Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ಮದುವೆಯಾಗಲು ಒಲ್ಲೆ ಎಂದಿದ್ದಕ್ಕೆ ಸ್ನೇಹಿತನಿಂದ ವಿದ್ಯಾರ್ಥಿನಿ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ, ಸ್ಥಳದಲ್ಲೇ ಸಾವು

ಮದುವೆಯಾಗಲು ಒಪ್ಪದಿದ್ದಕ್ಕೆ ವ್ಯಕ್ತಿಯೊಬ್ಬ ವಿದ್ಯಾರ್ಥಿನಿ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

Delhi Crime: ಮದುವೆಯಾಗಲು ಒಲ್ಲೆ ಎಂದಿದ್ದಕ್ಕೆ ಸ್ನೇಹಿತನಿಂದ ವಿದ್ಯಾರ್ಥಿನಿ ಮೇಲೆ  ಕಬ್ಬಿಣದ ರಾಡ್​ನಿಂದ ಹಲ್ಲೆ, ಸ್ಥಳದಲ್ಲೇ ಸಾವು
ಪೊಲೀಸ್Image Credit source: ANI
Follow us
ನಯನಾ ರಾಜೀವ್
|

Updated on: Jul 28, 2023 | 3:22 PM

ಮದುವೆಯಾಗಲು ಒಪ್ಪದಿದ್ದಕ್ಕೆ ವ್ಯಕ್ತಿಯೊಬ್ಬ ವಿದ್ಯಾರ್ಥಿನಿ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ದೆಹಲಿಯ ಮಾಳವೀಯಾ ನಗರದಲ್ಲಿ ಶುಕ್ರವಾರ ಕಮಲಾ ನೆಹರು ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ರಾಡ್‌ನಿಂದ ಹಲ್ಲೆ ನಡೆಸಲಾಗಿದ್ದು, ಆಕೆ ಮೃತಪಟ್ಟಿದ್ದಾಳೆ. ಕೊಲೆಯಾದ ವಿದ್ಯಾರ್ಥಿನಿ ಹೆಸರು ನರ್ಗಿಸ್​, ಆಕೆ ತನ್ನ ಸ್ನೇಹಿತನೊಂದಿಗೆ ಉದ್ಯಾನಕ್ಕೆ ಬಂದಿದ್ದಳು, ಕೊಲೆಗೆ ಸಂಬಂಧಿಸಿದಂತೆ ಆಕೆಯ ಸ್ನೇಹಿತ ಇರ್ಫಾನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ತನ್ನ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದರಿಂದ ಕೋಪಗೊಂಡು ಹಲ್ಲೆ ನಡೆಸಿರುವುದಾಗಿ ಆರೋಪಿ ತಿಳಿಸಿದ್ದಾನೆ. ದೆಹಲಿಯ ಅರಬಿಂದೋ ಕಾಲೇಜು ಬಳಿಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಸಂತ್ರಸ್ತೆಯ ಕುಟುಂಬವು ಅವರ ಮದುವೆಯನ್ನು ನಿರಾಕರಿಸಿತ್ತು ಮತ್ತು ನರ್ಗಿಸ್ ಇರ್ಫಾನ್ ಜೊತೆ ಮಾತನಾಡುವುದನ್ನು ನಿಲ್ಲಿಸಿದ್ದಳು. ನರ್ಗೀಸ್ ತನ್ನೊಂದಿಗೆ ಮಾತನಾಡುವುದನ್ನು ನಿಲ್ಲಿಸಿದ ನಂತರ ಆತ ಅಸಮಾಧಾನಗೊಂಡಿದ್ದ. ಈ ವರ್ಷ ಪದವಿ ಮುಗಿಸಿದ ಸಂತ್ರಸ್ತೆ ಮಾಳವೀಯಾ ನಗರದಲ್ಲಿ ಕೋಚಿಂಗ್ ತರಗತಿಗಳಿಗೆ ಬರುತ್ತಿದ್ದಳು.

ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಉಪ ಪೊಲೀಸ್ ಆಯುಕ್ತ (ದಕ್ಷಿಣ) ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದರು. ಆಕೆಯ ದೇಹದ ಬಳಿ ರಾಡ್ ಪತ್ತೆಯಾಗಿದೆ, ತಲೆಯ ಮೇಲೆ ಗಾಯಗಳಿದ್ದವು, ಈ ಹತ್ಯೆಗೆ ಸಂಬಂಧಿಸಿದಂತೆ ಇರ್ಫಾನ್ ವಿಚಾರಣೆ ನಡೆಸುತ್ತಿದ್ದಾರೆ.

Delhi Murder: ಮಹಿಳೆಯನ್ನು ಹತ್ಯೆ ಮಾಡಿ, ಟೆರೇಸ್​ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಆರೋಪಿ

ಪೊಲೀಸರು ಹೇಳಿದ್ದೇನು? ದಕ್ಷಿಣ ದೆಹಲಿಯ ಮಾಳವೀಯ ನಗರದ ಅರಬಿಂದೋ ಕಾಲೇಜು ಬಳಿ 25 ವರ್ಷದ ಯುವತಿಯ ಶವ ಪತ್ತೆಯಾಗಿದೆ ಎನ್ನುವ ಮಾಹಿತಿ ನಮಗೆ ಬಂದಿತ್ತು, ಆಕೆಯ ದೇಹದ ಬಳಿ ಕಬ್ಬಿಣದ ರಾಡ್ ಪತ್ತೆಯಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ, ಬಾಲಕಿಯ ಮೇಲೆ ರಾಡ್​ನಿಂದ ಹಲ್ಲೆ ನಡೆಸಲಾಗಿದೆ, ಆಕೆಯ ತಲೆಯಿಂದ ರಕ್ತದ ಕೋಡಿಯೇ ಹರಿಯುತ್ತಿತ್ತು, ತನಿಖೆ ಪ್ರಗತಿಯಲ್ಲಿದೆ ಎಂದಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ