ದೆಹಲಿ: ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ
ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆಯ ಹಿಂದೆ ಆಕೆಯ ಲಿವ್ ಇನ್ ಸಂಗಾತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕರೆ ಮಾಡುತ್ತಿದ್ದರು ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು.
ನೈಋತ್ಯ ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆಯ ಹಿಂದೆ ಆಕೆಯ ಲಿವ್ ಇನ್ ಸಂಗಾತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕರೆ ಮಾಡುತ್ತಿದ್ದರು ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ರಾತ್ರಿ ಪೊಲೀಸರಿಗೆ ಕರೆ ಬಂದಿದೆ, ಮಹಿಳೆಯ ತಂದೆ ತನ್ನ ಮಗಳನ್ನು ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು.
ನಂತರ ದಾಬ್ರಿ ಪೊಲೀಸ್ ಠಾಣೆಯ ತಂಡವು ದ್ವಾರಕಾದ ರಾಜಪುರಿ ಪ್ರದೇಶದಲ್ಲಿ ಹೇಳಿದ ಮನೆಗೆ ಹೋಗಿದ್ದಾರೆ. ಫ್ಲಾಟ್ಗೆ ತೆರಳಿದಾಗ ಆಕೆಯ ಮೃತದೇಹವು ರೂಮಿನ ಕಪಾಟಿನಲ್ಲಿ ಪತ್ತೆಯಾಗಿದೆ. ಮಹಿಳೆಯ ತಂದೆ, ತನ್ನ ಮಗಳನ್ನು ಆಕೆಯ ಲೈವ್-ಇನ್ ಸಂಗಾತಿ ವಿಪಾಲ್ ಹತ್ಯೆ ಮಾಡಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಮಗಳೊಂದಿಗೆ ಕೊನೆಯ ಬಾರಿಗೆ ಮಾತನಾಡಿದ್ದರ ಬಗ್ಗೆ ಹೇಳಿದ ಅವರು, ವಿಪಾಲ್ ಮಗಳನ್ನು ಥಳಿಸುತ್ತಿದ್ದ, ಆಕೆಗೆ ತನ್ನನ್ನು ಕೊಲೆ ಮಾಡಬಹುದೆಂಬ ಭಯವಿತ್ತು ಎಂದಿದ್ದಾರೆ.
ಕಳೆದ ಒಂದೂವರೆ ತಿಂಗಳಿನಿಂದ ತನ್ನ ಮಗಳು ವಿಪಾಲ್ ಜೊತೆ ಬಾಡಿಗೆ ಫ್ಲಾಟ್‌ನಲ್ಲಿ ವಾಸವಾಗಿದ್ದಳು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.
ಮತ್ತಷ್ಟು ಓದಿ: ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್ನಲ್ಲಿ 30 ಮಂಗಗಳ ಶವ ಪತ್ತೆ
ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಡಿಡಿಯು ಆಸ್ಪತ್ರೆಯ ಶವಾಗಾರಕ್ಕೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಗುಜರಾತ್‌ನ ಸೂರತ್ ಮೂಲದ ಆರೋಪಿ ವಿಪಾಲ್ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ದೂರುದಾರರ ಹೇಳಿಕೆಯ ಆಧಾರದ ಮೇಲೆ, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪೊಲೀಸ್ ತಂಡಗಳು ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿವೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ