Crime News: ಗಂಡನ ಮೇಲಿನ ಕೋಪಕ್ಕೆ 11 ತಿಂಗಳ ಕಂದಮ್ಮನ ಉಸಿರುಗಟ್ಟಿಸಿ ಕೊಂದ ತಾಯಿ!

Murder News: ಗಂಡನ ಮೇಲಿನ ಕೋಪವನ್ನು ಮಗುವಿನ ಮೇಲೆ ತೋರಿಸಿದ ಆಕೆ ನೀನು ನನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದಿದ್ದರೆ ನಾನೇ ಕೊಂದು ಹಾಕುತ್ತೇನೆ ಎಂದು ಮಗುವಿನ ಕುತ್ತಿಗೆಯನ್ನು ತನ್ನ ದುಪ್ಪಟ್ಟಾದಿಂದ ಸುತ್ತಿದ್ದಾಳೆ.

Crime News: ಗಂಡನ ಮೇಲಿನ ಕೋಪಕ್ಕೆ 11 ತಿಂಗಳ ಕಂದಮ್ಮನ ಉಸಿರುಗಟ್ಟಿಸಿ ಕೊಂದ ತಾಯಿ!
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 11, 2021 | 6:49 PM

ನವದೆಹಲಿ: ಗಂಡ- ಹೆಂಡತಿ ಜಗಳ ಉಂಡು ಮಲಗೋವರೆಗೆ ಎಂಬ ಗಾದೆ ಮಾತಿದೆ. ಆದರೆ, ಇಲ್ಲೊಂದು ದಂಪತಿಯ ಜಗಳದಿಂದ 11 ತಿಂಗಳ ಹಸುಗೂಸೊಂದು ಪ್ರಾಣ ಕಳೆದುಕೊಂಡಿದೆ. ದಕ್ಷಿಣ ದೆಹಲಿಯಲ್ಲಿ ತನ್ನ ಗಂಡನ ಜೊತೆ ಜಗಳವಾಡಿಕೊಂಡ ಮಹಿಳೆಯೊಬ್ಬಳು ಕೋಪದಿಂದ ತನ್ನ ಮಗುವಿನ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ.

ದೆಹಲಿಯ ಬಳಿ ಇರುವ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಮಗುವನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮಗು ಸಾವನ್ನಪ್ಪಿತ್ತು. ಮಗುವಿನ ಸಾವಿಗೆ ನೀನೇ ಕಾರಣ ಎಂದು ಆಸ್ಪತ್ರೆಯ ಎದುರಲ್ಲೇ ತಂದೆ-ತಾಯಿಯಿಬ್ಬರೂ ಜಗಳವಾಡಿ, ಹೊಡೆದಾಡಿಕೊಂಡ ಘಟನೆಯೂ ನಡೆದಿದೆ.

ಏನಿದು ಘಟನೆ?: ಈ ದಂಪತಿಯ 11 ತಿಂಗಳ ಗಂಡು ಮಗುವಿಗೆ ಬಹಳ ಜ್ವರವಿತ್ತು. ಆ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಮಗುವಿನ ತಾಯಿ ತನ್ನ ಗಂಡನಿಗೆ ಹೇಳಿದ್ದಳು. ಆದರೆ, ಆತ ತನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಧ್ಯವಿಲ್ಲ ಎಂದು ಹೆಂಡತಿಯೊಂದಿಗೆ ಜಗಳವಾಡಿದ್ದ. ಅವರಿಬ್ಬರ ಜಗಳದ ನಡುವೆ ಮಗುವಿನ ಅನಾರೋಗ್ಯದ ವಿಚಾರವನ್ನೇ ಮರೆತು ಇಬ್ಬರೂ ಕಿತ್ತಾಡಿದ್ದಾರೆ. ಗಂಡನ ಮೇಲಿನ ಕೋಪವನ್ನು ಮಗುವಿನ ಮೇಲೆ ತೋರಿಸಿದ ಆಕೆ ನೀನು ನನ್ನ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದಿದ್ದರೆ ನಾನೇ ಕೊಂದು ಹಾಕುತ್ತೇನೆ ಎಂದು ಮಗುವಿನ ಕುತ್ತಿಗೆಯನ್ನು ತನ್ನ ದುಪ್ಪಟ್ಟಾದಿಂದ ಸುತ್ತಿದ್ದಾಳೆ. ಹೀಗಾಗಿ, ಉಸಿರಾಟದ ತೊಂದರೆಯಿಂದ ಮಗು ಪ್ರಾಣ ಬಿಟ್ಟಿದೆ.

ಮಗುವಿನ ತಾಯಿ 26 ವರ್ಷದ ಜ್ಯೋತಿ ಹಾಗೂ ಆಕೆಯ ಗಂಡನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರೆದುರು ತಪ್ಪೊಪ್ಪಿಕೊಂಡಿರುವ ಜ್ಯೋತಿ, ನನ್ನ ಗಂಡನಿಗೆ ನನ್ನ ಮೇಲೆ ಪ್ರೀತಿ ಇರಲಿಲ್ಲ. ದಿನವೂ ಮನೆಗೆ ಬಂದು ಜಗಳವಾಡುತ್ತಿದ್ದ. ನನ್ನ ಮಗುವನ್ನೂ ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ ಎಂದು ಜ್ಯೋತಿ ಆರೋಪಿಸಿದ್ದಾಳೆ.

ಇನ್ನು, ಜ್ಯೋತಿಯ ತಂದೆ-ತಾಯಿ ಆ ಮಗುವನ್ನು ಜ್ಯೋತಿಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಮೃತ ಮಗುವಿನ ತಂದೆ ಅಲ್ಲಗಳೆದಿದ್ದಾನೆ. ಆ ಗ್ರಾಮದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Crime News: ಬಾಯ್​ಫ್ರೆಂಡ್​ನನ್ನು ಕೆಲಸದಿಂದ ಕಿತ್ತೊಗೆದ ಕಂಪನಿಗೆ ಗರ್ಲ್​ಫ್ರೆಂಡ್ ಮಾಡಿದ್ದೇನು ಗೊತ್ತಾ?

ಇದನ್ನೂ ಓದಿ: Bengaluru Crime: ಆಟವಾಡಲು ಪಕ್ಕದ ಮನೆಗೆ ಹೋಗಿದ್ದೇ ತಪ್ಪಾಯ್ತು; ಮಗಳನ್ನು ಹೊಡೆದು, ಕ್ಯಾಂಡಲ್​ನಿಂದ ಕೈ ಸುಟ್ಟ ತಾಯಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್