AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಕೊಡಲಿಲ್ಲವೆಂದು ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿದ ಸೊಸೆಯ ಬಂಧನ

ಮಹಿಳೆಯೊಬ್ಬಳು ತನ್ನ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿರುವ ಘಟನೆ ಗುಜರಾತ್​ನ ಖೇಡಾದಲ್ಲಿ ನಡೆದಿದೆ. ವಿದೇಶಕ್ಕೆ ಹೋಗಲು 2 ಲಕ್ಷ ರೂ ಬೇಕೆಂದು ಮಹಿಳೆ ಕೇಳಿದ್ದಳು, ಆದರೆ ಮಾವ ಹಣ ನೀಡಲು ನಿರಾಕರಿಸಿದ್ದರು, ಕೋಪದಿಂದ ಸೊಸೆ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿ, ತಲೆಗೆ ಬಲವಾಗಿ ಹೊಡೆದಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಸೊಸೆ ತಪ್ಪೊಪ್ಪಿಕೊಂಡಿದ್ದು, 75 ವರ್ಷದ ಮೃತ ವ್ಯಕ್ತಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಅಕ್ರಮ ಸಂಬಂಧಕ್ಕೆ ಬದಲಾಗಿ ಹಣ ನೀಡುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಹಣ ಕೊಡಲಿಲ್ಲವೆಂದು ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿದ ಸೊಸೆಯ ಬಂಧನ
ಅಪರಾಧ
ನಯನಾ ರಾಜೀವ್
|

Updated on:Sep 10, 2023 | 9:50 AM

Share

ಮಹಿಳೆಯೊಬ್ಬಳು ತನ್ನ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿರುವ ಘಟನೆ ಗುಜರಾತ್​ನ ಖೇಡಾದಲ್ಲಿ ನಡೆದಿದೆ. ವಿದೇಶಕ್ಕೆ ಹೋಗಲು 2 ಲಕ್ಷ ರೂ ಬೇಕೆಂದು ಮಹಿಳೆ ಕೇಳಿದ್ದಳು, ಆದರೆ ಮಾವ ಹಣ ನೀಡಲು ನಿರಾಕರಿಸಿದ್ದರು, ಕೋಪದಿಂದ ಸೊಸೆ ಮಾವನನ್ನು ಹತ್ಯೆ ಮಾಡಿ ಗುಪ್ತಾಂಗವನ್ನು ಕತ್ತರಿಸಿ, ತಲೆಗೆ ಬಲವಾಗಿ ಹೊಡೆದಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಸೊಸೆ ತಪ್ಪೊಪ್ಪಿಕೊಂಡಿದ್ದು, 75 ವರ್ಷದ ಮೃತ ವ್ಯಕ್ತಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಅಕ್ರಮ ಸಂಬಂಧಕ್ಕೆ ಬದಲಾಗಿ ಹಣ ನೀಡುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ನಂತರ ತಾನು ಫೇಸ್‌ಬುಕ್‌ನಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿ ವಿದೇಶಕ್ಕೆ ಹೋಗಲು ಬಯಸಿದ್ದೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾಳೆ. ಆರೋಪಿ ಮಾವ ಬಳಿ ಹಣ ಕೇಳಿದ್ದಕ್ಕೆ ಹಣ ಕೊಡಲು ನಿರಾಕರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಮಾವನನ್ನು ಹತ್ಯೆ ಮಾಡಲು ಯೋಜನೆ ರೂಪಿಸಿದ್ದಳು.

ಸುಮಾರು ಮೂರು ದಿನಗಳಿಂದ ಮೃತರು ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ವಿಷಯ ಬೆಳಕಿಗೆ ಬಂದಿದೆ. ನಂತರ ಹಿರಿಯ ಮಗ ರಾಜಸ್ಥಾನದಲ್ಲಿರುವ ಅವರ ಸಂಬಂಧಿಕರ ಮನೆಗೆ ಹೋಗಿ ವಿಚಾರಿಸಿದ್ದ, ಆದರೆ ಆತ ಎಲ್ಲಿಯೂ ಪತ್ತೆಯಾಗಲಿಲ್ಲ. ಆದರೆ ಬಳಿಕ ಬಚ್ಚಲು ಮನೆಯ ಕೊಠಡಿಯೊಂದರಲ್ಲಿ ಶವ ಪತ್ತೆಯಾಗಿದೆ.

ಮತ್ತಷ್ಟು ಓದಿ: ಚಿತ್ರದುರ್ಗ: ಸ್ನೇಹಿತನನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಪ್ರಯತ್ನ; ಆರೋಪಿಗಳು ಸಿಕ್ಕಿಬಿದ್ದಿದ್ದೆ ರೋಚಕ

ಡಾಕೋರ್ ನಗರದೊಳಗಿನ ಭಗತ್ ಜಿ ಕಾಲೋನಿ ಕರ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಜಗದೀಶ್ ಶರ್ಮಾ ಅವರ ಮೃತ ದೇಹವು ಸೆಪ್ಟೆಂಬರ್ 5 ರಂದು ಪತ್ತೆಯಾಗಿದೆ.

ಮೃತ ದೇಹವು ಕೊಳೆತ ಸ್ಥಿತಿಯಲ್ಲಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ತಲೆಗೆ ಗಟ್ಟಿಯಾದ ವಸ್ತುವಿನಿಂದ ಹಲ್ಲೆ ಮಾಡಲಾಗಿದೆ. ಅವರ ದೇಹದ ಇತರೆ ಭಾಗಗಳಲ್ಲಿ ಗಾಯದ ಗುರುತುಗಳಿವೆ ಎಂಬುದು ತಿಳಿದುಬಂದಿದೆ. ವಿಷಯದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:45 am, Sun, 10 September 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ