೆಸಗಿದ್ದ ಯುವಕನ ತಾಯಿಯ ಮೇಲೆ ಗುಂಡು ಹಾರಿಸಿದ ಬಾಲಕಿ

ಆ ಕಾಲೇಜಿನ ಬಳಿ ಕತ್ತಲೆ ಇದ್ದುದರಿಂದ ಆಕೆ ಹಾಗೂ ಆಕೆಯ ಸ್ನೇಹಿತ ಯಾರ ಕಣ್ಣಿಗೂ ಬಿದ್ದಿಲ್ಲ. ಆದರೆ, ಆರೋಪಿಗಳಲ್ಲಿ ಒಬ್ಬನ ಹೆಸರು ವಿಮಲ್ ಎಂದು ಆ ಯುವತಿಗೆ ಗೊತ್ತಾಗಿದೆ. ಕಂಠಪೂರ್ತಿ ಕುಡಿದಿದ್ದ ಅವರೆಲ್ಲರೂ ಮಾಸ್ಕ್ ಹಾಕಿಕೊಂಡಿದ್ದರಿಂದ ಅವರ ಮುಖವನ್ನು ಆ ಯುವತಿಗೆ ಗುರುತಿಸಲು ಸಾಧ್ಯವಾಗಿಲ್ಲ.

ನಂತರ ಪೊಲೀಸರು ವಿಮಲ್​ನನ್ನು ವಿಪಡು ಗ್ರಾಮದಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ವಿಮಲ್ ಮೂಲಕ ತಮಿಳುನಾಡು ಪೊಲೀಸರು ಇತರ ನಾಲ್ವರನ್ನು ಮಣಿಕಂದನ್, ಶಿವಕುಮಾರ್, ವಿಘ್ನೇಶ್ ಮತ್ತು ತೆನ್ನರಸು ಎಂದು ಗುರುತಿಸಿದ್ದಾರೆ. ಈ ಎಲ್ಲಾ ಐವರು ಆರೋಪಿಗಳ ವಿರುದ್ಧ ಅತ್ಯಾಚಾರ ಆರೋಪಗಳನ್ನು ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್