Yadagiri Gang Rape: ಯಾದಗಿರಿಯಲ್ಲಿ ದೇವಸ್ಥಾನದಿಂದ ಬರುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
Crime News | ಆಗಸ್ಟ್ 8ರಂದು ದೇವಸ್ಥಾನದಿಂದ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯನ್ನು ಅಡ್ಡ ಹಾಕಿದ ಆರೋಪಿಗಳು ಯಾದಗಿರಿ- ಶಹಾಪುರ ಮಾರ್ಗದ ಮಧ್ಯೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಯಾದಗಿರಿ: ಕೊವಿಡ್ ಅಟ್ಟಹಾಸದ ನಡುವೆಯೂ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಿಲ್ಲ. ಕೊಲೆ, ದರೋಡೆ, ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಲೇ ಇವೆ. ಈ ನಡುವೆ ಯಾದಗಿರಿಯಲ್ಲಿ ಹಾಡಹಗಲೇ 45 ವರ್ಷದ ಮಹಿಳೆಯನ್ನು ಹೊತ್ತೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆಯೊಂದು ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಕುಡಿತದ ಅಮಲಿನಲ್ಲಿದ್ದ ಆಟೋ ಚಾಲಕ ಸೇರಿ ಇಬ್ಬರಿಂದ ಈ ಕೃತ್ಯ ನಡೆದಿದೆ.
ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿದ ಕಾಮುಕರು ಆಕೆಯನ್ನು ಎಳೆದೊಯ್ದು ಅತ್ಯಾಚಾರ ನಡೆಸಿದ್ದಾರೆ. ಆಗಸ್ಟ್ 8ರಂದು ದೇವಸ್ಥಾನದಿಂದ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯನ್ನು ಅಡ್ಡ ಹಾಕಿದ ಆರೋಪಿಗಳು ಯಾದಗಿರಿ- ಶಹಾಪುರ ಮಾರ್ಗದ ಮಧ್ಯೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ಈ ಬಗ್ಗೆ ಶಹಾಪುರ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾರೆ. ರಾಜು (21), ವೀರೇಶ್ (25) ಬಂಧಿತ ಆರೋಪಿಗಳಾಗಿದ್ದಾರೆ. ಕಂಠಪೂರ್ತಿ ಕುಡಿದಿದ್ದ ಕಾಮುಕರು ಆಟೋದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆ. ಈ ಕೃತ್ಯಕ್ಕೆ ಬಳಸಿದ್ದ ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ
Crime News: ಅಕ್ರಮ ಸಂಬಂಧ ತಂದ ಕಂಟಕ; ಹೆಂಡತಿಯ ಪ್ರಿಯಕರನ ಗುಪ್ತಾಂಗಕ್ಕೆ ಶೂಟ್ ಮಾಡಿದ ಗಂಡ!
(Yadagiri Woman Gang Raped by Drunken Men while Returning from Temple)
Published On - 3:56 pm, Tue, 10 August 21