ಚೆನ್ನೈ: ಪೊಲ್ಲಾಚಿ ಅತ್ಯಾಚಾರ ಪ್ರಕರಣ ಎಷ್ಟು ಕುಖ್ಯಾತಿ ಗಳಿಸಿತ್ತು ಎಂಬುದು ಎಲ್ಲರಿಗೂ ಗೊತ್ತೇ ಇದೆ. ಅದೇ ರೀತಿಯ ಮತ್ತೊಂದು ಘಟನೆ ತಮಿಳುನಾಡಿನಲ್ಲಿ (Tamil Nadu) ನಡೆದಿದ್ದು, 22 ವರ್ಷದ ದಲಿತ ಮಹಿಳೆಯ ಮೇಲೆ 7 ತಿಂಗಳ ಅವಧಿಯಲ್ಲಿ ಪದೇಪದೆ ಲೈಂಗಿಕ ದೌರ್ಜನ್ಯ (Rape) ನಡೆಸಿದ ಆರೋಪದಲ್ಲಿ ಮೂವರು ಶಾಲಾ ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಗಳು ಮಹಿಳೆಯ ಖಾಸಗಿ ವಿಡಿಯೋಗಳನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಮತ್ತು ಹಲವು ತಿಂಗಳಿನಿಂದ ಆಕೆಯ ಮೇಲೆ ಅತ್ಯಾಚಾರವನ್ನು ನಡೆಸುತ್ತಿದ್ದರು ಎನ್ನಲಾಗಿದೆ.
ಹರಿಹರನ್ ಅಲಿಯಾಸ್ ಸರವಣನ್ ಎಂಬ 27 ವರ್ಷದ ವ್ಯಕ್ತಿ ಮಹಿಳೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದ. ಅವರಿಬ್ಬರೂ ಸ್ನೇಹಿತರಾಗಿದ್ದರು. ಇದಲ್ಲದೆ, ಹರಿಹರನ್ ಮತ್ತು ಆ ಮಹಿಳೆ ದೈಹಿಕ ಸಂಬಂಧವನ್ನು ಹೊಂದಿದ್ದರು. ಒಂದು ದಿನ ಹರಿಹರನ್ ತನ್ನ ಸ್ನೇಹಿತರೊಂದಿಗೆ ಇದ್ದಾಗ, ಆತ ಆ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಾಗ ಮಾಡಿಕೊಂಡಿದ್ದ ವಿಡಿಯೋವನ್ನು ವೀಕ್ಷಿಸಿದರು. ನಂತರ ಆ ಗೆಳೆಯರೆಲ್ಲರೂ ಸೇರಿ ಆಕೆಗೆ ಬೆದರಿಕೆ ಹಾಕಿ, 2021ರ ಆಗಸ್ಟ್ ಮತ್ತು 2022ರ ಮಾರ್ಚ್ ನಡುವೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಡಿಎಂಕೆ ಪದಾಧಿಕಾರಿ ಮತ್ತು ಮೂವರು ಶಾಲೆಗೆ ಹೋಗುವ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.
ಸಂತ್ರಸ್ತೆ ಮಹಿಳಾ ಸಹಾಯವಾಣಿಯನ್ನು ಸಂಪರ್ಕಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ತನ್ನ ಜೊತೆಗಿನ ಲೈಂಗಿಕ ಕ್ರಿಯೆಯ ವಿಡಿಯೋವನ್ನು ಬಳಸಿಕೊಂಡು ತನ್ನ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿ, ಬೆದರಿಕೆ ಹಾಕಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಈ ಪ್ರಕರಣದ ಆರೋಪಿಗಳಾದ ಎಂಟು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ವ್ಯಕ್ತಿಗಳು ಬೇರೆ ಯಾವುದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆಯೇ ಎಂದು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ .
ಇದನ್ನೂ ಓದಿ: Rape: ರೈಲಿಗಾಗಿ ಕಾಯುತ್ತಿರುವಾಗ ರೈಲ್ವೆ ಸ್ಟೇಷನ್ನ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ!
Shocking News: 5 ವರ್ಷಗಳಿಂದ ಅಪ್ಪ, ಅಣ್ಣ, ಅಜ್ಜನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!