ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ಆತ್ಮಹತ್ಯೆ ಶಂಕೆ
ಬೆಂಗಳೂರು ನಗರದ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸ್ಯಾಂಕಿ ಕೆರೆಯಲ್ಲಿ ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಫೆಬ್ರವರಿ 14: ನಗರದ ಸ್ಯಾಂಕಿ ಕೆರೆಯಲ್ಲಿ ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆ (dead body) ಆಗಿರುವಂತಹ ಘಟನೆ ನಡೆದಿದೆ. ಸ್ಯಾಂಕಿ ಕೆರೆಯಲ್ಲಿ ತೆಲುತ್ತಿದ್ದ ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಕಂಡು ಕೂಡಲೇ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಬಳ್ಳಾರಿಯ ರಾಜೋತ್ಸವ ನಗರದಲ್ಲಿ ರಸ್ತೆ ಬದಿಯ ಚರಂಡಿಯಲ್ಲಿ 2 ದಿನದ ಹಿಂದೆ ಜನನವಾಗಿದ್ದ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಚರಂಡಿಯಲ್ಲಿದ್ದ ಶಿಶುವಿನ ಮೃತದೇಹವನ್ನು ಸ್ಥಳೀಯ ನಿವಾಸಿಗಳು ಹೊರತೆಗೆದಿದ್ದಾರೆ. ಸ್ಥಳಕ್ಕೆ ಬ್ರೂಸ್‌ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಡಿವೈಡರ್ಗೆ ಬೈಕ್ ಡಿಕ್ಕಿ: ಹಿಂಬದಿ ಸವಾರ ಸ್ಥಳದಲ್ಲೇ ದುರ್ಮರಣ
ದೇವನಹಳ್ಳಿ: ಮುಂದೆ ಚಲಿಸುತ್ತಿದ್ದ ವಾಹನ ತಪ್ಪಿಸಲು ಹೋಗಿ ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ನ ಹಿಂಬದಿ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಏರ್ಪೋಟ್ ರಸ್ತೆಯ ಕನ್ನಮಂಗಲ ಪಾಳ್ಯ ಗೇಟ್ ಪಾಳ್ಯ ಗೇಟ್ ಬಳಿ ನಡೆದಿದೆ. ದೆಹಲಿ ಮೂಲಕ ಕರಣ್ ಅಗರವಾಲ್ (24) ಮೃತ ವ್ಯಕ್ತಿ. ಬೈಕ್ ಸವಾರ ಪಂಜಾಬ್ ಮೂಲದ ಅರಮಂಜಿತ್ ಸಿಂಗ್ (24)ಗೆ ಗಂಭೀರ ಗಾಯಗಳಾಗಿದ್ದು ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇಬ್ಬರು ಸಾಪ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದಾರೆ.
ಇದನ್ನೂ ಓದಿ: ಬೆಳಗಾವಿಯ ನಾಲ್ವರು ಪೊಲೀಸರ ಕರ್ತವ್ಯ ಪ್ರಜ್ಞೆ, ಕೆಲಸಕ್ಕೆ ಇಡೀ ಪೊಲೀಸ್ ಇಲಾಖೆ, ಕೋರ್ಟ್ ಅಪಾರ ಮೆಚ್ಚುಗೆ! ಏನದು ಪ್ರಕರಣ?
ಬೆಳಗ್ಗೆ ನಂದಿಬೆಟ್ಟಕ್ಕೆ ತೆರಳಿ ವಾಪಸ್ ಬೆಂಗಳೂರಿಗೆ ಬರುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸ್ಥಳಕ್ಕೆ ಏರ್ಪೋಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಬೈಕ್‌ಗೆ ಗೂಡ್ಸ್ ಟೆಂಪೋ ಡಿಕ್ಕಿ: ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವು
ಚಾಮರಾಜನಗರ: ಬೈಕ್‌ಗೆ ಗೂಡ್ಸ್ ಟೆಂಪೋ ಡಿಕ್ಕಿಯಾಗಿದ್ದು, ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಾಮರಾಜನಗರದ ಸೋಮವಾರಪೇಟೆ ಬೈಪಾಸ್ ಬಳಿ ನಡೆದಿದೆ. ಯಳಂದೂರು ತಾಲ್ಲೂಕು ಕಂದಹಳ್ಳಿಯ ಅನಿತಾ(30) ಮೃತ ಮಹಿಳೆ.
ಇದನ್ನೂ ಓದಿ: ಉಡುಪಿ ನಾಲ್ವರ ಹತ್ಯೆ ಪ್ರಕರಣ: ಹತ್ಯೆಗೆ ನಿಖರ ಕಾರಣ ಬಿಚ್ಚಿಟ್ಟ ಹಂತಕ ಪ್ರವೀಣ, ಭಯಾನಕ ಸಂಗತಿಗಳು ಬಹಿರಂಗ
ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಗೂಡ್ಸ್ ಟೆಂಪೋ ಉರುಳಿಬಿದಿದ್ದೆ. ಚಾಮರಾಜನಗರ ಟೌನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಗ್ರಾಮದ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಎರಡು ಕಾರುಗಳು ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್ ಹಾರಿ ಎದುರಿಗೆ ಬಂದ ಮತ್ತೊಂದು ಶಿಫ್ಟ್ ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:25 pm, Wed, 14 February 24