Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಕನ್ನಡ: ವೇಣೂರಿನಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು, ಇಬ್ಬರು ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರುವಿನಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಸಂಭವಿಸಿದೆ. ಬಶೀರ್‌ ಎಂಬುವರಿಗೆ ಸೇರಿದ ಸಾಲಿಡ್ ಫೈರ್ ವರ್ಕ್ಸ್‌ ಪಟಾಕಿ ಗೋದಾಮಿನಲ್ಲಿ ಅವಘಡ ಸಂಭವಿಸಿದೆ. ಪಟಾಕಿ ಸ್ಫೋಟದ ರಭಸಕ್ಕೆ ಗೋದಾಮಿನಿಂದ ಹೊರಗೆ ಕಾರ್ಮಿಕ ಹಾರಿಬಿದ್ದಿದ್ದಾರೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ. 

ದಕ್ಷಿಣ ಕನ್ನಡ: ವೇಣೂರಿನಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ: ಮೂವರು ಕಾರ್ಮಿಕರು ಸಾವು, ಇಬ್ಬರು ವಶಕ್ಕೆ
ಪಟಾಕಿ ಗೋದಾಮಿನಲ್ಲಿ ಸ್ಫೋಟ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Jan 28, 2024 | 9:06 PM

ಮಂಗಳೂರು, ಜನವರಿ 28: ಪಟಾಕಿ (firecracker) ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ದುರಂತ ಸಂಭವಿಸಿದೆ. ಕೇರಳ ಮೂಲದ ಸ್ವಾಮಿ(55), ವರ್ಗಿಸ್(68) ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ಚೇತನ್(25) ಮೃತರು. ಬಶೀರ್‌ ಎಂಬುವರಿಗೆ ಸೇರಿದ ಸಾಲಿಡ್ ಫೈರ್ ವರ್ಕ್ಸ್‌ ಪಟಾಕಿ ಗೋದಾಮಿನಲ್ಲಿ ಅವಘಡ ಸಂಭವಿಸಿದೆ. ಪಟಾಕಿ ಸ್ಫೋಟದ ರಭಸಕ್ಕೆ ಗೋದಾಮಿನಿಂದ ಹೊರಗೆ ಕಾರ್ಮಿಕ ಹಾರಿಬಿದ್ದಿದ್ದಾರೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ಸ್ಪೋಟದಲ್ಲಿ ಗಾಯಗೊಂಡ ಆರು ಜನರ ಗುರುತು ಪತ್ತೆಯಾಗಿದೆ. ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಗಾಯಗೊಂಡವರು. ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು.

ಇಬ್ಬರು ಕಾರ್ಮಿಕರು ವಶಕ್ಕೆ

ಇಬ್ಬರು ಕಾರ್ಮಿಕರನ್ನು ವೇಣೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಟಾಕಿ ಕಾರ್ಖಾನೆ ಮಾಲೀಕನ ವಿರುದ್ಧ ಸ್ಥಳೀಯರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಫೋಟದ ತೀವ್ರತೆಗೆ ಕೈ ಹಾಗೂ ಮೆದುಳು ಪಕ್ಕದ ತೋಟದಲ್ಲಿ ಬಿದ್ದಿದೆ.

ಎಲ್​ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕ

ಬೆಳಗಾವಿ: ಎಲ್​ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ನಗರದ ಬಸವನಗಲ್ಲಿಯಲ್ಲಿ ನಡೆದಿದೆ. ಮನೆಯಲ್ಲಿ ಎಲ್​ಪಿಜಿ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಫೋಟಗೊಂಡಿದ್ದು, ಒಂದೇ ಕುಟುಂಬದ ಐವರಿಗೆ ಗಾಯಗಳಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿ: ಬಂಟ್ವಾಳ: ಕಾಡಿಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸಲು ಮುಂದಾಗಿದ್ದ ದಂಪತಿ ಸಾವು

ಲಲಿತಾ ಭಟ್(48), ಮೋಹನ್ ಭಟ್(56), ಕಮಲಾಕ್ಷಿ ಭಟ್(80), ಹೇಮಂತ್ ಭಟ್(27), ಗೋಪಿಕೃಷ್ಣ ಭಟ್(84) ಎಂಬುವರಿಗೆ ಗಾಯಗಳಾಗಿವೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರು ಹಾಗೂ ಬೈಕ್ ನಡುವೆ ಅಪಘಾತ: ಓರ್ವ ವ್ಯಕ್ತಿ ಸಾವು 

ತುಮಕೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಲಾಪುರ ಬಳಿ ನಡೆದಿದೆ. ಸೋಮಶೇಖರ್ 42 ಮೃತ ದುರ್ದೈವಿ. ಉಮೇಶ್ ಎನ್ನುವರಿಗೆ ಕಾಲು‌ ಮುರಿದಿದೆ. ಹೊನ್ನವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎರಡು ಕ್ಯಾಂಟರ್​​ ಮುಖಾಮುಖಿ ಡಿಕ್ಕಿ: ಅದೃಷ್ಟವಶಾತ್ ಚಾಲಕರು ಪಾರು

ಚಿಕ್ಕಬಳ್ಳಾಪುರ: ಎರಡು ಕ್ಯಾಂಟರ್​ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಇಬ್ಬರು ಚಾಲಕರಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ‌ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ; ಲಾಂಗ್​​​ನಿಂದ ಹೊಡೆದು ಕೊಲೆ

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ‌ಅಮ್ಮನಕೆರೆ ಕಟ್ಟೆ ಮೇಲೆ ಘಟನೆ ನಡೆದಿದೆ. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:57 pm, Sun, 28 January 24

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?