ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಯುವಕ ಸಾವು; ಬೆಸ್ಕಾಂ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಾನುವಾರುಗಳಿಗೆ ಮೇವು ತರುವಾಗ ಸಿಡಿಲು ಬಡಿದು ಓರ್ವ ಮಹಿಳೆ, ಎರಡು ಎಮ್ಮೆಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ.

ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಯುವಕ ಸಾವು; ಬೆಸ್ಕಾಂ ವಿರುದ್ಧ ಕುಟುಂಬಸ್ಥರ ಆಕ್ರೋಶ
ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಯುವಕ ಸಾವು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 25, 2022 | 10:57 PM

ಬೆಂಗಳೂರು; ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ (Electric Wire) ತುಳಿದು ಯುವಕ ಸಾವನ್ನಪ್ಪಿರುವಂತಹ ದುರ್ಘಟನೆ ಬೆಂಗಳೂರಿನ ಸಂಜಯ್​​​ ನಗರದಲ್ಲಿ ನಡೆದಿದೆ.  ಕಿಶೋರ್ (27) ಮೃತ ಯುವಕ. ಬೆಸ್ಕಾಂ ನಿರ್ಲಕ್ಷ್ಯ ಎಂದು ಆರೋಪಿಸಿ ಯುವಕನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ಓರ್ವ ಮಹಿಳೆ, ಎರಡು ಎಮ್ಮೆಗಳ ಸಾವು;

ಬೆಳಗಾವಿ: ಜಾನುವಾರುಗಳಿಗೆ ಮೇವು ತರುವಾಗ ಸಿಡಿಲು ಬಡಿದು ಓರ್ವ ಮಹಿಳೆ, ಎರಡು ಎಮ್ಮೆಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಮ್ಮ ವಟವಟಿ(38) ಮೃತ ಮಹಿಳೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮಸೀದಿಯಲ್ಲಿ ಹೇಳಿದ ಕೆಲಸ ಮಾಡಿಲ್ಲವೆಂದು ಯುವಕನ ಮೇಲೆ:

ನೆಲಮಂಗಲ: ಮಸೀದಿಯಲ್ಲಿ ಹೇಳಿದ ಕೆಲಸ ಮಾಡಿಲ್ಲವೆಂದು ಪ್ರಾರ್ಥನೆಗೆ ಬಂದಿದ್ದ ಯುವಕನ ಮೇಲೆ ಮುಸ್ಲಿಂ ಮುಖಂಡನಿಂದ ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಇಸ್ಲಾಂಪುರ ಮನ್ಸೂರ್ ಮಸೀದಿಯಲ್ಲಿ ನಡೆದಿದೆ. ಅಲ್ತಾಫ್(20),ಹಲ್ಲೆಯಿಂದಾಗಿ ಗಾಯಗೊಂಡ ಯುವಕ. ಜಬಿಉಲ್ಲಾ ಹಲ್ಲೆ ಮಾಡಿದ ಮುಸ್ಲಿಂ ಮುಖಂಡ. ಗಾಯಳು ಯುವಕನಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿ ಚಾಲಕನ ನಿರ್ಲಕ್ಷ್ಯ ಫುಟ್ ಪಾತ್ ಮೇಲೆ ಹರಿದ ಲಾರಿ ರಾಯಚೂರು: ನಗರದ ಸ್ಟೇಷನ್​ ರಸ್ತೆಯಲ್ಲಿ ಅಕ್ಕಿ ಸಾಗಣೆ ಲಾರಿ ಫುಟ್​ಪಾತ್​ ಮೇಲೆ ಚಲಿಸಿ ಲೋಕಾಯುಕ್ತ ಕಚೇರಿ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿದೆ. ಮದ್ಯದ ಅಮಲಿನಲ್ಲಿ ಲಾರಿ ಚಲಾಯಿಸುತ್ತಿದ್ದ ಚಾಲಕನಿಂದ ಕೃತ್ಯ. ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಷಿ ಹೊಂಡದಲ್ಲಿ ಈಜಲು ಹೋಗಿ ನೀರು ಪಾಲು ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕಾರಕೆರೆ ಹೊಸೂರು ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಪ್ರಜ್ವಲ್(11) ನೀರುಪಾಲಾಗಿದ್ದಾರೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

ಹನುಮಾನ್ ಚಾಲೀಸಾ ಪಠಿಸಬೇಕಿದ್ದರೆ ಪಠಿಸಿ, ದಾದಾಗಿರಿ ಮಾಡಿದರೆ ನಾವು ಸುಮ್ಮನಿರುವುದಿಲ್ಲ: ಬಿಜೆಪಿ ವಿರುದ್ಧ ಗುಡುಗಿದ ಉದ್ಧವ್ ಠಾಕ್ರೆ

ಹುಲ್ಲಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ 12 ಗುಂಟೆ ಜಾಗ ಅಸಲಿಗೆ ಯಾರಿಗೆ ಸೇರಿದ್ದು?