ಗಂಗಾವತಿಯಲ್ಲಿ ಭೀಕರ ಮರ್ಡರ್: ಕೊಲೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನನ್ನು ಭೀಕರವಾಗಿ ಕೊಚ್ಚಿ ದುಷ್ಕರ್ಮಿಗಳ ತಂಡ ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ನಗರದ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಮುಂದೆಯೇ ಮರ್ಡರ್ ಮಾಡಲಾಗಿದ್ದು, ಘಟನೆಯ ಭೀಕರ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಕೊಪ್ಪಳ, ಅಕ್ಟೋಬರ್ 8: ಬೈಕ್ನಲ್ಲಿ ಬರುತ್ತಿದ್ದ ಗಂಗಾವತಿ ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷನನ್ನು ಭೀಕರ ಹತ್ಯೆ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೊದಲು ಕಾರಿನಿಂದ ಗುದ್ದುವ ದುಷ್ಕರ್ಮಿಗಳು, ಬಳಿಕ ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ದಾಳಿಮಾಡಿರೋದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಸ್ನೇಹಿತರೊಟ್ಟಿಗೆ ಊಟ ಮಾಡಿ ದೇವಿಕ್ಯಾಂಪ್ನಿಂದ ಗಂಗಾವತಿ ಕಡೆಗೆ ವೆಂಕಟೇಶ್ ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಲೀಲಾವತಿ ಎಲುಬು ಕೀಲು ಆಸ್ಪತ್ರೆಯ ಬಳಿ ತಲುಪುತ್ತಿದ್ದಂತೆ ದುರುಳರು ಅಟ್ಟಹಾಸ ಮೆರೆದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 08, 2025 12:33 PM