ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ವಂಚನೆ: ಒಂದನ್ನು ಒತ್ತಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ವಂಚಿಸಲಾಗಿದೆ. ವಂಚಕರು 2 ಲಕ್ಷ ರೂಪಾಯಿ ದೋಚಿದ್ದಾರೆ. ಮಹಿಳೆ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ 1930ಗೆ ದೂರು ನೀಡಿದ್ದಾರೆ. ಮತ್ತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆಯು ಬ್ಯಾಂಕ್ ಸಹಾಯವಾಣಿಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸೈಬರ್ ಅಪರಾಧಗಳ ಬಗ್ಗೆ ಎಚ್ಚರಿಕೆ ನೀಡುತ್ತದೆ.

ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ವಂಚನೆ: ಒಂದನ್ನು ಒತ್ತಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Feb 04, 2025 | 8:30 AM

ಬೆಂಗಳೂರು, ಫೆಬ್ರವರಿ 04: ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬ್ಯಾಂಕ್​ಗಳು ಸಹಾಯವಾಣಿಗಳನ್ನು ತೆರೆದಿರುತ್ತವೆ. ಬ್ಯಾಂಕ್‌ಗಳ ಈ ಕ್ರಮವನ್ನು ಸೈಬರ್​ ವಂಚಕರು (Cyber Crime) ದುರ್ಬಳಕೆ ಮಾಡಿಕೊಂಡು ಮಹಿಳೆಗೆ ವಂಚಿಸಿದ್ದಾರೆ.

ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ, ಈ ಹಣವನ್ನ ನೀವೇ ವರ್ಗಾಯಿಸಿದ್ದರೆ ಮೂರನ್ನು ಒತ್ತಿ, ಇಲ್ಲವಾಗಿದ್ದಲ್ಲಿ ಒಂದನ್ನು ಒತ್ತಿ” ಎಂದಿದ್ದಾನೆ.

ಇದನ್ನೂ ಓದಿ: ಸೈಬರ್​ ಕ್ರೈಂ: ವೃದ್ಧೆಯಿಂದ 1 ಕೋಟಿಗೂ ಅಧಿಕ ಹಣ ದೋಚಿದ ವಂಚಕರು

ಇದರಿಂದ ಗಾಬರಿಗೊಂಡ ಮಹಿಳೆ ಒಂದನ್ನು ಒತ್ತಿದ್ದಾರೆ. ಬಳಿಕ, ವಂಚಕ ನಿಮ್ಮ ಬ್ಯಾಂಕ್ ಮ್ಯಾನೇಜರ್​ರನ್ನು ಸಂಪರ್ಕಿಸಿ ಎಂದು ಕರೆ ಕಟ್ ಮಾಡಿದ್ದಾನೆ. ಅನುಮಾನಗೊಂಡ ಮಹಿಳೆ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಖಾತೆಯಲ್ಲಿದ್ದ 2 ಲಕ್ಷ ರೂ. ಹಣ ಮಾಯವಾಗಿತ್ತು. ತಕ್ಷಣ ಮಹಿಳೆ ರಾಷ್ಟ್ರೀಯ ಸೈಬರ್ ಕ್ರೈಮ್ ಸಹಾಯವಾಣಿ (1930)ಗೆ ಪ್ರಾಥಮಿಕ ದೂರು ನೀಡಿದ್ದಾಳೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:29 am, Tue, 4 February 25

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us