ದೆಹಲಿ: ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ

ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆಯ ಹಿಂದೆ ಆಕೆಯ ಲಿವ್ ಇನ್ ಸಂಗಾತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕರೆ ಮಾಡುತ್ತಿದ್ದರು ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು.

ದೆಹಲಿ: ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ
ಪ್ರಾತಿನಿಧಿಕ ಚಿತ್ರ

Updated on: Apr 05, 2024 | 9:48 AM

ನೈಋತ್ಯ ದೆಹಲಿಯ ದ್ವಾರಕಾದಲ್ಲಿರುವ ಮನೆಯೊಂದರಲ್ಲಿರುವ ಕಪಾಟಿನಲ್ಲಿ 26 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಕೊಲೆಯ ಹಿಂದೆ ಆಕೆಯ ಲಿವ್ ಇನ್ ಸಂಗಾತಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಮಹಿಳೆಯ ತಂದೆ ಕೆಲವು ದಿನಗಳಿಂದ ಮಗಳಿಗೆ ಕರೆ ಮಾಡುತ್ತಿದ್ದರು ಆದರೆ ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಪೊಲೀಸರಿಗೆ ದೂರು ನೀಡಿದ್ದರು.
ಬುಧವಾರ ರಾತ್ರಿ ಪೊಲೀಸರಿಗೆ ಕರೆ ಬಂದಿದೆ, ಮಹಿಳೆಯ ತಂದೆ ತನ್ನ ಮಗಳನ್ನು ಕೊಲೆ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು.

ನಂತರ ದಾಬ್ರಿ ಪೊಲೀಸ್ ಠಾಣೆಯ ತಂಡವು ದ್ವಾರಕಾದ ರಾಜಪುರಿ ಪ್ರದೇಶದಲ್ಲಿ ಹೇಳಿದ ಮನೆಗೆ ಹೋಗಿದ್ದಾರೆ.
ಫ್ಲಾಟ್​ಗೆ ತೆರಳಿದಾಗ ಆಕೆಯ ಮೃತದೇಹವು ರೂಮಿನ ಕಪಾಟಿನಲ್ಲಿ ಪತ್ತೆಯಾಗಿದೆ. ಮಹಿಳೆಯ ತಂದೆ, ತನ್ನ ಮಗಳನ್ನು ಆಕೆಯ ಲೈವ್-ಇನ್ ಸಂಗಾತಿ ವಿಪಾಲ್ ಹತ್ಯೆ ಮಾಡಿದ್ದಾನೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಮಗಳೊಂದಿಗೆ ಕೊನೆಯ ಬಾರಿಗೆ ಮಾತನಾಡಿದ್ದರ ಬಗ್ಗೆ ಹೇಳಿದ ಅವರು, ವಿಪಾಲ್ ಮಗಳನ್ನು ಥಳಿಸುತ್ತಿದ್ದ, ಆಕೆಗೆ ತನ್ನನ್ನು ಕೊಲೆ ಮಾಡಬಹುದೆಂಬ ಭಯವಿತ್ತು ಎಂದಿದ್ದಾರೆ.

ಕಳೆದ ಒಂದೂವರೆ ತಿಂಗಳಿನಿಂದ ತನ್ನ ಮಗಳು ವಿಪಾಲ್ ಜೊತೆ ಬಾಡಿಗೆ ಫ್ಲಾಟ್‌ನಲ್ಲಿ ವಾಸವಾಗಿದ್ದಳು ಎಂದು ಅವರು ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ತೆಲಂಗಾಣ: ಕುಡಿಯುವ ನೀರಿನ ಟ್ಯಾಂಕ್​ನಲ್ಲಿ 30 ಮಂಗಗಳ ಶವ ಪತ್ತೆ

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಡಿಡಿಯು ಆಸ್ಪತ್ರೆಯ ಶವಾಗಾರಕ್ಕೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗುಜರಾತ್‌ನ ಸೂರತ್‌ ಮೂಲದ ಆರೋಪಿ ವಿಪಾಲ್‌ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ದೂರುದಾರರ ಹೇಳಿಕೆಯ ಆಧಾರದ ಮೇಲೆ, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪೊಲೀಸ್ ತಂಡಗಳು ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿವೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us