AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಗೆ ದಾವಣಗೆರೆ ಲಿಂಕ್? ಮತ್ತೊಬ್ಬ ಸಿಸಿಬಿ ವಶಕ್ಕೆ

ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಸಿಸಿಬಿ ಪೊಲೀಸರು, ನಗರದಲ್ಲಿ ಆಯುಧ ಮಾರಾಟ ವಿಚಾರವಾಗಿ ದಾವಣಗೆರೆ ಮೂಲದ ಫಯಾಜ್​ವುಲ್ಲಾ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಬೆಂಗಳೂರಿನಲ್ಲಿ ಬಂಧಿತರಾಗಿರುವ ಶಂಕಿತ ಉಗ್ರರಿಗೆ ದಾವಣಗೆರೆ ಲಿಂಕ್? ಮತ್ತೊಬ್ಬ ಸಿಸಿಬಿ ವಶಕ್ಕೆ
ಸಿಸಿಬಿ ಕಚೇರಿ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: Rakesh Nayak Manchi|

Updated on: Jul 20, 2023 | 3:00 PM

Share

ದಾವಣಗೆರೆ, ಜುಲೈ 20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಸಿಸಿಬಿ ಪೊಲೀಸರು (CCB Police) ದಾವಣಗೆರೆಯಲ್ಲಿ (Davanagere) ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿದ್ದ ಶಂಕಿತರ ಉಗ್ರರಿಗೆ ದಾವಣಗೆರೆಯ ಲಿಂಕ್ ಇತ್ತಾ ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಸಿಸಿಬಿ ವಶದಲ್ಲಿರುವ ದಾವಣಗೆರೆ ಅಜಾದ್ ನಗರದ ನಿವಾಸಿ ಫಯಾಜ್ ವುಲ್ಲಾನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಫಯಾಜ್ ವುಲ್ಲಾ (30) ಎಂಬ ವ್ಯಕ್ತಿಯನ್ನ ಇಂದು ಬೆಳಿಗ್ಗೆ ಬೆಂಗಳೂರಿನ ಸಿಸಿಬಿ ಪೊಲೀಸರು ದಾವಣಗೆರೆ ಆಗಮಿಸಿ ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಅಕ್ರಮವಾಗಿ ಆಯುಧ ಮಾರಾಟ ವಿಚಾರವಾಗಿ ಇತನ ಮೇಲೆ ಐದು ಪ್ರಕರಣ ದಾಖಲಾಗಿದ್ದವು. ಜಾಮೀನು ಮೇಲೆ ಹೊರಗಿದ್ದ ಈತನನ್ನು ಮತ್ತೆ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಫಯಾಜ್ ವುಲ್ಲಾನನ್ನು ವಶಕ್ಕೆ ಪಡೆದಿದ್ದು, ಶಂಕಿತರಿಗೆ ಮತ್ತು ಫಯಾಜ್​ಗೂ ಲಿಂಕ್ ಇತ್ತಾ ಎಂಬ ಸಂಶಯ ಮೂಡಿಸಿದೆ.

ಇದನ್ನೂ ಓದಿ: ಮತ್ತೊಬ್ಬ ಶಂಕಿತ ಉಗ್ರನ ಬಗ್ಗೆ ಸಿಸಿಬಿಗೆ ಸುಳಿವು, ವಿಧ್ವಂಸಕ ಕೃತ್ಯಕ್ಕೆ ಬೇಕು ಬೇಡಗಳನ್ನು ಪೂರೈಸಿದ್ದ ಯಾರವನು?

ಬೆಂಗಳೂರು ನಗರದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತರ ಉಗ್ರರನ್ನು ಜುಲೈ 19 ರಂದು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇವರ ಬಳಿ ಇದ್ದ 45 ಜೀವಂತ ಗುಂಡು, ಏಳು ಪಿಸ್ತೂಲ್, ವಾಕಿಟಾಕಿ, ಮೊಬೈಲ್ ಸಿಮ್ ಕಾರ್ಡ್​ಗಳನ್ನು ವಶಕ್ಕೆ ಪಡೆಯಲಾಗಿತ್ತು. ಆ ಮೂಲಕ ರಾಜಧಾನಿಯಲ್ಲಿ ನಡೆಯುತ್ತಿದ್ದ ಉಗ್ರರ ಪ್ಲಾನ್ ಅನ್ನು ವಿಫಲಗೊಳಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದರು. ಬೆಂಗಳೂರಿನಲ್ಲಿ ಕುಕೃತ್ಯ ಎಸಗಲು ವಿದೇಶದಿಂದ ಹಣ ಬರುತ್ತಿತ್ತು ಎಂದು ತಿಳಿದುಬಂದಿದೆ.

ವ್ಯವಹಾರ ಸಂಬಧ 2017 ರಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ 21 ಮಂದಿ ಹದಿನೆಂಟು ತಿಂಗಳ ಕಾಲ ಜೈಲಿನಲ್ಲಿದ್ದರು. ಈ ವೇಳೆ ಉಗ್ರರ ಸಂಪರ್ಕಕ್ಕೆ ಬಂದ್ದಿದ್ದ ಅವರು ಬೆಂಗಳೂರಿನಲ್ಲಿ ಬ್ಲಾಸ್ಟ್ ಮಾಡುವ ಪ್ಲಾನ್ ಮಾಡಿದ್ದರು. 2020 ರಲ್ಲಿ ಜುನೈದ್ ಎಂಬಾತ ರಕ್ತ ಚಂದನ ಪ್ರಕರಣದಲ್ಲಿ ಐದು ತಿಂಗಳ ಕಾಲ ಜೈಲಿನಲ್ಲಿದ್ದು, ನಂತರ ಬಿಡುಗಡೆಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ಈತನಿಂದಲೇ ಈ ಐವರಿಗೆ ಮಾರ್ಗದರ್ಶನ ನೀಡುತ್ತಿದ್ದ ಎಂಬ ಸ್ಫೋಟಕ ಮಾಹಿತಿಯನ್ನು ನಗರ ಪೊಲೀಸ್ ಆಯುಕ್ತರು ಬಿಚ್ಚಿಟ್ಟದ್ದರು.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್