Death Sentence For Killing Wife: ಹೆಂಡತಿಯ ಕೊಂದ ಗಂಡನಿಗೆ ಗಲ್ಲು ಶಿಕ್ಷೆ! ನಾಂಪಲ್ಲಿ ಕ್ರಿಮಿನಲ್ ಕೋರ್ಟ್ನಿಂದ ಸಂಚಲನಾತ್ಮಕ ತೀರ್ಪು
Hyderabad Nampally Criminal Court: ನಾಂಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಹೆಚ್ಚಿನ ವರದಕ್ಷಿಣೆಗಾಗಿ ಇಂಜಾಮ್ ಹಕ್ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನಾಂಪಲ್ಲಿ ಕ್ರಿಮಿನಲ್ ನ್ಯಾಯ ಪೀಠ, ಆರೋಪಿಗೆ ಮರಣದಂಡನೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಹೈದರಾಬಾದ್‌ನ ನಾಂಪಲ್ಲಿ ಕ್ರಿಮಿನಲ್ ಕೋರ್ಟ್ ಸಂಚಲನಾತ್ಮಕ/ ಸಂವೇದನಾಶೀಲ ತೀರ್ಪು ಪ್ರಕಟಿಸಿದೆ. ಹೆಚ್ಚು ಹೆಚ್ಚು ವರದಕ್ಷಿಣೆ ತರುವಂತೆ ಪೀಡಿಸುತ್ತಾ ಪತ್ನಿಯನ್ನು ಕೊಂದ ಪತಿಗೆ ಮರಣದಂಡನೆ ವಿಧಿಸಲಾಗಿದೆ. 2018ಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಆರೋಪಿಗೆ ನಾಂಪಲ್ಲಿ ನ್ಯಾಯಾಲಯ ಗುರುವಾರ ಮರಣದಂಡನೆ ವಿಧಿಸಿದೆ. ವಿವರಗಳ ಪ್ರಕಾರ.. ವರದಕ್ಷಿಣೆ ಪ್ರಕರಣದಲ್ಲಿ ಪತ್ನಿಯನ್ನು ಸಾಯಿಸಿದ್ದ ವ್ಯಕ್ತಿಗೆ ಮರಣದಂಡನೆ ವಿಧಿಸಲಾಗಿದೆ. ಭವಾನಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಜಾಮ್ ಹಕ್ ಎಂಬ ವ್ಯಕ್ತಿ ಹೆಚ್ಚಿನ ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ.
ಇದರೊಂದಿಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಹೆಚ್ಚಿನ ವರದಕ್ಷಿಣೆಗಾಗಿ ಇಂಜಾಮ್ ಹಕ್ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಬಗ್ಗೆ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನಾಂಪಲ್ಲಿ ಕ್ರಿಮಿನಲ್ ನ್ಯಾಯ ಪೀಠ, ಆರೋಪಿಗೆ ಮರಣದಂಡನೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಇದನ್ನೂ ಓದಿ: ಸಾಲ ತೀರಿಸಲು ಪತ್ನಿಯ ₹4.5 ಲಕ್ಷ ಮೌಲ್ಯದ ಕಾರು ಕಳ್ಳತನಕ್ಕೆ ಸಂಚು ರೂಪಿಸಿದ ವ್ಯಕ್ತಿ ಬಂಧನ
ಏತನ್ಮಧ್ಯೆ, ಹೈದರಾಬಾದ್‌ನಲ್ಲಿ ಆರೋಪಿಗೆ ಮರಣದಂಡನೆ ವಿಧಿಸಿರುವುದು ಇದೇ ಮೊದಲು ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ