ಸೈಬರ್​​​ ಕ್ರೈಂ: ಒಂದೇ ತಿಂಗಳಲ್ಲಿ 1 ಕೋಟಿ ರೂ. ಕಳೆದುಕೊಂಡ ಬೆಳಗಾವಿಯ ಮೂವರು

ನಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುತ್ತೇವೆ ಮತ್ತು ವರ್ಕ್ ​ಫ್ರಂ ಹೋಮ್​ ಆಸೆ ತೋರಿಸಿ ಬೆಳಗಾವಿಯ ಉದ್ಯಮಿಗಳಿಂದ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿಸಿಕೊಂಡು ವಂಚಿಸಲಾಗಿದೆ. ವಂಚನೆಗೊಳಗಾದ ಮೂವರು ಬೆಳಗಾವಿ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸೈಬರ್​​​ ಕ್ರೈಂ: ಒಂದೇ ತಿಂಗಳಲ್ಲಿ 1 ಕೋಟಿ ರೂ. ಕಳೆದುಕೊಂಡ ಬೆಳಗಾವಿಯ ಮೂವರು
ಎಸ್​​ಪಿ ಡಾ. ಭೀಮಾಶಂಕರ್ ‌ಗುಳೇದ್
Follow us
Sahadev Mane
| Updated By: ವಿವೇಕ ಬಿರಾದಾರ

Updated on: Feb 14, 2024 | 10:52 AM

ಬೆಳಗಾವಿ, ಫೆಬ್ರವರಿ 14: ಒಂದೇ ತಿಂಗಳಲ್ಲಿ ನಡೆದ ಮೂರು ಪ್ರತ್ಯೇಕ ಸೈಬರ್​ ಕ್ರೈಂ (Cyber Crime) ಪ್ರಕರಣಗಳಲ್ಲಿ ಬೆಳಗಾವಿಯ (Belagavi) ಮೂವರು ವ್ಯಕ್ತಿಗಳು ಒಟ್ಟು 1.53 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಗೋಕಾಕ್ (Gokak) ಮೂಲದ ಉದ್ಯಮಿ ಬಾಬುರಾವ್‌ ಅವರಿಗೆ ಯಾರೋ ಟ್ರೇಡಿಂಗ್‌ನಲ್ಲಿ ಒಳ್ಳೆಯ ‌ಲಾಭ ಬರುತ್ತದೆ ಎಂದು ಹೇಳಿದ್ದಾರೆ. ಇದನ್ನು ನಂಬಿದ ಬಾಬುರಾವ್​ ಅವರು ಟ್ರೇಡಿಂಗ್ ‌ಮಾಡುವವರ ಪರಿಚಯ ಮಾಡಿಕೊಳ್ಳಲು ಟೆಲಿಗ್ರಾಂ‌ (Telegram) ಆ್ಯಪ್‌ನಲ್ಲಿ ಸರ್ಚ್ ಮಾಡಲು ಆರಂಭಿಸಿದ್ದಾರೆ. ಆಗ ಟೆಲಿಗ್ರಾಂ‌ಂನಲ್ಲಿ ಬಾಬುರಾವ್‌ ಅವರಿಗೆ ವಂಚಕರು ಪರಿಚಯ ಆಗಿದ್ದಾರೆ. ನಂತರ ಬಾಬುರಾವ್​ ಅವರು ವಂಚಕರ ವಾಟ್ಸಪ್ ಗ್ರೂಪ್‌ಗೆ ಸೇರಿದ್ದಾರೆ.

ವಂಚಕರ ಸಲಹೆಯಂತೆ ಉದ್ಯಮಿ ಬಾಬುರಾವ್​ ಕೆಕೆಆರ್‌ಎಂಎಫ್‌ ವೆಬ್ಸೈಟ್‌ನಲ್ಲಿ ಪ್ರೊಫೈಲ್‌ ಕ್ರಿಯೆಟ್‌ ಮಾಡಿದ್ದಾರೆ. ನಂತರ ಇದರಲ್ಲಿ ಹಣ ಹೂಡಿಕೆ‌ ಮಾಡಿದ್ದಾರೆ. ಹೀಗೆ 27.50 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದು, ವಂಚಕರು ಹಣಪಡೆದು ನಾಟ್​ರೀಚೆಬಲ್​ ಆಗಿದ್ದಾರೆ. ಹಣ ಕಳೆದುಕೊಂಡ ಬಾಬುರಾವ್ ಇದೀಗ ಸಿಇಎನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನು ಚಿಕ್ಕೋಡಿ ‌ತಾಲೂಕಿನ‌ ಕೆರೂರು ಗ್ರಾಮದ ಚಿದಾನಂದ್​ ಅವರು ಕೂಡ 58.34 ಲಕ್ಷ ರೂ. ಹಣ ಕಳೆದುಕೊಂಡಿದ್ದಾರೆ. ಚಿದಾನಂದ್ ಪ್ರತಿಷ್ಠಿತ ‌ಕಂಪನಿಯಲ್ಲಿ ಪ್ರೊಗ್ರಾಂ ಅಸೋಸಿಯೇಟ್ ಆಗಿ ಕೆಲಸ ಮಾಡುತ್ತಿದ್ದಾರೆ. ವಂಚಕರು ವಾಟ್ಸಪ್ ಮೂಲಕ ಅನೌನ್ ನಂಬರ್‌ನಿಂದ ಚಿದಾನಂದ್​ ಅವರಿಗೆ ಸಂಪರ್ಕಿಸಿದ್ದಾರೆ. ವಂಚಕರು ಚಿದಾನಂದ್​ ಅವರಿಗೆ ಅಡೆಪ್ಟೆಡ್ ಸೊಶಿಯಲ್ ಮಿಡಿಯಾ ಮಾರ್ಕೆಟಿಂಗ್ ಕಂಪನಿಯಲ್ಲಿ ಕೆಲಸ ನೀಡುತ್ತೇವೆ, ಅದು ಕೂಡ ವರ್ಕ್ ಫ್ರಮ್‌ ಹೋಮ್ ಸೌಲಭ್ಯ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವರ್ಕ್ ಫ್ರಂ ಹೋಂ ಕೆಲಸ ನೀಡೋದಾಗಿ ಸಾವಿರಾರು ಜನರನ್ನು ನಂಬಿಸಿ 158 ಕೋಟಿ ವಂಚನೆ ಮಾಡಿದ್ದ ದೊಡ್ಡ ಗ್ಯಾಂಗ್ ಅರೆಸ್ಟ್

ಈ ಕೆಲಸ ಪಡೆಯಲು ಹಣ ಹೂಡಿಕೆ ಮಾಡುವಂತೆ ಹೇಳಿದ್ದಾರೆ. ಇದಕ್ಕೂ ಮೊದಲು ವಂಚಕರು ಚಿದಾನಂದ್ ಅವರ​ ಕೆವಿಜಿ ಬ್ಯಾಂಕ್ ಅಕೌಂಟಿಗೆ 210ರೂ ಹಣ ಹಾಕಿದ್ದಾರೆ. ನಂತರ‌ ಪ್ರೊಫೈಲ್ ‌ಕ್ರಿಯೆಟ್ ಮಾಡಿಸಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ‌ಲಾಭ ಬರುತ್ತೆ ಎಂದು ವಂಚಕರು ಚಿದಾನಂದ್​ ಅವರಿಗೆ ನಂಬಿಸಿದ್ದಾರೆ. ಅದರಂತೆ ಚಿದಾನಂದ್​ ಒಂದು ಸಾವಿರ ಜಮಾ‌ ಮಾಡಿದ್ದಾರೆ. ಬಳಿಕ ವಂಚಕರು ಚಿದಾನಂದ‌ ಅವರಿಗೆ 1400 ರೂ‌. ರಿಟರ್ನ್ ನೀಡಿದ್ದಾರೆ.

ಹೆಚ್ಚಿನ ‌ಲಾಭದ‌ ಆಸೆಗೆ ಚಿದಾನಂದ್​ ‌58.34 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದು, ವಂಚಕರು ಹಣ ಪಡೆದು ಪರಾರಿಯಾಗಿದ್ದಾರೆ. ಚಿದಾನಂದ್​​ ಅವರಂತೆ ಶಿವಾನಂದ್​ ಎಂಬುವರು ಕೂಡ ಹಣ ಕಳೆದುಕೊಂಡಿದ್ದಾರೆ. ಮೂವರು ಬೆಳಗಾವಿ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಷೇರು ಮಾರುಕಟ್ಟೆ ಹೂಡಿಕೆ: ವಾಟ್ಸ್​ಆ್ಯಪ್, ಟೆಲಿಗ್ರಾಂ ಗ್ರೂಪ್​​ಗಳ ಮೂಲಕ ಭಾರೀ ವಂಚನೆ, ಇರಲಿ ಎಚ್ಚರ

ಪ್ರಕರಣ ಸಂಬಂಧ ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (SP) ಡಾ. ಭೀಮಾಶಂಕರ್ ‌ಗುಳೇದ್ ಮಾತನಾಡಿ, ಸಾಮಾಜಿಕ ‌ಜಾಲತಾಣ ಬಳಸಿ ಮೂವರು ಒಂದೇ ತಿಂಗಳಲ್ಲಿ 1.53 ಕೋಟಿ ಹಣ ಕಳೆದುಕೊಂಡಿದ್ದಾರೆ. ಮೂರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಕಳೆದುಕೊಂಡ ಹಣದ ಪೈಕಿ ನಲವತ್ತು ಲಕ್ಷ ಹಣ ಫ್ರೀಜ್ ಮಾಡಿದ್ದೇವೆ. ಉಳಿದ ಹಣ ಮರಳಿ ಪಡೆಯಲು ಸಿಬ್ಬಂದಿ ಪ್ರಯತ್ನ ಮಾಡ್ತಿದ್ದಾರೆ. ಹೆಚ್ಚಿನ ಲಾಭದ ಆಮಿಷ ಒಡ್ಡಿ ಸೈಬರ್ ವಂಚಕರು ಮೂವರಿಗೂ ಪಂಗನಾಮ ಹಾಕಿದ್ದಾರೆ ಎಂದು ತಿಳಿಸಿದರು.

ಒಂದೇ ದಿನದಲ್ಲಿ ಹೆಚ್ಚಿನ ಲಾಭ ಕೊಡಲು ಯಾವ ಕಂಪನಿಗಳಿಂದ ‌ಸಾಧ್ಯವಿಲ್ಲ. ಸಾರ್ವಜನಿಕರು‌ ಈ ಸಂಗತಿಯನ್ನು ‌ಮೊದಲು ಮನವರಿಕೆ ‌ಮಾಡಿಕೊಳ್ಳಬೇಕು. ಸೈಬರ್ ವಂಚಕರ ಮೂಲ, ನೆಲೆ ಕಂಡುಹಿಡಿಯುವುದು ಕಷ್ಟ, ಇಂಥ‌ ಆಸೆ- ಆಮಿಷಗಳಿಗೆ ಜನ ಒಳಗಾಗಬಾರದು. ಒಂದು ವೇಳೆ ಹಣ ಕಳೆದುಕೊಂಡರು ತಕ್ಷಣವೇ ಕಂಟ್ರೋಲ್ ರೂಂ‌ ‌1930 ನಂಬರ್‌ಗೆ ಕರೆ ಮಾಡಿ ಮಾಡಬೇಕು. ಹಣ‌ ಕಳೆದುಕೊಂಡು ಬಹಳ‌ ದಿನಗಳ ಬಳಿಕ ದೂರು‌ ನೀಡಲು ಬಂದರೆ ರಿಕವರಿ ಕಷ್ಟವಾಗುತ್ತೆ. ಆದಷ್ಟು ‌ಬೇಗ ಬಂದು ದೂರು‌ ನೀಡಿದರೆ ವಂಚಕರ ಅಕೌಂಟ್ ಪ್ರೀಜ್‌ ಮಾಡಲು ಸಾಧ್ಯವಾಗುತ್ತದೆ. ಇಲ್ಲವಾದರೆ ವಂಚಕರು ಹಣ ವಿಥ್ ಡ್ರಾ ಮಾಡಿಕೊಂಡು ಯಾರ ಸಂಪರ್ಕಕ್ಕೂ ಸಿಗಲ್ಲ. ಸಾಮಾಜಿಕ ‌ಜಾಲತಾಣಗಳಲ್ಲಿ ಬರುವ ಜಾಹೀರಾತು, ಆಮಿಷಗಳಿಗೆ ಯಾರೂ ಒಳಗಾಗಬಾರದು ಎಂದು ಸಾರ್ವಜನಿಕರಲ್ಲಿ‌‌ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್