ಉತ್ತರ ಪ್ರದೇಶ: ದೂರು ದಾಖಲಿಸಲು ಹೋದ ದಲಿತ ಮಹಿಳೆಯ ಮೇಲೆ ಪೊಲೀಸರಿಂದ ಅತ್ಯಾಚಾರ

ದೂರು ದಾಖಲಿಸಲು ತೆರಳಿದ್ದ ದಲಿತ ಮಹಿಳೆಯ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಬ್​ ಇನ್ಸ್​ಪೆಕ್ಟರ್​ನನ್ನು ಅಮಾನತುಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಿರಿಯ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಮಾತನಾಡಿ, ಸಂತ್ರಸ್ತೆ ತನ್ನ ಸಾಕ್ಷ್ಯದಲ್ಲಿ ಝಂಘೈ ಪೊಲೀಸ್ ಹೊರಠಾಣೆ ಉಸ್ತುವಾರಿ ಸುಧೀರ್ ಕುಮಾರ್ ಪಾಂಡೆ ಸೆಪ್ಟೆಂಬರ್ 21 ರಂದು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ

ಉತ್ತರ ಪ್ರದೇಶ: ದೂರು ದಾಖಲಿಸಲು ಹೋದ ದಲಿತ ಮಹಿಳೆಯ ಮೇಲೆ ಪೊಲೀಸರಿಂದ ಅತ್ಯಾಚಾರ
ಪೊಲೀಸ್-ಸಾಂದರ್ಭಿಕ ಚಿತ್ರImage Credit source: India Today
Follow us
ನಯನಾ ರಾಜೀವ್
|

Updated on: Sep 27, 2023 | 9:29 AM

ದೂರು ದಾಖಲಿಸಲು ತೆರಳಿದ್ದ ದಲಿತ ಮಹಿಳೆಯ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಬ್​ ಇನ್ಸ್​ಪೆಕ್ಟರ್​ನನ್ನು ಅಮಾನತುಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಿರಿಯ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಮಾತನಾಡಿ, ಸಂತ್ರಸ್ತೆ ತನ್ನ ಸಾಕ್ಷ್ಯದಲ್ಲಿ ಝಂಘೈ ಪೊಲೀಸ್ ಹೊರಠಾಣೆ ಉಸ್ತುವಾರಿ ಸುಧೀರ್ ಕುಮಾರ್ ಪಾಂಡೆ ಸೆಪ್ಟೆಂಬರ್ 21 ರಂದು ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ಸರಾಯಿ ಮಾಮ್ರೇಜ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿರುವ ಪಾಂಡೆ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 120 ಬಿ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಕುಮಾರ್ ಹೇಳಿದರು. ಪಾಂಡೆ ತಲೆಮರೆಸಿಕೊಂಡಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ, ಮಹಿಳೆಗೆ ಕೆಲವು ಪುರುಷರು ಕಿರುಕುಳ ನೀಡುತ್ತಿದ್ದಾರೆ ಮತ್ತು ಕೊಲೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ ಎಂದು ದೂರು ನೀಡಲು ಮಹಿಳೆ ಪೊಲೀಸ್​ ಠಾಣೆಗೆ ಹೋಗಿದ್ದಳು.

ಮತ್ತಷ್ಟು ಓದಿ: ಪೋಷಕರ ಜತೆ ಕೂಲಿಗಾಗಿ ಹಾಸನಕ್ಕೆ ಬಂದಿದ್ದ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಅರೆಸ್ಟ್

ಸೆಪ್ಟೆಂಬರ್ 21 ರಂದು ಸಂಜೆ ಸಬ್ ಇನ್ಸ್‌ಪೆಕ್ಟರ್ ಪಾಂಡೆ ಆಕೆಯನ್ನು ಪೊಲೀಸ್ ಔಟ್‌ಪೋಸ್ಟ್‌ಗೆ ಕರೆಸಿದ್ದರು. ಪುರುಷರನ್ನು ಬಂಧಿಸಲು ಹೋಗುವ ನೆಪದಲ್ಲಿ ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಮತ್ತು ಬರುವ ಔಷಧಿ ಬೆರೆಸಿ ಪ್ರಜ್ಞೆ ತಪ್ಪಿಸಿ ಕಾರಿನಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಕಮಿಷನರ್ ರಮಿತ್ ಶರ್ಮಾ ಅವರು ಹಂಡಿಯಾ ಎಸಿಪಿ ಸುಧೀರ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ