Delhi Crime: ದೆಹಲಿಯಲ್ಲಿ ನಡುರಸ್ತೆಯಲ್ಲೇ ಮಹಿಳೆಗೆ ಗುಂಡಿಕ್ಕಿ ಹತ್ಯೆ

ನಯನಾ ರಾಜೀವ್

|

Updated on:Jan 31, 2023 | 9:02 AM

ಕೆಲಸ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯ ಪಶ್ಚಿಮ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.

Delhi Crime: ದೆಹಲಿಯಲ್ಲಿ ನಡುರಸ್ತೆಯಲ್ಲೇ ಮಹಿಳೆಗೆ ಗುಂಡಿಕ್ಕಿ ಹತ್ಯೆ
Crime Scene

ಕೆಲಸ ಮುಗಿಸಿ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯ ಪಶ್ಚಿಮ್ ವಿಹಾರ್ ಪ್ರದೇಶದಲ್ಲಿ ನಡೆದಿದೆ.ಆರೋಪಿ ಮಹಿಳೆಯ ಸ್ಕೂಟಿ ಸಮೇತ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಮಾಹಿತಿ ಪ್ರಕಾರ 32 ವರ್ಷದ ಜ್ಯೋತಿ ಎಂಬಾಕೆಗೆ ಮದುವೆಯಾಗಿದ್ದು, ಆಕೆಗೆ 3 ಮಕ್ಕಳಿದ್ದಾರೆ. ಜ್ಯೋತಿ ಅವರು ಫ್ಲಿಪ್‌ಕಾರ್ಟ್‌ನ ಕೊರಿಯರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಸೋಮವಾರ ಸಂಜೆ 7.30ರ ಸುಮಾರಿಗೆ ಕಚೇರಿಯಿಂದ ಮನೆಗೆ ಹೋಗುತ್ತಿದ್ದಳು. ಆಗ ಪಶ್ಚಿಮ ವಿಹಾರ್ ಪ್ರದೇಶದಲ್ಲಿ ಅಪರಿಚಿತ ದುಷ್ಕರ್ಮಿಗಳು ಅವರಿಗೆ ಗುಂಡು ಹಾರಿಸಿ ಸ್ಕೂಟಿ ಸಮೇತ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯ ನಂತರ ಪೊಲೀಸರು ಈ ಪ್ರಕರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲು ಪ್ರಾರಂಭಿಸಿದ್ದಾರೆ, ಇದರಿಂದಾಗಿ ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ.

ಮಹಿಳೆ ತನ್ನ ಪತಿ ಮತ್ತು ಮೂವರು ಮಕ್ಕಳೊಂದಿಗೆ ನಿಹಾಲ್ ವಿಹಾರ್‌ನಲ್ಲಿ ವಾಸಿಸುತ್ತಿದ್ದರು. ಘಟನೆ ಬಗ್ಗೆ ಮಾಹಿತಿ ಪಡೆದ ಮಹಿಳೆಯ ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಜ್ಯೋತಿ ನಮ್ಮೊಂದಿಗಿಲ್ಲ ಎಂಬುದನ್ನು ನಂಬಲಾಗುತ್ತಿಲ್ಲ, ಆಕೆಗೆ ಯಾರೊಂದಿಗೂ ದ್ವೇಷವಿಲ್ಲ ಎಂದು ಸಂಬಂಧಿಕರು ತಿಳಿಸಿದ್ದಾರೆ. ಹಾಗಾಗಿ ಆಕೆಯನ್ನು ಏಕೆ ಕೊಂದರು ಎಂಬುದು ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಪತ್ನಿಯನ್ನು ಕೊಲೆಗೈದು ಪೀಸ್ ಪೀಸ್ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ದೊಡ್ಡಬಳ್ಳಾಪುರ ಕೋರ್ಟ್

ಕೊಲೆಗೆ ಕಾರಣ ಏನು ಎಂಬುದು ಸಂಬಂಧಿಕರಿಗೆ ತಿಳಿದಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಸ್ಕ್ಯಾನ್ ಮಾಡುತ್ತಿದ್ದು, ಆರೋಪಿಗಳ ಗುರುತು ಪತ್ತೆ ಹಚ್ಚಲು ಸಾಧ್ಯವಾಗಬಹುದು ಎನ್ನಲಾಗಿದೆ.

ಆರೋಪಿಗೆ ಮಹಿಳೆ ಈಗಾಗಲೇ ತಿಳಿದಿರುವ ಸಾಧ್ಯತೆಯಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ, ಪೊಲೀಸರು ಈ ಕೋನದಲ್ಲೂ ತನಿಖೆ ನಡೆಸುತ್ತಿದ್ದಾರೆ.

ಶೀಘ್ರದಲ್ಲೇ ಸಂಪೂರ್ಣ ವಿಷಯವನ್ನು ಬಹಿರಂಗಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದು, ಅದೇ ವೇಳೆ ಮಹಿಳೆಯ ಸಂಬಂಧಿಕರಿಗೆ ಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ.

ಇತರೆ ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada