4 ವರ್ಷದ ಬಾಲಕಿ ಮೇಲೆ ಸಬ್​ ಇನ್​ಸ್ಪೆಕ್ಟರ್ ಅತ್ಯಾಚಾರ; ರಾಜಸ್ಥಾನದಲ್ಲಿ ಅಮಾನವೀಯ ಘಟನೆ

ಭೂಪೇಂದ್ರ ಸಿಂಗ್ ಎಂಬ ಆರೋಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದು, ಮಧ್ಯಾಹ್ನ 4 ವರ್ಷದ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಇದೀಗ ಅವರನ್ನು ಬಂಧಿಸಲಾಗಿದೆ. ಅತ್ಯಾಚಾರವೆಸಗಿದ ಭೂಪೇಂದ್ರ ಸಿಂಗ್ ಅವರನ್ನು ಸ್ಥಳೀಯ ಜನರು ಥಳಿಸಿದ್ದಾರೆ.

4 ವರ್ಷದ ಬಾಲಕಿ ಮೇಲೆ ಸಬ್​ ಇನ್​ಸ್ಪೆಕ್ಟರ್ ಅತ್ಯಾಚಾರ; ರಾಜಸ್ಥಾನದಲ್ಲಿ ಅಮಾನವೀಯ ಘಟನೆ
ಅತ್ಯಾಚಾರImage Credit source: Hindustan Times
Follow us
ಸುಷ್ಮಾ ಚಕ್ರೆ
|

Updated on: Nov 11, 2023 | 12:30 PM

ನವದೆಹಲಿ: 4 ವರ್ಷದ ಬಾಲಕಿಯ ಮೇಲೆ ಶುಕ್ರವಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರವೆಸಗಿರುವ ಹೀನಾಯ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ. ದೌಸಾ ಜಿಲ್ಲೆಯ ಲಾಲ್ಸೋಟ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭೂಪೇಂದ್ರ ಸಿಂಗ್ ಎಂಬ ಆರೋಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದು, ಮಧ್ಯಾಹ್ನ 4 ವರ್ಷದ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.

ಈ ಬಗ್ಗೆ ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಮಾಹಿತಿ ನೀಡಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸ್ಥಳೀಯ ನಿವಾಸಿಗಳು ಭಾರೀ ಸಂಖ್ಯೆಯಲ್ಲಿ ರಾಹುವಾಸ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಅತ್ಯಾಚಾರ ನಡೆಸಿದ ಸಬ್ ಇನ್​ಸ್ಪೆಕ್ಟರ್ ಅವರನ್ನು ಪೊಲೀಸರು ವಶಕ್ಕೆ ಪಡೆಯುವ ಮೊದಲು ಆ ಜನರು ಆರೋಪಿಯನ್ನು ಥಳಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ

ಈ ವೇಳೆ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ, ”ಲಾಲ್ಸೋಟ್‌ನಲ್ಲಿ ದಲಿತ ಬಾಲಕಿಯ ಮೇಲೆ ಪೋಲೀಸರೊಬ್ಬರು ಅತ್ಯಾಚಾರವೆಸಗಿದ ಘಟನೆಯಿಂದ ಜನರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಅಮಾಯಕ ಮಗುವಿಗೆ ನ್ಯಾಯ ದೊರಕಿಸಿಕೊಡಲು ಇಲ್ಲಿಗೆ ಬಂದಿದ್ದೇನೆ. ಅಶೋಕ್ ಗೆಹ್ಲೋಟ್ ಸರ್ಕಾರದ ಅದಕ್ಷತೆಯಿಂದಾಗಿ ಪೊಲೀಸರು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದು, ಚುನಾವಣೆಯಂತಹ ಸೂಕ್ಷ್ಮ ಸಂದರ್ಭದಲ್ಲೂ ದೌರ್ಜನ್ಯ, ಅತ್ಯಾಚಾರ ಎಸಗಲು ಹಿಂಜರಿಯುತ್ತಿಲ್ಲ ಎಂದು ಅವರು ಹೇಳಿದರು.

ಅತ್ಯಾಚಾರಕ್ಕೊಳಗಾದ ಬಾಲಕಿಯ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ