Crime News: ಆಂಧ್ರಪ್ರದೇಶದ ಮನೆಯಲ್ಲಿ ಟಿಡಿಪಿ ನಾಯಕ ವೆನ್ನಾ ಬಾಲಕೋಟಿ ರೆಡ್ಡಿ ಮೇಲೆ ಗುಂಡಿನ ದಾಳಿ

ಬುಧವಾರ ರಾತ್ರಿ 10.30ರ ಸುಮಾರಿಗೆ ಟಿಡಿಪಿ ನಾಯಕ ಮತ್ತು ಮಾಜಿ ಸಂಸದ ವೆನ್ನಾ ಬಾಲಕೋಟಿ ರೆಡ್ಡಿ ಅವರ ಮೇಲೆ ಪಿ. ವೆಂಕಟೇಶ್ವರ್ ರೆಡ್ಡಿ ಗುಂಡು ಹಾರಿಸಿದ್ದಾರೆ.

Crime News: ಆಂಧ್ರಪ್ರದೇಶದ ಮನೆಯಲ್ಲಿ ಟಿಡಿಪಿ ನಾಯಕ ವೆನ್ನಾ ಬಾಲಕೋಟಿ ರೆಡ್ಡಿ ಮೇಲೆ ಗುಂಡಿನ ದಾಳಿ
ಸಾಂಧರ್ಬಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Feb 02, 2023 | 10:43 AM

ಹೈದರಾಬಾದ್: ತೆಲುಗು ದೇಶಂ ಪಕ್ಷದ (TDP) ನಾಯಕ ವೆನ್ನಾ ಬಾಲಕೋಟಿ ರೆಡ್ಡಿ (Venna Balakoti Reddy) ಮೇಲೆ ಬುಧವಾರ ಅವರ ನಿವಾಸದಲ್ಲಿ ಗುಂಡು ಹಾರಿಸಲಾಗಿದೆ. ಈ ಗುಂಡಿನ ದಾಳಿಯಿಂದ ಬಾಲಕೋಟಿ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದಾಳಿಗೆ ವೈಎಸ್‌ಆರ್‌ಸಿಪಿ (YSRCP) ಜವಾಬ್ದಾರಿ ಎಂದು ಟಿಡಿಪಿ ನಾಯಕ ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಬುಧವಾರ ರಾತ್ರಿ 10.30ರ ಸುಮಾರಿಗೆ ಟಿಡಿಪಿ ನಾಯಕ ಮತ್ತು ಮಾಜಿ ಸಂಸದ ವೆನ್ನಾ ಬಾಲಕೋಟಿ ರೆಡ್ಡಿ ಅವರ ಮೇಲೆ ಪಿ. ವೆಂಕಟೇಶ್ವರ್ ರೆಡ್ಡಿ ಗುಂಡು ಹಾರಿಸಿದ್ದಾರೆ. ರಾತ್ರಿ ವೆಂಕಟೇಶ್ವರ್ ರೆಡ್ಡಿ ಅವರು ಬಾಲಕೋಟಿ ರೆಡ್ಡಿ ಮನೆಯ ಬಾಗಿಲು ತಟ್ಟಿದ್ದಾರೆ ಎನ್ನಲಾಗಿದೆ. ಬಾಲಕೋಟಿ ರೆಡ್ಡಿ ಬಾಗಿಲು ತೆರೆದ ಕೂಡಲೇ ಗುಂಡು ಹಾರಿಸಿದ್ದು, ಗುಂಡು ಅವರ ಹೊಟ್ಟೆಗೆ ತಗುಲಿದೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲೊಂದು ಭೀಕರ ಘಟನೆ; ಗರ್ಲ್​ಫ್ರೆಂಡ್​ನ 3 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ

ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾರೆ. ದಾಳಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳೆದ ವರ್ಷವೂ ಬಾಲಕೋಟಿ ರೆಡ್ಡಿ ವಾಕಿಂಗ್‌ಗೆ ತೆರಳಿದ್ದ ವೇಳೆ ಅವರ ಮೇಲೆ ಚಾಕು ಮತ್ತು ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆ ಯತ್ನ ನಡೆದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್