Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ

ದೆಹಲಿಯಲ್ಲಿ ಮಹಿಳೆಯೊಬ್ಬರ ಹತ್ಯೆ ನಡೆದಿದ್ದು ಒಂದು ದಿನದೊಳಗೇ ಕೊಲೆಗಾರನನ್ನು ಪತ್ತೆಹಚ್ಚಲಾಗಿದೆ. 71 ವರ್ಷದ ಪತಿ ತನ್ನ 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ನೀಡಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ
ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: May 18, 2023 | 8:44 AM

ದೆಹಲಿಯಲ್ಲಿ ಮಹಿಳೆಯೊಬ್ಬರ ಹತ್ಯೆ ನಡೆದಿದ್ದು ಒಂದು ದಿನದೊಳಗೇ ಕೊಲೆಗಾರನನ್ನು ಪತ್ತೆಹಚ್ಚಲಾಗಿದೆ. 71 ವರ್ಷದ ಪತಿ ತನ್ನ 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ನೀಡಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಪಶ್ಚಿಮ ದೆಹಲಿಯ ರಾಜೌರಿ ಗಾರ್ಡನ್ ಪ್ರದೇಶದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆ ಮೃತಪಟ್ಟಿರುವುದು ಕಂಡು ಬಂದಿದೆ. ಆಕೆಯ ದೇಹದ ಮೇಲೆ ಅನೇಕ ಇರಿತದ ಗಾಯಗಳಿದ್ದವು.

ವಿಚಾರಣೆ ವೇಳೆ ಸಂತ್ರಸ್ತೆ ಕಳೆದ ವರ್ಷ ನವೆಂಬರ್‌ನಲ್ಲಿ ಎಸ್‌ಕೆ ಗುಪ್ತಾ ಅವರನ್ನು ವಿವಾಹವಾಗಿದ್ದರು ಎಂದು ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಪ್ತಾ ಅವರ ಮಗ ವಿಶೇಷ ಚೇತನರಾಗಿದ್ದು ಅವರನ್ನು ನೋಡಿಕೊಳ್ಳುವ ಉದ್ದೇಶದಿಂದ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ. ಆದರೆ ಕೆಲವೇ ದಿನಗಳಲ್ಲಿ ವಿಚ್ಛೇದನ ಬೇಕು ಎಂದು ಕೇಳಿದ್ದಳು, ಜತೆಗೆ 1 ಕೋಟಿ ರೂ ಪರಿಹಾರವೂ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಳು.

ಮತ್ತಷ್ಟು ಓದಿ: ಕೌಟುಂಬಿಕ ಕಲಹ ಹಿನ್ನಲೆ ಪತಿಯಿಂದಲೇ ಪತ್ನಿಯ ಕೊಲೆ; ಮದುವೆ ಮನೆಯಲ್ಲೀಗ ಸೂತಕದ ಛಾಯೆ

ಹಾಗಾಗಿ ಪತ್ನಿಯನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು.ಪೊಲೀಸರ ಪ್ರಕಾರ, ಗುಪ್ತಾ ತನ್ನ ಮಗ ಅಮಿತ್‌ನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆರೋಪಿ ವಿಪಿನ್‌ನೊಂದಿಗೆ ಸಂಪರ್ಕ ಹೊಂದಿದ್ದ, ಪತ್ನಿಯನ್ನು ಕೊಲ್ಲಲು 10 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿ 2.40 ಲಕ್ಷ ರೂ ಮುಂಗಡವಾಗಿ ನೀಡಿದ್ದ ಎನ್ನುವ ವಿಚಾರ ತಿಳಿದುಬಂದಿದೆ.

ಯೋಜನೆಯಂತೆ ಆರೋಪಿ ಹಿಮಾಂಶು ಸೇರಿ ಮನೆಗೆ ಹೋಗಿ ಮಹಿಳೆಗೆ ಚಾಕುವಿನಿಂದ ಇರಿದಿದ್ದ. ಪೊಲೀಸರ ದಾರಿ ತಪ್ಪಿಸುವ ಸಲುವಾಗಿ ಮನೆಯಿಂದ ಚಿನ್ನಾಭರಣಗಳನ್ನು ಲೂಟಿ ಮಾಡಿದ್ದರು. ಮೊಬೈಲ್​ ಫೋನ್​ಗಳನ್ನು ಕೂಡ ಕದ್ದಿದ್ದರು. ಕೊಲೆ ನಡೆದಾಗ ಅಮಿತ್ ಮನೆಯಲ್ಲಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ತನಿಖೆಯ ಆಧಾರದ ಮೇಲೆ, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಾದ ಎಸ್‌ಕೆ ಗುಪ್ತಾ, ಅವರ ಮಗ ಅಮಿತ್ ಮತ್ತು ಇಬ್ಬರು ಗುತ್ತಿಗೆ ಹಂತಕರಾದ ವಿಪಿನ್ ಸೇಥಿ (45) ಮತ್ತು ಹಿಮಾಂಶು (20) ಅವರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಅವರು ಅಪರಾಧದಲ್ಲಿ ತಮ್ಮ ಪಾತ್ರವನ್ನು ಒಪ್ಪಿಕೊಂಡಿದ್ದಾರೆ. ಅಪರಾಧಕ್ಕೆ ಬಳಸಿದ ಫೋನ್‌ಗಳು, ರಕ್ತಸಿಕ್ತ ಬಟ್ಟೆಗಳು ಮತ್ತು ಸ್ಕೂಟರ್‌ಗಳನ್ನು ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ