ದೆಹಲಿ: ಬಾಲಕಿ ಮೇಲೆ ತಾಯಿಯ ಲಿವ್ ಇನ್ ಸಂಗಾತಿಯಿಂದ ಅತ್ಯಾಚಾರ
ಉತ್ತರ ದೆಹಲಿಯ ಬುರಾರಿ ಪ್ರದೇಶದಲ್ಲಿ 14 ವರ್ಷದ ಬಾಲಕಿಯ ಮೇಲೆ ಆಕೆಯ ತಾಯಿಯ ಲಿವ್-ಇನ್ ಸಂಗಾತಿ ಅತ್ಯಾಚಾರವೆಸಗಿರುವ ಸಂಗತಿ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ), ಮತ್ತು 506 (ಕ್ರಿಮಿನಲ್ ಬೆದರಿಕೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಬುರಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಅಂಕಿತ್ ಯಾದವ್ (29) ಗಾಜಿಯಾಬಾದ್‌ನ ಲೋನಿ ನಿವಾಸಿಯಾಗಿದ್ದು, ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಮಹಿಳೆಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ, ಆಕೆ ಎಂಟು ವರ್ಷಗಳ ಹಿಂದೆ ತನ್ನ ಪತಿಯನ್ನು ತೊರೆದಿದ್ದಳು. ನಂತರ ಬಸ್ ಚಾಲಕ ಯಾದವ್ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದಳು ಎಂದು ಎಫ್ಐಆರ್ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.
ಜುಲೈ 23 ರಂದು ಮಹಿಳೆ ಆಸ್ಪತ್ರೆಯಲ್ಲಿದ್ದು ಮಕ್ಕಳನ್ನು ಮನೆಯಲ್ಲಿ ಬಿಟ್ಟು ಹೋಗಿದ್ದಳು, ಅಂದು ಯಾದವ್ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಮತ್ತಷ್ಟು ಓದಿ: ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ದರೋಡೆ; ಐವರು ಆರೋಪಿಗಳು ಅರೆಸ್ಟ್
ಮಹಿಳೆ ಪೊಲೀಸರಿಗೆ ವಿಷಯ ತಿಳಿಸಿದ್ದು, ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ಮತ್ತು ಸಮಾಲೋಚನೆ ನಡೆಸಲಾಗಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಸೆಕ್ಷನ್ 164 ರ ಅಡಿಯಲ್ಲಿ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ