Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರು: ಪಾರ್ಟ್ ಟೈಂ ಜಾಬ್ ಆಫರ್ ನಂಬಿ ಬರೋಬ್ಬರಿ 2.77 ಕೋಟಿ ಕಳೆದುಕೊಂಡ ಸರ್ಕಾರಿ ಶಾಲೆ ಶಿಕ್ಷಕಿ

Cyber Crime: ಸೈಬರ್ ವಂಚನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಪೊಲೀಸರು, ಸರ್ಕಾರ ಆಗಾಗ ಕ್ರಮ ಕೈಗೊಳ್ಳುತ್ತಿರುತ್ತವೆ. ಆದಾಗ್ಯೂ ವಂಚನೆಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೀಗ ರಾಯಚೂರಿನ ಶಿಕ್ಷಕಿಯೊಬ್ಬರು ಅರೆಕಾಲಿಕ ಉದ್ಯೋಗದ ಆಮಿಷಕ್ಕೆ ಬಲಿಯಾಗಿ ಬರೋಬ್ಬರಿ 2.77 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ರಾಯಚೂರು: ಪಾರ್ಟ್ ಟೈಂ ಜಾಬ್ ಆಫರ್ ನಂಬಿ ಬರೋಬ್ಬರಿ 2.77 ಕೋಟಿ ಕಳೆದುಕೊಂಡ ಸರ್ಕಾರಿ ಶಾಲೆ ಶಿಕ್ಷಕಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Feb 15, 2024 | 7:52 AM

ರಾಯಚೂರು, ಫೆಬ್ರವರಿ 15: ಪಾರ್ಟ್ ಟೈಂ ಜಾಬ್ ಆಫರ್ (ಅರೆಕಾಲಿಕ ಉದ್ಯೋಗದ ಆಮಿಷ) ನಂಬಿ ಸರ್ಕಾರಿ ಶಾಲೆ (Government School) ಶಿಕ್ಷಕಿಯೊಬ್ಬರು ಬರೋಬ್ಬರಿ 2.77 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿರುವ ಪ್ರಕರಣ (Cyber Crime) ರಾಯಚೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ರಾಯಚೂರಿನ (Raichur) ಮಸ್ಕಿ ಪಟ್ಟಣದ ನಿವಾಸಿಯಾಗಿರುವ ಶಿಕ್ಷಕಿ 2023ರ ಸೆಪ್ಟೆಂಬರ್ 3ರಿಂದ ಈ ವರ್ಷದ ಜನವರಿ 12ರ ನಡುವಣ ಅವಧಿಯಲ್ಲಿ ಸೈಬರ್ ವಂಚನೆಗೆ ಒಳಗಾಗಿ ಹಣ ಕಳೆದುಕೊಂಡಿದ್ದರು. ಮಹಿಳೆ ಪೊಲೀಸರನ್ನು ಸಂಪರ್ಕಿಸಿ ಈ ವರ್ಷದ ಜನವರಿ 14 ರಂದು ದೂರು ನೀಡಿದ್ದರೂ, ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ.

ಪಾರ್ಟ್ ಟೈಮ್ ಕೆಲಸ ಹುಡುಕುತ್ತಿದ್ದ ಶಿಕ್ಷಕಿಗೆ ವಾಟ್ಸಾಪ್‌ನಲ್ಲಿ ಸಂದೇಶ ಬಂದಿತ್ತು. ಪ್ರತಿನಿತ್ಯ ಇತರರಿಗೆ ವಿಮಾನ ಟಿಕೆಟ್ ಕಾಯ್ದಿರಿಸಲು ಪಾರ್ಟ್‌ಟೈಮ್ ಕೆಲಸ ಮಾಡುವವರನ್ನು ಹುಡುಕುತ್ತಿದ್ದೇವೆ ಎಂಬ ಸಂದೇಶ ಬಂದಿತ್ತು. ಈ ಕೆಲಸದ ಮೂಲಕ ದಿನಕ್ಕೆ 1,000 ರಿಂದ 3,600 ರೂ. ವರೆಗೆ ಸಂಪಾದಿಸಬಹುದು ಎಂದು ಆಫರ್ ನೀಡಿದವರು ಆಮಿಷವೊಡ್ಡಿದ್ದರು. ಜತೆಗೆ ಆ ಕುರಿತು ಸಂದೇಶದಲ್ಲಿ ಲಿಂಕ್ ಅನ್ನು ಸಹ ಒದಗಿಸಿದ್ದರು.

ಶಿಕ್ಷಕಿಯು ಆ ಕೆಲಸದ ಆಫರ್​ ಅನ್ನು ಒಪ್ಪಿ ಸೆಪ್ಟೆಂಬರ್‌ನಿಂದ ಕೆಲಸ ಮಾಡಲು ಪ್ರಾರಂಭಿಸಿದ್ದರು. ವಂಚಕರು ಆಕೆಗೆ ಲಿಂಕ್‌ಗಳನ್ನು ಕಳುಹಿಸುತ್ತಿದ್ದರು ಮತ್ತು ಅವುಗಳನ್ನು ಭರ್ತಿ ಮಾಡಲು ಕೇಳುತ್ತಿದ್ದರು. ದಿನಗಳು ಕಳೆದಂತೆ, ಸೈಬರ್ ವಂಚಕರು ಮಹಿಳೆಯ ಗಳಿಕೆಯನ್ನು ತೋರಿಸಲು ಪ್ರಾರಂಭಿಸಿದರು. ಆದರೆ ಆಕೆ ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ, ವಂಚಕರು ಹಣವನ್ನು ಬಿಡುಗಡೆ ಮಾಡಲು ವಿವಿಧ ಶುಲ್ಕಗಳನ್ನು ಪಾವತಿಸುವಂತೆ ಕೇಳಿದರು. ಮಹಿಳೆ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡುತ್ತಲೇ ಇದ್ದರು ಮತ್ತು ಜನವರಿವರೆಗೆ ಕನಿಷ್ಠ 82 ವಿವಿಧ ಖಾತೆಗಳಿಗೆ 2.77 ಕೋಟಿ ರೂ. ವರ್ಗಾವಣೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೋಲಾರ: ಅಪ್ರಾಪ್ತ ಬಾಲಕಿ ಕೊಂದು ತಾನು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಮತ್ತೊಮ್ಮೆ ಆತ್ಮಹತ್ಯೆಗೆ ಯತ್ನ

ಸ್ನೇಹಿತರು, ಕುಟುಂಬ ಸದಸ್ಯರು ಮತ್ತು ಇತರರಿಗೆ ಶಿಕ್ಷಕಿಯು ಕೆಲಸದ ಬಗ್ಗೆ ತಿಳಿಸಿದ್ದು, ಅವರು ಲಕ್ಷಗಟ್ಟಲೆ ಹಣವನ್ನು ಸಾಲವಾಗಿ ನೀಡಿದ್ದರು. ಈ ಬಗ್ಗೆ ಶಿಕ್ಷಕಿಯು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ವಲ್ಪ ಹಣ ಪಡೆಯಲು ತನ್ನ ಮನೆಯನ್ನೂ ಅಡಮಾನ ಇಟ್ಟಿದ್ದರು. ವಂಚಕರಿಂದ ಬೇಡಿಕೆ ಹೆಚ್ಚಾದಾಗ ಮತ್ತು ಸಾಲ ನೀಡಿದವರು ಅದನ್ನು ಕೇಳಲು ಪ್ರಾರಂಭಿಸಿದಾಗ, ಮಹಿಳೆ ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಏತನ್ಮಧ್ಯೆ, ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದರೂ ಅರೆಕಾಲಿಕ ಉದ್ಯೋಗ ಮಾಡಲು ಮುಂದಾದ ಬಗ್ಗೆ ವಿವರಣೆ ಕೋರಿ ಶಿಕ್ಷಣ ಇಲಾಖೆ ಅವರಿಗೆ ನೋಟಿಸ್ ನೀಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ