Delhi Crime: ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು, ಬಳಿಕ ಮಕ್ಕಳ ಮೇಲೂ ಹಲ್ಲೆ ನಡೆಸಿದ ವ್ಯಕ್ತಿಯ ಬಂಧನ
ವ್ಯಕ್ತಿಯೊಬ್ಬ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು, ಮಕ್ಕಳ ಮೇಲೂ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದಕ್ಷಿಣ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ವ್ಯಕ್ತಿಯೊಬ್ಬ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು, ಮಕ್ಕಳ ಮೇಲೂ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದಕ್ಷಿಣ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 55 ವರ್ಷದ ಪ್ರಾಪರ್ಟಿ ಡೀಲರ್ ತನ್ನ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿ ಕೊಂಡು ಬಳಿಕ ಮಗ, ಮಗಳ ಮೇಲೂ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ವಿಜಯ್ ವೀರ್ ತನ್ನ 50 ವರ್ಷದ ಪತ್ನಿಯೊಂದಿಗೆ ವರದಕ್ಷಿಣೆ ವಿಚಾರವಾಗಿ ಆಗಾಗ ಜಗಳವಾಡುತ್ತಿದ್ದ, ಗುರುವಾರವೂ ಕೂಡ ಜಗಳವಾಡಿ ಆಕೆ ಮಲಗಿದ ಬಳಿಕ ಕೊಡಲಿಯಿಂದ ಹಲ್ಲೆ ನಡೆಸಿದ್ದ. ಪೊಲೀಸರ ಪ್ರಕಾರ, ದಂಪತಿ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು, ವೀರ್ ವಿವಾಹೇತರ ಸಂಬಂಧ ಹೊಂದಿದ್ದರು, ಅದನ್ನು ಪತ್ನಿ ವಿರೋಧಿಸಿದ್ದರು ಎನ್ನಲಾಗಿದೆ.
ತನ್ನ ಮಕ್ಕಳು ಕೂಡ ಪತ್ನಿಯನ್ನು ವಹಿಸಿಕೊಂಡು ಮಾತನಾಡುವುದನ್ನು ಅವರಿಗೆ ಒಪ್ಪಲಾಗಲಿಲ್ಲ, ಹಾಗಾಗಿ ಅವರ ಮೇಲೂ ಹಲ್ಲೆ ನಡೆಸಿದ್ದಾರೆ. ಮಗಳು ಕಾನೂನು ಪದವೀಧರೆಯಾಗಿದ್ದು, ಈ ವಿಷಯವನ್ನು ತಕ್ಷಣವೇ ಪೊಲೀಸರಿಗೆ ತಿಳಿಸಿದ್ದರು. ಪೊಲೀಸರು ಸ್ಥಳಕ್ಕಾಗಮಿಸಿದಾಗ, ಕುತ್ತಿಗೆಗೆ ಅನೇಕ ಗಾಯಗಳೊಂದಿಗೆ ರಕ್ತದ ಮಡುವಿನಲ್ಲಿ ಹಾಸಿಗೆಯ ಮೇಲೆ ಮಲಗಿದ್ದ ಪತ್ನಿ ಸುಮನ್ ಪತ್ತೆಯಾಗಿದ್ದಾರೆ, ವಿಜಯ್ ವೀರ್ ಕೂಡ ಗಾಯಗೊಂಡಿದ್ದರು.
ಮತ್ತಷ್ಟು ಓದಿ: ಮಂಡ್ಯ: ಎಣ್ಣೆ ನಶೆಯಲ್ಲಿ ಕಿರಿಕ್: ಅತ್ತಿಗೆ, ಅಣ್ಣನ ಮಗನನ್ನ ಕತ್ತರಿಸಿ ಕೊಂದ ಬಾಮೈದ
ಪೊಲೀಸರು ನಾಲ್ವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಸುಮನ್ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಪೊಲೀಸರ ಪ್ರಕಾರ, ಸುಮನ್ 1992 ರಲ್ಲಿ ಉತ್ತರ ಪ್ರದೇಶದ ಗಡ್ ಮುಕ್ತೇಶ್ವರ ಮೂಲದ ವೀರ್ ಅವರನ್ನು ವಿವಾಹವಾದರು, ದಂಪತಿ ನೆಬ್ ಸರೈನಲ್ಲಿ ಅವರ ಸಂಬಂಧಿಕರ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದರು.
ಪೊಲೀಸರು ಆತನ ಪೂರ್ವಾಪರವನ್ನು ಪರಿಶೀಲಿಸಿದಾಗ, ವಿಜಯ್ ವೀರ್ 2017 ರಲ್ಲಿ ತನ್ನ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದಾಗ ತನ್ನ ಮಗನ ಮೇಲೆ ಗುಂಡು ಹಾರಿಸಿ ಶಶಾಂಕ್ ಅನ್ನು ಗಾಯಗೊಳಿಸಿದ್ದಕ್ಕಾಗಿ ಬಂಧನಕ್ಕೆ ಒಳಗಾಗಿದ್ದ ಎನ್ನುವ ಮಾಹಿತಿ ತಿಳಿದುಬಂದಿದೆ.
ಕುಟುಂಬವು ಆರೋಪ ನಿರಾಕರಿಸಿದ್ದರಿಂದ ಬಳಿಕ ಆತನನ್ನು ಬಿಡುಗಡೆ ಮಾಡಲಾಗಿತ್ತು. ವೀರ್ ವಿರುದ್ಧ ಕೊಲೆ ಮತ್ತು ಕೊಲೆ ಯತ್ನದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಹೆಚ್ಚಿನ ತನಿಖೆ ನಡೆಯುತ್ತಿದೆ.
ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ