Crime News: ಬುಡಕಟ್ಟು ವ್ಯಕ್ತಿಯನ್ನು ಲಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಜನರು; ಗಂಭೀರವಾಗಿ ಗಾಯಗೊಂಡಾತ ಸಾವು
ಭೀಲ್ ಬುಡಕಟ್ಟು ಸಮುದಾಯಕ್ಕೆ ಸೇರಿದ ಕನ್ಹಯ್ಯಲಾಲ್ ಎಂಬಾತ ಕಳ್ಳತನ ಮಾಡಿದ್ದಾನೆ ಎಂಬ ಆರೋಪದಲ್ಲಿ ಸಿಂಗೋಳಿ ಸಮೀಪದ ಗ್ರಾಮಸ್ಥರು ಆತನನ್ನು ಹೊಡೆದು, ಬಟ್ಟೆಯೆಲ್ಲ ಹರಿದು, ಲಾರಿಗೆ ಕಟ್ಟಿಕೊಂಡು ಎಳೆದುಕೊಂಡು ಹೋಗಿದ್ದಾರೆ.
ಭೂಪಾಲ್: ಕಳ್ಳತನದ ಆರೋಪದಲ್ಲಿ 45 ವರ್ಷದ ವ್ಯಕ್ತಿಯೊಬ್ಬನನ್ನು ಮನಬಂದಂತೆ ಥಳಿಸಿ, ಕಾಲಿಗೆ ಹಗ್ಗ ಕಟ್ಟಿ, ಆ ಹಗ್ಗವನ್ನು ಲಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದಾರೆ. ಡಾಂಬರಿನ ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದಕ್ಕೆ ಆ ವ್ಯಕ್ತಿಯ ಮೈ ಮೇಲೆ ಗಾಯಗಳಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಭೀಲ್ ಬುಡಕಟ್ಟು ಸಮುದಾಯಕ್ಕೆ ಸೇರಿದ ಕನ್ಹಯ್ಯಲಾಲ್ ಎಂಬಾತ ಕಳ್ಳತನ ಮಾಡಿದ್ದಾನೆ ಎಂಬ ಆರೋಪದಲ್ಲಿ ಸಿಂಗೋಳಿ ಸಮೀಪದ ಗ್ರಾಮಸ್ಥರು ಆತನನ್ನು ಹೊಡೆದು, ಬಟ್ಟೆಯೆಲ್ಲ ಹರಿದು, ಲಾರಿಗೆ ಕಟ್ಟಿಕೊಂಡು ಎಳೆದುಕೊಂಡು ಹೋಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಆತ ಸಾವನ್ನಪ್ಪಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ये मध्यप्रदेश में हो क्या रहा है…?
अब नीमच ज़िले के सिंगोली में कन्हैयालाल भील नाम के एक आदिवासी व्यक्ति के साथ बर्बरता की बेहद अमानवीय घटना सामने आयी है ?
मृतक को चोरी की शंका पर बुरी तरह से पीटने के बाद उसे एक वाहन से बांधकर निर्दयता से घसीटा गया, जिससे उसकी मौत हो गयी ? pic.twitter.com/96r1zUQBDs
— Kamal Nath (@OfficeOfKNath) August 28, 2021
ಬುಡಕಟ್ಟು ಸಮುದಾಯದ ವ್ಯಕ್ತಿಗೆ ಥಳಿಸಿ, ಎಳೆದುಕೊಂಡು ಹೋಗುತ್ತಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಆತನನ್ನು ಹೊಡೆದವರೇ ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಧ್ಯಪ್ರದೇಶದ ಮಾಜಿ ಸಿಎಂ ಕಮಲನಾಥ್ ಕೂಡ ಟ್ವೀಟ್ ಮಾಡಿದ್ದು, ಮಧ್ಯಪ್ರದೇಶದಲ್ಲಿ ಏನು ನಡೆಯುತ್ತಿದೆ? ಬುಡಕಟ್ಟು ಸಮುದಾಯದ ವ್ಯಕ್ತಿಯನ್ನು ಹೀನಾಯವಾಗಿ ಹೊಡೆದು, ರಸ್ತೆಯಲ್ಲಿ ಎಳೆದುಕೊಂಡು ಹೋಗಲಾಗಿದೆ. ವಾಹನಕ್ಕೆ ಕಟ್ಟಿಕೊಂಡು ಈ ರೀತಿ ಎಳೆದುಕೊಂಡು ಹೋಗಿರುವ ಅಮಾನವೀಯ ಕೃತ್ಯವೆಸಗಿದವರಿಗೆ ಶಿಕ್ಷೆ ಆಗಲೇಬೇಕು. ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಅಮಾನುಷ ಕೃತ್ಯಗಳು ಹೆಚ್ಚಾಗಿವೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Crime News: ಅಕ್ರಮ ಸಂಬಂಧದ ಶಂಕೆ; ಹೆಂಡತಿಯ ಗುಪ್ತಾಂಗಕ್ಕೆ ಹೊಲಿಗೆ ಹಾಕಿ ಮುಚ್ಚಿದ ಪತಿರಾಯ!
Crime News: ತ್ರಿಶೂಲದಿಂದ ಇರಿದು ಅರ್ಚಕನ ಬರ್ಬರ ಹತ್ಯೆ; ದೇವಸ್ಥಾನದಲ್ಲಿ ಅರೆ ಸುಟ್ಟ ಶವ ಪತ್ತೆ
(Crime News: Tribal man dies after being beaten up tied to vehicle and dragged on Theft Suspicion)
Published On - 6:35 pm, Mon, 30 August 21