AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಜರಿ ವೇಳೆ ಬಾಲಕಿಯ ಅಂಗಾಂಗ ಕದ್ದು, ಆಕೆಯ ದೇಹವನ್ನು ಪಾಲಿಥಿನ್ ಬ್ಯಾಗ್​ನಲ್ಲಿ ತುಂಬಿದ ವೈದ್ಯರು!

ಜನವರಿ 21ರಂದು ಕರುಳಿಗೆ ಸಂಬಂಧಿಸಿದ ಸಮಸ್ಯೆಯಿಂದ ಆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಗೆ ಜನವರಿ 24ರಂದು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ, ಜನವರಿ 26ರಂದು ಆಕೆ ಸಾವನ್ನಪ್ಪಿದ್ದಾಳೆ.

ಸರ್ಜರಿ ವೇಳೆ ಬಾಲಕಿಯ ಅಂಗಾಂಗ ಕದ್ದು, ಆಕೆಯ ದೇಹವನ್ನು ಪಾಲಿಥಿನ್ ಬ್ಯಾಗ್​ನಲ್ಲಿ ತುಂಬಿದ ವೈದ್ಯರು!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Feb 01, 2023 | 10:40 AM

Share

ನವದೆಹಲಿ: ದೆಹಲಿಯ ಆಸ್ಪತ್ರೆಯೊಂದರಲ್ಲಿ (Delhi Hospital) ಸರ್ಜರಿಗೆಂದು ಅಡ್ಮಿಟ್ ಆಗಿದ್ದ 15 ವರ್ಷದ ಬಾಲಕಿಯ ಅಂಗಾಂಗಗಳನ್ನು ತೆಗೆದಿಟ್ಟುಕೊಂಡು, ಆಕೆಯ ದೇಹವನ್ನು ಪಾಲಿಥಿನ್ ಚೀಲಗಳಲ್ಲಿ (Polythene Bags) ತುಂಬಿ ಕೊಂದಿರುವ ಭೀಕರ ಘಟನೆ ನಡೆದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಮಗಳನ್ನು ಆಸ್ಪತ್ರೆಗೆ ದಾಖಲಿಸಿದ್ದ ಪೋಷಕರು ಈ ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

ಮಂಗಳವಾರ ಆ ಬಾಲಕಿಯ ಶವಪರೀಕ್ಷೆ ನಡೆಸಲಾಗಿದ್ದು, ಅದರ ವರದಿ ಬಂದ ನಂತರ ಆ ಆರೋಪ ನಿಜವೋ, ಸುಳ್ಳೋ ಎಂಬುದು ಖಚಿತವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ 21ರಂದು ಕರುಳಿಗೆ ಸಂಬಂಧಿಸಿದ ಸಮಸ್ಯೆಯಿಂದ ಆ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಗೆ ಜನವರಿ 24ರಂದು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಆದರೆ, ಜನವರಿ 26ರಂದು ಆಕೆ ಸಾವನ್ನಪ್ಪಿದ್ದಾಳೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: Crime News: ಹೆಂಡತಿಯನ್ನು ಕೊಂದು ಡ್ರಮ್​ನಲ್ಲಿ 1 ವರ್ಷ ಶವ ಬಚ್ಚಿಟ್ಟ ಗಂಡ!; ಆಂಧ್ರದಲ್ಲೊಂದು ಭಯಾನಕ ಘಟನೆ

ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಪೊಲೀಸ್ ಉಪ ಆಯುಕ್ತ (ಡಿಸಿಪಿ) (ಉತ್ತರ) ಸಾಗರ್ ಸಿಂಗ್ ಕಲ್ಸಿ, ಬಾಲಕಿಯ ಕುಟುಂಬದವರು ಯಾವುದೇ ದೂರು ನೀಡದೆ ಶವವನ್ನು ಮನೆಗೆ ಕೊಂಡೊಯ್ದಿದ್ದಾರೆ. ನಂತರ ಅವರು ಪೊಲೀಸರಿಗೆ ಕರೆ ಮಾಡಿ ವೈದ್ಯರು ತಮ್ಮ ಮಗಳ ಅಂಗಾಂಗಗಳನ್ನು ತೆಗೆದಿರಬಹುದು ಎಂದು ಶಂಕಿಸಿದ್ದಾರೆ. ಮೃತ ಬಾಲಕಿಯ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸುತ್ತಿದ್ದಾಗ ಆಕೆಯ ಕುಟುಂಬದವರು ಈ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾಮುಕನ ಅಟ್ಟಹಾಸ; ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ

ದೂರಿನ ನಂತರ ಸ್ಥಳೀಯ ಪೊಲೀಸ್ ತಂಡವು ಶವವನ್ನು ವಶಕ್ಕೆ ತೆಗೆದುಕೊಂಡಿತು. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. 15 ವರ್ಷದ ಬಾಲಕಿ ಸರ್ಜರಿ ಬಳಿಕ ಎಂಸಿಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಆ ಬಾಲಕಿಯ ಶವಪರೀಕ್ಷೆ ನಡೆಸಲು ವೈದ್ಯಕೀಯ ಮಂಡಳಿಯನ್ನು ರಚಿಸುವಂತೆ ದೆಹಲಿ ಪೊಲೀಸರು ದೆಹಲಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್