ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ

ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ. ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಬೆಂಗಳೂರಿನ ಹೆಚ್​ಎಎಲ್​ ಲೇಔಟ್​ ನಿವಾಸಿಗೆ ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಲಾಗಿದೆ.

ಸೈಬರ್​ ಕ್ರೈಂ: ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ದೆಹಲಿ ಪೊಲೀಸರ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ
ಸೈಬರ್​ ಕ್ರೈಂ
Follow us
Jagadisha B
| Updated By: ವಿವೇಕ ಬಿರಾದಾರ

Updated on:Sep 12, 2023 | 7:24 AM

ಬೆಂಗಳೂರು: ಇತ್ತೀಚಿಗೆ ನಗರದಲ್ಲಿ ಸೈಬರ್​ ಕ್ರೈಂ (Cyber Crime) ಪ್ರಕರಣಗಳು ಹೆಚ್ಚುತ್ತಿವೆ. ಮೊಬೈಲ್​, ಸಿಸ್ಟಮ್​ ಹ್ಯಾಕ್​ ಅಥವಾ ಕರೆ ಮಾಡಿ ನಿಮ್ಮ ವೈಯಕ್ತಿ ದಾಖಲೆಗಳ ಮಾಹಿತಿ ಪಡೆದು ವಂಚಿಸುತ್ತಿರುವ ಸಂಖ್ಯೆ ಹೆಚ್ಚಿತ್ತಿದೆ. ಈ ಬಗ್ಗೆ ಪೊಲೀಸ್​ ಇಲಾಖೆ ಕ್ರಮಕೈಗೊಳ್ಳುತ್ತಿದೆ ಮತ್ತು ಸಾರ್ವಜನಿಕರಲ್ಲೂ ಅರಿವು ಮೂಡಿಸುತ್ತಿದೆ. ಇದೀಗ ಮತ್ತೊಂದು ಸೈಬರ್​ ಕ್ರೈಂ ಪ್ರಕರಣ ಬೆಳಕಿಗೆ ಬಂದಿದೆ. ದೆಹಲಿ ಪೊಲೀಸರ (Delhi Police) ಹೆಸರಿನಲ್ಲಿ ಕರೆ ಮಾಡಿ 54 ಸಾವಿರ ರೂ. ಹಣ ನೀಡುವಂತೆ ಬೆದರಿಕೆ ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

2023ರ ಆಗಸ್ಟ್​​ 17 ಮತ್ತು 18 ರಂದು ರಾಜು ತಿವಾರಿ ಎಂಬಾತ ನಗರದ ಹೆಚ್​ಎಎಲ್​ ಲೇಔಟ್​​​ ನಿವಾಸಿಯಾದ ಪ್ರೋಮಿತ್ ಮೌಲಿಕ್ ಅವರಿಗೆ ಕರೆ ಮಾಡಿ ನಾನು (ರಾಜು ತಿವಾರಿ) ದೆಹಲಿ ಪೊಲೀಸ್, ನಿಮ್ಮ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಾಗಿದೆ ಎಂದು ಹೆದರಿಸುತ್ತಾನೆ. ನಂತರ ನಿಮ್ಮನ್ನು ಹಾಗೂ ನಿಮ್ಮ ಕುಟುಂಬಸ್ಥರನ್ನು ಅರೆಸ್ಟ್​ ಮಾಡದಿರಲು ಹಣ ನೀಡುವಂತೆ ಹೇಳುತ್ತಾನೆ. ಇದಕ್ಕೆ ಬೆದರಿ ಪ್ರೋಮಿತ್​ ಮೌಲಿಕ್​ ಅವರು ಒಂದಿಷ್ಟು ಹಣ ನೀಡುತ್ತಾರೆ.

ಇದನ್ನೂ ಓದಿ: ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಆರೋಪಿ ಮತ್ತೆ ಪ್ರೋಮಿತ್​ ಮೌಲಿಕ್ ಅವರಿಗೆ ಕರೆ ಮಾಡಿ ಈ ಪ್ರಕರಣವನ್ನು ಮುಚ್ಚಿ ಹಾಕಲು 54 ಸಾವಿರ ರೂ. ನೀಡಿ ಎಂದು ಹೇಳುತ್ತಾನೆ. ಹಣ ನೀಡುವಂತೆ ಪದೇ ಪದೇ ಕರೆ ಮಾಡುತ್ತಾನೆ. ನಿರಂತರವಾಗಿ ಕರೆ ಬಂದ ಹಿನ್ನೆಲೆಯಲ್ಲಿ ಪ್ರೋಮಿತ್ ಮೌಲಿಕ್ ಅವರು ಹೆಚ್​ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:22 am, Tue, 12 September 23

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ