AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ತಮಿಳುನಾಡಿನಲ್ಲಿ ಐವರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಕುಡಿದ ಅಮಲಿನಲ್ಲಿ ತಾವಾಗೇ ಸಿಕ್ಕಿಬಿದ್ದ ಕಾಮುಕರು

Gang Rape: ಕುಡಿದ ಅಮಲಿನಲ್ಲಿ ಜಗಳವಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದಾಗ ಅವರು ಅತ್ಯಾಚಾರ ನಡೆಸಿರುವುದು ಪೊಲೀಸರಿಗೆ ಗೊತ್ತಾಗಿದೆ. ದರೋಡೆ ಮಾಡುವ ಮೊದಲು ಅವರು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದರು ಎಂದು ಅವರೇ ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ.

Crime News: ತಮಿಳುನಾಡಿನಲ್ಲಿ ಐವರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಕುಡಿದ ಅಮಲಿನಲ್ಲಿ ತಾವಾಗೇ ಸಿಕ್ಕಿಬಿದ್ದ ಕಾಮುಕರು
ಅತ್ಯಾಚಾರ
TV9 Web
| Updated By: ಸುಷ್ಮಾ ಚಕ್ರೆ|

Updated on: Mar 24, 2022 | 5:55 PM

Share

ವೆಲ್ಲೂರು: ವೆಲ್ಲೂರಿನಲ್ಲಿ ಮಹಿಳಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದವಳ ಮೇಲೆ ಸಾಮೂಹಿಕ ಅತ್ಯಾಚಾರ (Gang Rape) ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ನಾಲ್ವರನ್ನು ತಮಿಳುನಾಡು ಪೊಲೀಸರು (Tamil Nadu Police) ಬಂಧಿಸಿದ್ದಾರೆ. ಮಾರ್ಚ್ 17ರ ಬೆಳಗ್ಗೆ ಈ ಅತ್ಯಾಚಾರ ನಡೆದಿದೆ. ಸಂತ್ರಸ್ತೆ ಆರಂಭದಲ್ಲಿ ಪೊಲೀಸರನ್ನು ಸಂಪರ್ಕಿಸಲಿಲ್ಲ. ಆದರೆ, ಕುಡಿದ ಅಮಲಿನಲ್ಲಿ ಜಗಳವಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದಾಗ ಅವರು ಅತ್ಯಾಚಾರ ನಡೆಸಿರುವುದು ಪೊಲೀಸರಿಗೆ ಗೊತ್ತಾಗಿದೆ. ದರೋಡೆ ಮಾಡಲು ಹೋಗಿದ್ದ ಆ ಪುರುಷರು ಅದಕ್ಕೂ ಮೊದಲು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದರು ಎಂದು ಅವರು ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ.

ಮಾರ್ಚ್ 19ರಂದು ವೆಲ್ಲೂರಿನ ಸತುವಾಚಾರಿಯಲ್ಲಿ ಎಟಿಎಂ ಹೊರಗೆ ಇಬ್ಬರು ಆರೋಪಿಗಳ ನಡುವೆ ಕುಡಿದ ಅಮಲಿನಲ್ಲಿ ಜಗಳವಾಗುತ್ತಿತ್ತು. ಆಗ ಪೊಲೀಸರು ಮಧ್ಯ ಪ್ರವೇಶಿಸಿದರು. ಅವರಿಬ್ಬರನ್ನು ಸತುವಾಚಾರಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದು, ದರೋಡೆ ಮಾಡಿದ್ದಾರೆ ಎನ್ನಲಾದ 40,000 ರೂ.ಗಳನ್ನು ಹಂಚಿಕೆ ಮಾಡುವ ಬಗ್ಗೆ ಇಬ್ಬರೂ ಜಗಳವಾಡುತ್ತಿರುವುದು ತಿಳಿದುಬಂದಿದೆ. ಈ ಕುರಿತು ತನಿಖೆ ನಡೆಸಿದಾಗ ಅವರು ಅತ್ಯಾಚಾರ ನಡೆಸಿದ್ದಾಗಿ ಒಪ್ಪಿಕೊಂಡಿದ್ದನ್ನು ಕೇಳಿ ಪೊಲೀಸರು ಆಘಾತಕ್ಕೊಳಗಾದರು. ಈ ಕುರಿತು ಹೆಚ್ಚಿನ ವಿಚಾರಣೆ ನಡೆಸಿದಾಗ ಅವರಿಬ್ಬರೂ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವುದಾಗಿ, ನಂತರ ಆಕೆ ಹಾಗೂ ಆಕೆಯ ಪ್ರೇಮಿಯ ಬಳಿಯಿದ್ದ ಹಣವನ್ನು ದರೋಡೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ಸಿನಿಮಾ ವೀಕ್ಷಿಸಿ, ನಂತರ ಕೆಲಸ ಮಾಡುವ ಖಾಸಗಿ ಆಸ್ಪತ್ರೆಗೆ ಹಿಂತಿರುಗುತ್ತಿದ್ದರು. ಆಗ ಅವರಿಬ್ಬರು ಆಟೋವೊಂದನ್ನು ನಿಲ್ಲಿಸಿದ್ದು, ಅದರಲ್ಲಿ ಈಗಾಗಲೇ ಒಬ್ಬರು ಪ್ರಯಾಣಿಸುತ್ತಿದ್ದರು. ಆಟೋ ಚಾಲಕ ‘ಶೇರ್ ಆಟೊ’ ಎಂದು ಹೇಳಿಕೊಂಡಿದ್ದರಿಂದ ಆ ಆಟೋಗೆ ಹತ್ತಿಸಿ ಚಾಲಕನಿಗೆ ಸ್ಥಳ ತಿಳಿಸಿದ್ದಾರೆ. ಆದರೆ, ಆ ಆಟೋ ಬೇರೆ ಮಾರ್ಗದಲ್ಲಿ ಚಲಿಸಿತು. ಆಗ ದಾರಿಯಲ್ಲಿ ಬ್ಯಾರಿಕೇಡ್ ಹಾಕಿದ್ದರಿಂದ ಬೇರೆ ಮಾರ್ಗದಲ್ಲಿ ಬಂದಿದ್ದಾಗಿ ಚಾಲಕ ಹೇಳಿದ್ದ. ಆದರೆ, ಆಟೋ ಮತ್ತೆ ಬೇರೆಡೆ ತಿರುಗಿದಾಗ ಗಾಬರಿಯಾದ ಅವರಿಬ್ಬರೂ ಜೋರಾಗಿ ಕಿರುಚಾಡಿದ್ದಾರೆ. ಅಷ್ಟರಲ್ಲಿ ಅವರ ಮೇಲೆ ದಾಳಿ ಮಾಡಿ ಏಕಾಂತ ಸ್ಥಳಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಐವರು ಪುರುಷರು ಆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯ ಪ್ರಿಯಕರನನ್ನು ಹತ್ತಿರದ ಎಟಿಎಂಗೆ ಕರೆದೊಯ್ದು 40,000 ರೂ.ಗಳನ್ನು ಡ್ರಾ ಮಾಡುವಂತೆ ಹೆದರಿಸಿದ್ದಾರೆ. ನಂತರ ಮಹಿಳೆಯ ಮೊಬೈಲ್, ಚಿನ್ನಾಭರಣವನ್ನೂ ಕಿತ್ತುಕೊಂಡು ಅಲ್ಲಿಂದ ಅವರು ಓಡಿಹೋಗಿದ್ದಾರೆ.

ಅಚಾನಕ್ಕಾಗಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಅವರು ತಾವು ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ನಂತರ ದರೋಡೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ಇದರಿಂದ ಈ ಘಟನೆ ಬೆಳಕಿಗೆ ಬಂದಿದೆ. ಈ ಐದು ಆರೋಪಿಗಳಲ್ಲಿ ನಾಲ್ವರನ್ನು ತನಿಖಾ ತಂಡವು ಬಂಧಿಸಿದೆ ಎಂದು ತಮಿಳುನಾಡಿನ ಸಿಎಂ ಸ್ಟಾಲಿನ್ ಹೇಳಿದ್ದಾರೆ. ಬಂಧಿತ ಆರೋಪಿಗಳನ್ನು ಸಂತೋಷ್, ಮಣಿಕಂಠನ್ ಮತ್ತು ಇಬ್ಬರು ಅಪ್ರಾಪ್ತರು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Rape: ರೈಲಿಗಾಗಿ ಕಾಯುತ್ತಿರುವಾಗ ರೈಲ್ವೆ ಸ್ಟೇಷನ್​ನ ಶೌಚಾಲಯದಲ್ಲಿ ಯುವತಿ ಮೇಲೆ ಅತ್ಯಾಚಾರ!

Gang Rape: ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ; 14 ವರ್ಷದ ಬಾಲಕಿಯ ಶವ ಗೋಣಿಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?