ಬೆಳಗಾವಿಯ ಗ್ರೇಡ್-2 ತಹಶೀಲ್ದಾರ್ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್; ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪತ್ತೆ

ಬೆಳಗಾವಿ ಜಿಲ್ಲೆಯ ಎಸಿ ಕಚೇರಿಯ ಗ್ರೇಡ್- 2 ತಹಶೀಲ್ದಾರ್ (tahsildar) ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶೋಕ್​ ಮಣ್ಣಿಕೇರಿ ಎಂಬುವವರು ಜೂನ್ 29ರಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಇದೀಗ ಟ್ವಿಸ್ಟ್​ ಸಿಕ್ಕಿದ್ದು, ಡೆತ್​ನೋಟ್​ ಪತ್ತೆಯಾಗಿದೆ.

ಬೆಳಗಾವಿಯ ಗ್ರೇಡ್-2 ತಹಶೀಲ್ದಾರ್ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್; ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ ಪತ್ತೆ
ತಹಶೀಲ್ದಾರ್
Follow us
Sahadev Mane
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 05, 2023 | 12:34 PM

ಬೆಳಗಾವಿ: ಜಿಲ್ಲೆಯ ಎಸಿ ಕಚೇರಿಯ ಗ್ರೇಡ್- 2 ತಹಶೀಲ್ದಾರ್ (Tahsildar) ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶೋಕ‌್ ಮಣ್ಣಿಕೇರಿ ಜೂನ್ 29ರಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ಇತ ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್​ ಶಾಸಕರಾಗಿದ್ದ ವೇಳೆ ಅವರ ಆಪ್ತ ಸಹಾಯಕರಾಗಿ ಕೂಡ ಕಾರ್ಯನಿರ್ವಹಿಸಿದ್ದರು. ಇದೀಗ ತಹಶೀಲ್ದಾರ್ ಅಶೋಕ ಮಣ್ಣಿಕೇರಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೌದು ಜೂನ್ 23ರಂದು ಬರೆದಿಟ್ಟಿದ್ದ ಡೆತ್ ನೋಟ್ ಪೊಲೀಸ್ ಪರಿಶೀಲನೆ ವೇಳೆ ಎಸಿ ಕಚೇರಿಯ ಲಾಕರ್​ನಲ್ಲಿ ಪತ್ತೆಯಾಗಿದೆ.

ಡೆತ್​ನೋಟ್​ನಲ್ಲಿ ಏನಿದೆ?

ಇನ್ನು ಡೆತ್​ನೋಟ್​ನಲ್ಲಿ ‘ನನ್ನ ಸಾವಿಗೆ ಪತ್ನಿ ಭೂಮಿ ಕರ್ತವ್ಯಕ್ಕೆ ಅಡ್ಡಿ ಪಡಿಸುವುದರ ಜೊತೆಗೆ ಕಿರುಕುಳ ನೀಡ್ತಿದ್ದಾಳೆ ಎಂದು ಡೆತ್ ನೋಟ್​ನಲ್ಲಿ ಉಲ್ಲೇಖ‌ ಮಾಡಲಾಗಿದೆ. ಜೊತೆಗೆ ತಹಶೀಲ್ದಾರ್ ಹುದ್ದೆಗೆ ಸ್ವಯಂ ನಿವೃತ್ತಿ ಪಡೆಯಲು ಸಿದ್ದಪಡಿಸಿದ್ದ ಪತ್ರ ಕೂಡ ಪತ್ತೆಯಾಗಿದೆ. ಬೆಳಗಾವಿ ಉಪವಿಭಾಗ ಕಚೇರಿಯಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡುತ್ತಿದ್ದ ಅಶೋಕ್, ಪತ್ನಿ ಭೂಮಿಯನ್ನ​ ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಜೂನ್ 29ರಂದು ಮನೆಯಲ್ಲಿ ಹೃದಯಾಘಾತದಿಂದ ಸಾವು ಎಂದು ಪ್ರಕರಣ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ:ಅನುಕಂಪದ ಮೇಲೆ ಕೆಲಸ ಗಿಟ್ಟಿಸಿಕೊಂಡಿದ್ದ ತಹಶೀಲ್ದಾರ್ ಅಜಿತ್ ರೈ ಕೋಟಿ ಒಡೆಯ, ಇಲ್ಲಿದೆ ಮನೆಯಲ್ಲಿ ಸಿಕ್ಕ ವಸ್ತುಗಳ ವಿವರ

ಅಶೋಕ ಮಣ್ಣಿಕೇರಿ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಕುಟುಂಬ

ಇವರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿತ್ತು. ಅಶೋಕ್ ಮಣ್ಣಿಕೇರಿ ಪತ್ನಿ ಭೂಮಿ ಮತ್ತು ಆಕೆಯ ಸಹೋದರ ಸ್ಯಾಮ್ಯುಯೆಲ್ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿತ್ತು. ಅಶೋಕ್​​ ಕುಟುಂಬಸ್ಥರು ಈ ಬಗ್ಗೆ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ನೀಡಿ, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ಅದರಂತೆ ಪರಿಶೀಲನೆ ವೇಳೆ ಡೆತ್​ನೋಟ್​ ಪತ್ತೆಯಾಗಿದೆ.

ಘಟನೆ ವಿವರ

ಇನ್ನು ತಹಶೀಲ್ದಾರ್ ಅಶೋಕ್ ಮಣ್ಣಿಕೇರಿ ಕುಟುಂಬ ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ತಡರಾತ್ರಿ ಹೃದಯಾಘಾತವಾಗಿದೆ ಎಂದು ಅಶೋಕ್ ಪತ್ನಿ ಹಾಗೂ ಆಕೆಯ ಸಹೋದರ ಸ್ಯಾಮ್ಯುಯೆಲ್ ಅವರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದ್ರೆ, ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯದಲ್ಲಿಯೇ ತಹಶೀಲ್ದಾರ್ ಕೊನೆಯುಸೆರೆಳೆದಿದ್ದರು. ಈ ಹಿನ್ನೆಲೆ ಅಶೋಕ್ ಸಾವಿನ ಹಿಂದೆ ಅನುಮಾನಗಳು ವ್ಯಕ್ತವಾಗಿತ್ತು. ಇನ್ನು ಮೃತ ಅಶೋಕ್ ಕುಟುಂಬಸ್ಥರು ಭೂಮಿ ಹಾಗೂ ಆಕೆಯ ಸಹೋದರ ಸ್ಯಾಮ್ಯುಯೆಲ್ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಆ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಇಬ್ಬರನ್ನು ಕರೆದುಕೊಂಡು ಹೋಗಿದ್ದರು. ಇದೀಗ ಎಫ್ ಎಸ್ ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ