AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧ ಸುದ್ದಿ: ಹುಡುಗಾಟಿಕೆಗೆ ವಿದ್ಯುತ್ ಕಂಬ ಹತ್ತಿದ ಯುವಕ ಕರೆಂಟ್ ಹೊಡೆದು ಅಲ್ಲೆ ನೇತಾಡಿದ

ಕಟ್ಟಿಗೆಯ ಸಹಾಯದಿಂದ ಸ್ಥಳೀಯ ನಿವಾಸಿಗಳು ಯುವಕನನ್ನು ರಕ್ಷಿಸಿದ್ದಾರೆ.

ಅಪರಾಧ ಸುದ್ದಿ: ಹುಡುಗಾಟಿಕೆಗೆ ವಿದ್ಯುತ್ ಕಂಬ ಹತ್ತಿದ ಯುವಕ ಕರೆಂಟ್ ಹೊಡೆದು ಅಲ್ಲೆ ನೇತಾಡಿದ
ವಿದ್ಯುತ್ ಕಂಬದಲ್ಲಿ ನೇತಾಡುತ್ತಿರುವ ಯುವಕ
TV9 Web
| Edited By: |

Updated on: Aug 30, 2021 | 8:13 PM

Share

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಅಷ್ಟಪ್ಪನಹಳ್ಳಿಯಲ್ಲಿ ಹುಡುಗಾಟಿಕೆಗೆ ಕಂಬ ಹತ್ತಿದ್ದ ಯುವಕನಿಗೆ ವಿದ್ಯುತ್‌ ಶಾಕ್‌ ಹೊಡೆದು ಯುವಕ ಕೆಲಹೊತ್ತು ಒದ್ದಾಡಿದ ದುರ್ಘಟನೆ ನಡೆದಿದೆ. ಶಿವರಾಜ್ (23) ತೀವ್ರ ಗಾಯಗೊಂಡ ಯುವಕ. ಕಟ್ಟಿಗೆಯ ಸಹಾಯದಿಂದ ಸ್ಥಳೀಯ ನಿವಾಸಿಗಳು ಯುವಕನನ್ನು ರಕ್ಷಿಸಿದ್ದಾರೆ. ಗಾಯಾಳು ಶಿವರಾಜ್‌ಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಗಳ ಹತ್ತಿರವೇ ಟ್ರಾನ್ಸ್‌ಫಾರ್ಮರ್‌ ಅಳವಡಿಸಿದ್ದರಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಟಿಸಿ ಸ್ಥಳಾಂತರ ಮಾಡಲು ಮನವಿ ಮಾಡಿದರೂ ಇಲಾಖೆ ಕ್ರಮಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪ್ರಕರಣ ದಾಖಲಾಗಿದೆ. 

ಯುವತಿಗೆ ಚೂರಿಯಿಂದ ಇರಿದು ತಾನು ಇರಿದುಕೊಂಡ ಯುವಕ ಯುವತಿಗೆ ಚಾಕುವಿನಿಂದ ಇರಿದು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯ ಸಂತೆಕಟ್ಟೆ ಬಳಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಯುವತಿಯನ್ನು ತಡೆದ ಯುವಕ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಯುವತಿಯ ಕುತ್ತಿಗೆಗೆ ಇರಿದ ಯುವಕ ನಂತರ ತನಗೂ ಇರಿದುಕೊಂಡಿದ್ದಾನೆ. ಯುಕ ಮತ್ತು ಯುವತಿ ಇಬ್ಬರೂ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾರದ ಹಿಂದಷ್ಟೇ ಯುವತಿಗೆ ನಿಶ್ಚಿತಾರ್ಥ ಆಗಿತ್ತು ಎಂದು ತಿಳಿದುಬಂದಿದೆ.

ಬೆದ್ರೋಡಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮೂವರ ಸಾವು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಬೆದ್ರೋಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಪಿಕಪ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ದುರಸ್ತಿ ಮಾಡುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರೆಲ್ಲರೂ ಆಂಧ್ರಪ್ರದೇಶ ಮೂಲದವರೆಂಬ ಮಾಹಿತಿ ದೊರೆತಿದ್ದು, ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: 

ಬೆಂಗಳೂರು ಅಪರಾಧ ಜಗತ್ತಿನ ನಾಲ್ಕು ಮುಖ್ಯ ಪ್ರಕರಣಗಳನ್ನು ತೆರೆದಿಡಲಿದೆ ನೆಟ್​ಫ್ಲಿಕ್ಸ್​ನ ಈ ಡಾಕ್ಯುಮೆಂಟರಿ

ಲಂಚ ತೆಗೆದುಕೊಳ್ಳೋದು ಮತ್ತು ಕೊಡೋದು ಎರಡೂ ಅಪರಾಧ ಅಂತಾದ್ರೆ ಇಬ್ಬರಿಗೂ ಶಿಕ್ಷೆಯಾಗಬೇಕು!

(Davanagere a young man climbed a electricity pole and shocked)

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?