AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮನೆಯಿಂದ ಓಡಿಹೋಗಿ ಮದುವೆಯಾಗಿದ್ದಕ್ಕೆ ಅಣ್ಣಂದಿರಿಂದಲೇ ತಂಗಿಯ ಬರ್ಬರ ಹತ್ಯೆ

Murder News Today | ಕಳೆದ ತಿಂಗಳು ತನ್ನ ಸಂಬಂಧಿಯಾಗಿದ್ದ ದೇವೇಂದ್ರ ಎಂಬಾತನನ್ನು ಅರ್ಚನಾ ಪ್ರೀತಿಸಿ ಮದುವೆಯಾಗಿದ್ದಳು. ಈ ಮದುವೆ ಆಕೆಯ ಅಪ್ಪ-ಅಮ್ಮನಿಗೆ ಇಷ್ಟವಿರಲಿಲ್ಲ. ಇದೇ ಕಾರಣಕ್ಕೆ ಆಕೆಯನ್ನು ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

Crime News: ಮನೆಯಿಂದ ಓಡಿಹೋಗಿ ಮದುವೆಯಾಗಿದ್ದಕ್ಕೆ ಅಣ್ಣಂದಿರಿಂದಲೇ ತಂಗಿಯ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 29, 2021 | 7:32 PM

Share

ಲಕ್ನೋ: ಭಾರತದಲ್ಲಿ ಮರ್ಯಾದಾ ಹತ್ಯೆ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಲೇ ಇರುತ್ತವೆ. ಜನರು ಎಷ್ಟೇ ಆಧುನಿಕ ಮನಸ್ಥಿತಿಯವರಾಗಿದ್ದರೂ ಅಂತರ್ಜಾತೀಯ ವಿವಾಹ, ಪ್ರೇಮ ವಿವಾಹವನ್ನು ಇನ್ನೂ ದೊಡ್ಡ ಅಪರಾಧ ಎಂಬಂತೆಯೇ ನೋಡುವವರಿದ್ದಾರೆ. ಅದೇ ರೀತಿ, ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದ ಯುವತಿಯನ್ನು ಆಕೆಯ ಮನೆಯವರೇ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಅರ್ಚನಾ ಎಂದು ಗುರುತಿಸಲಾಗಿದೆ.

ಜೂನ್ 28ರಂದು ತನ್ನ ಮನೆಯಿಂದ ನಾಪತ್ತೆಯಾಗಿದ್ದ ಅರ್ಚನಾ ದೇವೇಂದ್ರನೊಂದಿಗೆ ಮದುವೆಯಾಗಿದ್ದಳು. ಉತ್ತರ ಪ್ರದೇಶದ ಪಲಿಯಾ ಗುಜಾರ್ ಎಂಬಲ್ಲಿ ತನ್ನ ಗಂಡನ ಮನೆಯವರೊಂದಿಗೆ ವಾಸವಾಗಿದ್ದ ಅರ್ಚನಾಳನ್ನು ಆಕೆಯ ಮನೆಯವರೇ ಕೊಲೆ ಮಾಡಿದ್ದಾರೆ. ಕಳೆದ ತಿಂಗಳು ತನ್ನ ಸಂಬಂಧಿಯಾಗಿದ್ದ ದೇವೇಂದ್ರ ಎಂಬಾತನನ್ನು ಅರ್ಚನಾ ಪ್ರೀತಿಸಿ ಮದುವೆಯಾಗಿದ್ದಳು. ಈ ಮದುವೆ ಆಕೆಯ ಅಪ್ಪ-ಅಮ್ಮನಿಗೆ ಇಷ್ಟವಿರಲಿಲ್ಲ. ತಮ್ಮ ಮಗಳನ್ನು ಬಲವಂತವಾಗಿ ಮದುವೆಯಾಗಿದ್ದಾನೆ ಎಂದು ಅರ್ಚನಾಳ ಮನೆಯವರು ದೇವೇಂದ್ರ ಮತ್ತು ಆತನ ಅಣ್ಣ-ತಮ್ಮಂದಿರ ವಿರುದ್ಧ ದೂರನ್ನು ದಾಖಲಿಸಿದ್ದರು.

ಆ ಪ್ರಕರಣದ ಬಗ್ಗೆ ದತ್ತಗಂಜ್ ಪೊಲೀಸ್ ಠಾಣೆಯಲ್ಲಿ ಹೇಳಿಕೆ ದಾಖಲಿಸಲು ಅರ್ಚನಾ ತನ್ನ ಗಂಡ ದೇವೇಂದ್ರ ಮತ್ತು ಆತನ ತಮ್ಮಂದಿರೊಂದಿಗೆ ಬರುತ್ತಿದ್ದಾಗ ಅಡ್ಡ ಹಾಕಿದ್ದ ಆಕೆಯ ತಂದೆಯವ ಮನೆಯವರು ಆಕೆಯ ಹೊಟ್ಟೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಪೊಲೀಸ್ ಠಾಣೆಯ ಬಳಿಯಲ್ಲೇ ಈ ಕೊಲೆ ನಡೆದಿದ್ದು, ಆಕೆಯನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಪ್ರಾಣ ಹಾರಿಹೋಗಿತ್ತು.

ಈ ಬಗ್ಗೆ ಅರ್ಚನಾಳ ಗಂಡ ದೇವೇಂದ್ರ ಪೊಲೀಸರಿಗೆ ದೂರು ನೀಡಿದ್ದಾರೆ. ನಾನು ಮತ್ತು ನನ್ನ ಹೆಂಡತಿ ನಮ್ಮ ಹೇಳಿಕೆಯನ್ನು ದಾಖಲಿಸಲು ಪೊಲೀಸ್ ಠಾಣೆಗೆ ಬರುತ್ತಿದ್ದಾಗ ನಾಲ್ವರು ನಮ್ಮನ್ನು ಅಡ್ಡಗಟ್ಟಿದರು. ಆ ನಾಲ್ವರಲ್ಲಿ ಇಬ್ಬರು ಅರ್ಚನಾಳ ಅಣ್ಣಂದಿರಾಗಿದ್ದು, ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲೇ ನನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ. ಆ ದೂರಿನ ಆಧಾರದಲ್ಲಿ ಅರ್ಚನಾಳ ಅಣ್ಣಂದಿರು, ಅಪ್ಪ-ಅಮ್ಮನ ವಿರುದ್ಧ ಕೇಸ್ ದಾಖಲಿಸಿಕೊಂಡು, ಬಂಧಿಸಲಾಗಿದೆ.

ಇದನ್ನೂ ಓದಿ: Crime News: ಅಕ್ರಮ ಸಂಬಂಧ ತಂದ ಕಂಟಕ; ಹೆಂಡತಿಯ ಪ್ರಿಯಕರನ ಗುಪ್ತಾಂಗಕ್ಕೆ ಶೂಟ್ ಮಾಡಿದ ಗಂಡ!

Murder: ಇದು ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಕತೆ!; ಸೇಡಿಗಾಗಿ ಹನಿಮೂನ್​ನಲ್ಲೇ ಹೆಂಡತಿಯನ್ನು ಕೊಂದ ಗಂಡ

(Woman Brutally Murders by Her Brothers after Love Marriage near Police Station in Uttar Pradesh)

Published On - 7:31 pm, Thu, 29 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ