Delhi Crime News: 55 ವರ್ಷದ ಮಹಿಳೆಯನ್ನು ಗುಂಡಿಕ್ಕಿ ಕೊಂದ ಮಗಳ ಮಾಜಿ ಪ್ರಿಯಕರ

55 ವರ್ಷದ ಮಹಿಳೆಯನ್ನು ಆಕೆಯ ಮಗಳ ಮಾಜಿ ಗೆಳೆಯ ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ದೆಹಲಿಯ ಸರಾಯ್ ರೋಹಿಲ್ಲಾ ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Delhi Crime News: 55 ವರ್ಷದ ಮಹಿಳೆಯನ್ನು ಗುಂಡಿಕ್ಕಿ ಕೊಂದ ಮಗಳ ಮಾಜಿ ಪ್ರಿಯಕರ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 06, 2023 | 10:47 AM

ದೆಹಲಿ: 55 ವರ್ಷದ ಮಹಿಳೆಯನ್ನು ಆಕೆಯ ಮಗಳ ಮಾಜಿ ಗೆಳೆಯ ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ದೆಹಲಿಯ ಸರಾಯ್ ರೋಹಿಲ್ಲಾ ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ಕುರಿತು ಪೊಲೀಸರಿಗೆ ಅಂದು ಸಂಜೆ 4 ಗಂಟೆಗೆ ಮಾಹಿತಿ ನೀಡಲಾಗಿದ್ದು. ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗುಂಡಿಕ್ಕಿ ಕೊಂದಿರುವ ಬಗ್ಗೆ ಪತ್ತೆಯಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ತಿಳಿಸಿದ್ದಾರೆ. ಸಾವನ್ನಪಿರುವ ಮಹಿಳೆಯನ್ನು ಪೂನಂ ಎಂದು ಗುರುತಿಸಲಾಗಿದೆ, ಪೂನಂ ಅವರ ಮಗಳ ಮಾಜಿ ಗೆಳೆಯ ಅಂಕಿತ್​ ಕೌಶಿಕ್​ ಕೊಂದಿರುವ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ. ಪೂನಂ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಇದೀಗ ಅವರ ದೇಹವನ್ನು ಮನೆಯವರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದ್ದಾರೆ. ಅಂಕಿತ್​ ಕೌಶಿಕ್ ಎಂಬ ಯುವಕನನ್ನು ಹುಡುಕಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:Crime News ಅಪರಾಧ ಸುದ್ದಿ ರೌಂಡಪ್: ರೈಲಿಗೆ ತಲೆ ಕೊಟ್ಟ ಪ್ರೇಮಿಗಳು, ಡ್ರಗ್ಸ್ ಪೆಡ್ಲರ್ ಅರೆಸ್ಟ್

ಇನ್ನೂ ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಪೂನಂ ಅವರು ಮಗಳು ಮತ್ತು ಅಂಕಿತ್​ ಕೌಶಿಕ್ ಪ್ರೀತಿಸುತ್ತಿದ್ದು, ನಂತರ ಇಬ್ಬರು ದೂರವಾಗಿದ್ದಾರೆ, ನೀನು ನೀಡಿದ ಗಿಫ್ಟ್​​​ನ್ನು ತೆಗೆದುಕೊಂಡು ಹೋಗುವಂತೆ ಅಂಕಿತ್​ ಕೌಶಿಕ್​​ಗೆ ಪೂನಂ ಅವರ ಮಗಳು ತಿಳಿಸಿದ್ದಾಳೆ. ಅಂಕಿತ್​ ಕೌಶಿಕ್ ಪೂನಂ ಅವರ ಮನೆಗೆ ಬಂದಾಗ ನಿನ್ನ ಗಿಫ್ಟ್ ತೆಗೆದುಕೊಂಡು ಹೋಗು ಎಂದು ಅವಾಜ್​​ ಹಾಕಿದ್ದಾಳೆ, ಇಬ್ಬರ ನಡುವೆ ಮಾತು ಚಕಮಕಿ ನಡೆದಿದೆ, ಇದರಿಂದ ಕೋಪಗೊಂಡ ಅಂಕಿತ್​ ಕೌಶಿಕ್ ಪಿಸ್ತೂಲ್​​ ತೆಗೆದು ಗುಂಡು ಹಾರಿಸಲು ಮುಂದಾಗಿದ್ದಾನೆ.

ಈ ಸಮಯದಲ್ಲಿ ಆಕೆಯ ತಾಯಿ ಪೂನಂ ಕೂಡ ಪಕ್ಕದಲ್ಲಿ ನಿಂತಿದ್ದರು, ಇಬ್ಬರ ಜಗಳದ ನಡುವೆ ತಾಯಿ ಮಧ್ಯೆ ಬಂದು ಜಗಳ ನಿಲ್ಲಿಸಲು ಮುಂದಾಗಿದ್ದಾರೆ. ಆದರೆ ಅಂಕಿತ್​ ಕೌಶಿಕ್, ಪೂನಂ ತಲೆಗೆ ಗುಂಡು ಹಾರಿಸಿದ್ದಾನೆ. ನಂತರ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಡ ರಚನೆ ಮಾಡಲಾಗಿದೆ, ಖಂಡಿತ ಆತನನ್ನು ಪತ್ತೆ ಮಾಡುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್