ಆಫರ್​ ಲೆಟರ್‌ ಹರಿದುಹಾಕಿದ ಕಾಲೇಜು, ಮನನೊಂದು ಸಾವಿಗೆ ಶರಣಾದ ಮೆರಿಟ್ ಸ್ಟೂಡೆಂಟ್!

ಬೆಂಗಳೂರು: ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯ ಹೆಸರು ಹರ್ಷ ಎಂದು ತಿಳಿದು ಬಂದಿದೆ. ಹರ್ಷ ಅಮೃತ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಇಸಿ ವಿಭಾಗದಲ್ಲಿ, ನಾಲ್ಕನೆ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ. ಕಳೆದ ಕೆಲ ದಿನಗಳ ಹಿಂದೆ ಕಾಲೇಜು ಹಾಸ್ಟೆಲ್‌ನಲ್ಲಿ ಊಟ ಸರಿಯಿಲ್ಲವೆಂದು ಪ್ರತಿಭಟನೆ ಮಾಡಿದ್ದ. ಈ ಕಾರಣಕ್ಕಾಗಿ ಕಾಲೇಜು ಅಡಳಿತ ಮಂಡಳಿ ಹರ್ಷ ಸೇರಿ 20 ವಿದ್ಯಾರ್ಥಿಗಳನ್ನ ಸಸ್ಪೆಂಡ್ […]

ಆಫರ್​ ಲೆಟರ್‌ ಹರಿದುಹಾಕಿದ ಕಾಲೇಜು, ಮನನೊಂದು ಸಾವಿಗೆ ಶರಣಾದ ಮೆರಿಟ್ ಸ್ಟೂಡೆಂಟ್!
ಸಾಧು ಶ್ರೀನಾಥ್​

Updated on: Oct 21, 2019 | 6:36 PM

ಬೆಂಗಳೂರು: ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯ ಹೆಸರು ಹರ್ಷ ಎಂದು ತಿಳಿದು ಬಂದಿದೆ.
ಹರ್ಷ ಅಮೃತ ಕಾಲೇಜ್ ಆಫ್ ಇಂಜಿನಿಯರಿಂಗ್ ನಲ್ಲಿ ಇಸಿ ವಿಭಾಗದಲ್ಲಿ, ನಾಲ್ಕನೆ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ. ಕಳೆದ ಕೆಲ ದಿನಗಳ ಹಿಂದೆ ಕಾಲೇಜು ಹಾಸ್ಟೆಲ್‌ನಲ್ಲಿ ಊಟ ಸರಿಯಿಲ್ಲವೆಂದು ಪ್ರತಿಭಟನೆ ಮಾಡಿದ್ದ. ಈ ಕಾರಣಕ್ಕಾಗಿ ಕಾಲೇಜು ಅಡಳಿತ ಮಂಡಳಿ ಹರ್ಷ ಸೇರಿ 20 ವಿದ್ಯಾರ್ಥಿಗಳನ್ನ ಸಸ್ಪೆಂಡ್ ಮಾಡಿತ್ತು.

ಈ ಮಧ್ಯೆ, ಕ್ಯಾಂಪಸ್‌ ಸೆಲೆಕ್ಷನ್ ನಲ್ಲಿ ಸೆಲೆಕ್ಟ್ ಆಗಿದ್ದ ಹರ್ಷ ನಿಗೆ ಪ್ರತಿಷ್ಠಿತ ಕಂಪನಿಯೊಂದರಿಂದ ಬಂದಿದ್ದ ಕಾಲ್‌ ಲೆಟರ್‌ನ್ನು ಕಾಲೇಜು ಅಡಳಿತ ಮಂಡಳಿ ಹರ್ಷನ ಮುಂದೆಯೇ ಹರಿದು ಹಾಕಿತ್ತು. ಇದರಿಂದ ಮನನೊಂದ ವಿದ್ಯಾರ್ಥಿ ಹರ್ಷ ಆರನೆ ಫ್ಲೋರ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ವಿಚಾರಣೆ ನಡೆಯುತ್ತಿದೆ.

Published On - 3:53 pm, Mon, 21 October 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us