ಸೇನಾ ನೆಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಮಿಸ್ ಫೈರ್ ಆಗಿ ವಿಜಯಪುರ ಸಿಐಎಸ್​ಎಫ್​ ಯೋಧ ಸಾವು

ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಯೋಧ, ಕುಟುಂಬದಲ್ಲಿ ದುಖಃ ಮಡುಗಟ್ಟಿದೆ. ನಾಳೆ ಮೃತ ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸೋ ಸಾಧ್ಯತೆಯಿದೆ. 

ಸೇನಾ ನೆಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಮಿಸ್ ಫೈರ್ ಆಗಿ ವಿಜಯಪುರ ಸಿಐಎಸ್​ಎಫ್​ ಯೋಧ ಸಾವು
ದಯಾನಂದ ಪಾಟೀಲ್ (26) ಮೃತ ಯೋಧ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Apr 12, 2022 | 10:56 PM

ವಿಜಯಪುರ: ಜಮ್ಮು-ಕಾಶ್ಮೀರದ ಶ್ರೀನಗರದ ಸೇನಾ ನೆಲೆಯಲ್ಲಿ ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಮಿಸ್ ಫೈರ್ ಆಗಿ ಜಿಲ್ಲೆಯ ಸಿಐಎಸ್​ಎಫ್ (CISF)​ ಯೋಧ ಸಾವನ್ನಪ್ಪಿರುವಂತಹ ಘಟನೆ ಜಮ್ಮು ಮತ್ತು ಕಾಶ್ಮೀರನ ಶ್ರೀನಗರದಲ್ಲಿ ನಡೆದಿದೆ. ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಬಿಕೆ ಗ್ರಾಮದ ದಯಾನಂದ ಪಾಟೀಲ್ (26) ಮೃತ ಯೋಧ. ಸೇನಾ ನೆಲೆಯಲ್ಲಿ ಮಿಸ್ ಫೈಯರ್ ಆಗಿ ಯೋಧ ದಯಾನಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರಿಗೆ ಸೇನಾಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ. ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಯೋಧ, ಕುಟುಂಬದಲ್ಲಿ ದುಖಃ ಮಡುಗಟ್ಟಿದೆ. ನಾಳೆ ಮೃತ ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸೋ ಸಾಧ್ಯತೆಯಿದೆ.

ಬ್ಯುಸಿನೆಸ್ ಮಿಟಿಂಗ್ ಅಂತ ಹೋದವಳು ಶವವಾಗಿ ಪತ್ತೆ:

ಬೆಂಗಳೂರು: ಬ್ಯುಸಿನೆಸ್ ಮಿಟಿಂಗ್ ಅಂತ ಹೋದವಳು ಶವವಾಗಿ ಪತ್ತೆ ಆಗಿರುವಂತಹ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುನೀತ (54) ಕೊಲೆಯಾದ ಮಹಿಳೆ. ಸುನೀತ ಮಲ್ಲೇಶ್ವರಂ  ನಿವಾಸದಿಂದ ಮಾರ್ಚ್ 31 ರಂದು ಬ್ಯುಸಿನೆಸ್ ಮೀಟಿಂಗ್ ಅಂತ ತೆರಳಿದ್ರು. ಅಂದು ಸಂಜೆಯಾದ್ರೂ ಮನೆಗೆ ವಾಪಸ್ಸಾಗಿರಲಿಲ್ಲ. ಎಲ್ಲ ಕಡೆ ಹುಡುಕಾಡಿ ಕೊನೆಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಿದ್ರು. ನಿನ್ನೆ ಸಂಜೆ ವರ್ತೂರು ಸಮೀಪ ಸುನೀತ ಶವವಾಗಿ ಪತ್ತೆಯಾಗಿದ್ದಾಳೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ವರ್ತೂರು ಪೊಲೀಸರಿಂದ ಹಂತಕನ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ಫಲವತ್ತಾದ ಭೂ ಸ್ವಾಧೀನ ಕೈಬಿಡುವಂತೆ ರೈತರು ಪಟ್ಟು; ಮನವಿ ನೀಡಲು ಬಂದ ರೈತರನ್ನು ತಡೆದ ಪೊಲೀಸರು:

ಬೆಳಗಾವಿ: ಕಣಬರ್ಗಿಯಲ್ಲಿ ನೂತನ ಬಡಾವಣೆಗಾಗಿ ಬುಡಾದಿಂದ‌ ಭೂಸ್ವಾಧೀನ ಮಾಡಲಾಗಿದ್ದು, ಬಿಜೆಪಿ ನಾಯಕರು ತಂಗಿರುವ ಹೋಟೆಲ್‌ಗೆ ರೈತರು ಮುತ್ತಿಗೆಗೆ ಯತ್ನಿಸಿದ್ದಾರೆ. ಫಲವತ್ತಾದ ಭೂ ಸ್ವಾಧೀನ ಕೈಬಿಡುವಂತೆ ರೈತರು ಪಟ್ಟು ಹಿಡಿದಿದ್ದಾರೆ. ಬಿಎಸ್‌ವೈ, ಅರುಣ್ ಸಿಂಗ್​ಗೆ ಮನವಿ ನೀಡಲು ಅವಕಾಶ ನೀಡುವಂತೆ ರೈತರು ಪಟ್ಟು ಹಿಡಿದಿದ್ದಾರೆ. ರೈತರನ್ನು ಗೇಟ್ ಆವರಣದಲ್ಲಿ ತಡೆದ ಪೊಲೀಸರು ಮರಳಿ ಕಳುಹಿಸಲು ಹರಸಾಹಸ ಪಟ್ಟರು. ಪೊಲೀಸರ ಮಾತಿಗೆ ಬೆಲೆ ಕೊಡದೇ ಹೋಟೆಲ್ ಮುತ್ತಿಗೆಗೆ ರೈತರು ಯತ್ನಿಸಿದ್ದಾರೆ. ಮಾಳ ಮಾರುತಿ ಠಾಣೆ ಪೊಲೀಸರು ರೈತರನ್ನು ‌ವಶಕ್ಕೆ ಪಡೆದಿದ್ದಾರೆ.

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಮೂವರು ನೀರುಪಾಲು ತುಮಕೂರು: ಜಿಲ್ಲೆಯ ಒಂದೇ ಕುಟುಂಬದ ಮೂವರು ನೀರುಪಾಲಾಗಿದ್ದಾರೆ. ಆಂಧ್ರಪ್ರದೇಶದ ಪೆರೂರು ಜಲಾಶಯದಲ್ಲಿ ಮೀನು ಹಿಡಿಯಲು ಹೋಗಿ ಮೂವರು ನೀರುಪಾಲಾಗಿದ್ದಾರೆ. ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿಯ ನಾಗರಾಜ್(45), ಸೋದರ ರಾಮಾಂಜಿ(28), ಪುತ್ರಿ ರಕ್ಷಾ(15) ಮೃತರು. ಗಾಳ ಹಾಕಿ ಮೀನು ಹಿಡಿಯುತ್ತಿದ್ದಾಗ ರಕ್ಷಾ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ರಕ್ಷಾ ರಕ್ಷಿಸಲು ಹೋಗಿ ನಾಗರಾಜ್ ಹಾಗೂ ರಾಮಾಂಜಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕಲಬುರಗಿ ನಗರದಲ್ಲಿ ಹೊತ್ತಿ ಉರಿದ ಸೈಕಲ್ ಶಾಪ್ ಕಲಬುರಗಿ ನಗರದಲ್ಲಿ ಬಸವರಾಜ್ ಬಿಲಗುಂದಿ ಎಂಬುವರ ಶಾಪ್ ಬೆಂಕಿಗಾಹುತಿ ಆಗಿದ್ದು ₹15 ಲಕ್ಷಕ್ಕೂ ಹೆಚ್ಚು ಮೌಲ್ಯದ ಸಾಮಗ್ರಿ ಸುಟ್ಟು ಹೋಗಿದೆ. ಶಾರ್ಟ್ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದ ಸಾಧ್ಯತೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:

‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿ ಬರಲಿದೆ ಎರಡು ಕನ್ನಡ ಚಿತ್ರಗಳ ಟೀಸರ್; ಗುಡ್​ ನ್ಯೂಸ್ ಕೊಟ್ಟ ಹೊಂಬಾಳೆ ಫಿಲ್ಮ್ಸ್​

Published On - 10:22 pm, Tue, 12 April 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್