ಕೊಲೆಯತ್ನ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಉದ್ಯಮಿಯ ಹತ್ಯೆ

ಕೊಲೆಯತ್ನ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಉದ್ಯಮಿಯನ್ನು ನಾಲ್ವರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಕೊಲೆಯತ್ನ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಉದ್ಯಮಿಯ ಹತ್ಯೆ
ಸಾವು
Follow us
|

Updated on: Jul 11, 2024 | 2:14 PM

ಕೊಲೆಯತ್ನ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಉದ್ಯಮಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಈಶಾನ್ಯ ದೆಹಲಿಯ ಭಜನ್​ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಉದ್ಯಮಿ ಜೈಲಿನಿಂದ ಹೊರಬರುತ್ತಿದ್ದಂತೆ 3-4 ಯುವಕರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಟೂರ್ ಮತ್ತು ಟ್ರಾವೆಲ್ ವ್ಯವಹಾರವನ್ನು ಹೊಂದಿದ್ದ ಮತ್ತು ಜಿಮ್ ತರಬೇತುದಾರರಾಗಿದ್ದ ಸುಮಿತ್ ಅವರ ಮುಖ, ಕುತ್ತಿಗೆ, ಎದೆ ಮತ್ತು ಹೊಟ್ಟೆಯ ಮೇಲೆ 17 ಇರಿತದ ಗಾಯಗಳಾಗಿವೆ. ಹಲ್ಲೆ ಬಳಿಕ ಸಮಿತ್​ ಅವರನ್ನು ಜೆಪಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಸುಮಿತ್ ಅವರು ಗಮ್ರಿ ಎಕ್ಸ್‌ಟೆನ್ಶನ್‌ನಲ್ಲಿರುವ ತಮ್ಮ ಮನೆಯ ಹೊರಗೆ ಕುಳಿತಿದ್ದಾಗ ಈ ಘಟನೆ ನಡೆದಿದೆ. ಸುಮಿತ್ 3–4 ಹುಡುಗರೊಂದಿಗೆ ಮಾತಿನ ಚಕಮಕಿ ನಡೆಸಿದ ನಂತರ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುಮಿತ್ ನೆಲದ ಮೇಲೆ ಚಲನರಹಿತವಾಗಿ ಮಲಗಿದ್ದರೂ ಹುಡುಗರು ಚೂರಿಯಿಂದ ಇರಿಯುತ್ತಲೇ ಇದ್ದರು.

ಮತ್ತಷ್ಟು ಓದಿ: Crime: ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ

ಸುಮಿತ್ ಮದುವೆಯಾಗಿದ್ದು, ಮೂರು ವರ್ಷದ ಮಗನಿದ್ದಾನೆ. ಕೊಲೆ ಯತ್ನ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಆತನಿಗೆ ಇತ್ತೀಚೆಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದ್ದು, ಆರೋಪಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.

ದೆಹಲಿಯ ಮತ್ತೊಂದು ಘಟನೆಯಲ್ಲಿ, ಜುಗ್ಗಿ ಡೇರಾ ಗಾಜಿ ಖಾನ್ ಪ್ರದೇಶದ ಬಳಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಮಹಿಳೆಯ ಸಹೋದರ ಥಳಿಸಿ ಕೊಂದಿದ್ದರು. ಆರೋಪಿ ನಗರದಿಂದ ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್