ನನಗೆ ಸಿಗದಿದ್ದರೆ ಯಾರಿಗೂ ಸಿಗಬಾರದು; ಯುವತಿಯ ಮದುವೆ ಹಿಂದಿನ ದಿನವೇ ಮುಖಕ್ಕೆ ಆ್ಯಸಿಡ್ ಹಾಕಿದ ಭಗ್ನಪ್ರೇಮಿ
ತನಗೆ ಸಿಗದಿರುವ ಹುಡುಗಿ ಯಾರಿಗೂ ಸಿಗಬಾರದು ಎಂದು ಭಗ್ನಪ್ರೇಮಿಯೊಬ್ಬ ಯುವತಿಯೊಬ್ಬಳ ಮದುವೆಗೆ ಕೇವಲ 1 ದಿನ ಇರುವಾಗ ಆಕೆಯ ಮುಖಕ್ಕೆ ಆ್ಯಸಿಡ್ ಎರಚಿ, ಆಕೆಯ ಜೀವನವನ್ನೇ ಹಾಳು ಮಾಡಿದ್ದಾನೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬ್ಯಾಂಕ್ಗೆ ಹೋಗಿ ಮನೆಗೆ ಮರಳುತ್ತಿದ್ದ 25 ವರ್ಷದ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ. ಆಕೆ ಮದುವೆಯ ಸಂಭ್ರಮದಲ್ಲಿರುವ ಬದಲು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಅಜಂಗಢ, ಮೇ 3: ಉತ್ತರ ಪ್ರದೇಶದಲ್ಲಿ (Uttar Pradesh) ಆಘಾತಕಾರಿ ಘಟನೆಯೊಂದು ನಡೆದಿದೆ. 25 ವರ್ಷದ ಯುವತಿಯ ಮದುವೆ ಕಾರ್ಯಕ್ರಮಗಳು ಆರಂಭವಾಗಲು ಕೇವಲ 1 ದಿನ ಬಾಕಿ ಉಳಿದಿತ್ತು. ಯಾವುದೇ ಕೆಲಸಕ್ಕೆಂದು ಬ್ಯಾಂಕ್ಗೆ ಹೋಗಿದ್ದ ಆಕೆ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಪುರುಷರು ಅವಳನ್ನು ತಡೆದಿದ್ದಾರೆ. ಅವರಲ್ಲಿ ಒಬ್ಬ ಯುವಕ “ನೀನು ನನ್ನವಳಲ್ಲದಿದ್ದರೆ ಬೇರೆಯವರಿಗೂ ಸಿಗಬಾರದು” ಎಂದು ಹೇಳಿ ಆಕೆಯ ಮೇಲೆ ಆಸಿಡ್ ಎರಚಿದ್ದಾನೆ.
ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಅಲ್ಲಿ ಸಂತ್ರಸ್ತೆ ಮತ್ತು ಆಕೆಯ ಕುಟುಂಬವು ಆಕೆಯ ಮದುವೆಗೆ ಎಲ್ಲ ರೀತಿಯ ಸಿದ್ಧತೆ ನಡೆಸುತ್ತಿತ್ತು. ಆಕೆಯ ತಂದೆ ನಿಧನರಾಗಿದ್ದರಿಂದ ಮತ್ತು ಆಕೆಯ ಸಹೋದರ ಚಿಕ್ಕವನಾಗಿದ್ದರಿಂದ ಆಕೆಯೇ ಸ್ವತಃ ಮದುವೆಗೆ ಬೇಕಾದ ವ್ಯವಸ್ಥೆಗಳನ್ನು ನಿರ್ವಹಿಸುತ್ತಿದ್ದಳು.
ಈ ಹಿಂದೆ ಆಕೆಯ ಜೊತೆ ಸಂಬಂಧ ಹೊಂದಿದ್ದ ಆರೋಪಿ ರಾಮ್ ಜನಮ್ ಸಿಂಗ್ ಪಟೇಲ್, ಆಕೆಯ ಮದುವೆಯನ್ನು ಬೇರೆ ವ್ಯಕ್ತಿಯೊಂದಿಗೆ ನಿಶ್ಚಯಿಸುವುದನ್ನು ತೀವ್ರವಾಗಿ ವಿರೋಧಿಸಿದ್ದನು. ಆಕೆಗೆ ತಕ್ಕ ಬುದ್ಧಿ ಕಲಿಸಬೇಕೆಂದು ಪ್ಲಾನ್ ಮಾಡಿದ್ದ ಆತ ಆ್ಯಸಿಡ್ ದಾಳಿ ನಡೆಸಿದ್ದಾನೆ.
ಇದನ್ನೂ ಓದಿ: ಪ್ರಿಯಕರನನ್ನು ಮನೆಗೆ ಕರೆಸಿ ಗುಪ್ತಾಂಗ ಕತ್ತರಿಸಿದ ಪ್ರೇಯಸಿ
ಗುರುವಾರ ಬ್ಯಾಂಕಿನಿಂದ 20,000 ರೂ.ಗಳನ್ನು ಡ್ರಾ ಮಾಡಿಕೊಂಡು ಆಕೆ ಮನೆಗೆ ಹಿಂದಿರುಗುತ್ತಿದ್ದಾಗ ಆಕೆಯ ಮದುವೆಯನ್ನು ನಿಲ್ಲಿಸುವ ಉದ್ದೇಶದಿಂದ ಆಕೆಯ ಮಾಜಿ ಪ್ರೇಮಿ ಆಕೆಯ ಮೇಲೆ ಆಸಿಡ್ ಎರಚಿದನು. ಇದರಿಂದ ಆ ಯುವತಿಯ ಮುಖ, ಭುಜ, ಕುತ್ತಿಗೆ ಮತ್ತು ದೇಹದ ಮೇಲ್ಭಾಗ ತೀವ್ರವಾಗಿ ಸುಟ್ಟುಹೋಗಿದೆ. ಆಕೆಯನ್ನು ಆಕೆಯ ಹಳ್ಳಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಪ್ರಾಥಮಿಕ ಚಿಕಿತ್ಸೆಯ ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಶೇ. 60 ರಷ್ಟು ಸುಟ್ಟಗಾಯಗಳಿಗೆ ಒಳಗಾಗಿರುವ ಆಕೆಗೆ ಅಜಮ್‌ಗಢದ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿ ಮೂರೇ ದಿನಕ್ಕೆ ಮೈದುನನಿಂದ ಅತ್ಯಾಚಾರಕ್ಕೊಳಗಾದ ಮಹಿಳೆ
ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಘಟನೆಯಲ್ಲಿ ಬಳಸಲಾದ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆಕೆಯ ಮದುವೆ ರದ್ದಾಗುವಂತೆ ನೋಡಿಕೊಳ್ಳಲು ಮತ್ತು ಆಕೆಯನ್ನು ತಾನೇ ಮದುವೆಯಾಗಲು ಆಕೆಯ ಬೆನ್ನಿನ ಮೇಲೆ ಆಸಿಡ್ ಎರಚಲು ಬಯಸಿದ್ದೆ ಎಂದು ನಂತರ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








