ಸಾಲ ಕೊಡಿಸುವ ನೆಪದಲ್ಲಿ ಲಕ್ಷ ಲಕ್ಷ ವಂಚನೆ ಮಾಡ್ತಿದ್ದ ಐನಾತಿ ಗ್ಯಾಂಗ್ ಅಂದರ್
ಬೆಂಗಳೂರು: ₹33 ಕೋಟಿ ಲೋನ್ ಕೊಡಿಸೊದಾಗಿ ಲಕ್ಷ ಲಕ್ಷ ಹಣ ವಂಚನೆ ಮಾಡಿದ್ದ ನಟೋರಿಯಸ್ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ವಂಚನೆ ಮಾಹಿತಿ ಬೆಳಕಿಗೆ ಬಂದಿದೆ. ಮಹಿಳೆಗೆ ಸಾಲ ಕೊಡಿಸುವುದಾಗಿ ಹೇಳಿ 3 ಆರೋಪಿಗಳು ₹3 ಲಕ್ಷ ವಂಚನೆ ಮಾಡುದ್ರು. ಈ ವಿಚಾರ ಸಂಬಂಧಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ರು. ಈ ಹಿನ್ನೆಲೆ 2 ದಿನದ ಹಿಂದೆ ಆರೋಪಿಗಳ ಸೆರೆ ಹಿಡಿಯಲಾಗಿದೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಾರು ಹತ್ತಿಸಿ […]
ಬೆಂಗಳೂರು: ₹33 ಕೋಟಿ ಲೋನ್ ಕೊಡಿಸೊದಾಗಿ ಲಕ್ಷ ಲಕ್ಷ ಹಣ ವಂಚನೆ ಮಾಡಿದ್ದ ನಟೋರಿಯಸ್ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ವಂಚನೆ ಮಾಹಿತಿ ಬೆಳಕಿಗೆ ಬಂದಿದೆ. ಮಹಿಳೆಗೆ ಸಾಲ ಕೊಡಿಸುವುದಾಗಿ ಹೇಳಿ 3 ಆರೋಪಿಗಳು ₹3 ಲಕ್ಷ ವಂಚನೆ ಮಾಡುದ್ರು.
ಈ ವಿಚಾರ ಸಂಬಂಧಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ರು. ಈ ಹಿನ್ನೆಲೆ 2 ದಿನದ ಹಿಂದೆ ಆರೋಪಿಗಳ ಸೆರೆ ಹಿಡಿಯಲಾಗಿದೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ASI ಹನುಮಂತರಾಜ್ ಹತ್ಯೆಗೆ ಯತ್ನ ನಡೆದಿದೆ.
ಗಾಯಾಳು ಪೇದೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಚೇಸ್ ಮಾಡಿ ಕೇರಳ ಮೂಲದ ಎಂ. ಶರೂನ್, ರಿಬಿನ್, ಸೈಯದ್ ಅಹ್ಮದ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ದೂರು ಸಂಬಂಧಿಸಿ ವಿಚಾರಣೆ ವೇಳೆ ಪೊಲೀಸರಿಗೆ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.
33 ಕೋಟಿ ಹಣ ಸಾಲ ಕೊಡಿಸುವುವಾಗಿ ಹೇಳಿ ₹26 ಲಕ್ಷ ಹಣ ಪಡೆದು ವಂಚಿಸಿದ್ದರು. ಎರಡು ಪ್ರಕರಣಗಳ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದೇ ರೀತಿ ಮತ್ತಷ್ಟು ಜನರಿಂದ ಲಕ್ಷಾಂತರ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆಯೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Published On - 8:11 am, Mon, 16 December 19