Delhi Crime: 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಶಾಲೆಯ ಪ್ಯೂನ್ ಬಂಧನ

ಐದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಶಾಲೆಯ ಪ್ಯೂನ್​ ಅನ್ನು ಪೊಲೀಸರು ಬಂಧಿಸಿದ್ದಾರೆ.

Delhi Crime: 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಶಾಲೆಯ ಪ್ಯೂನ್ ಬಂಧನ
ಬಾಲಕಿ ಮೇಲೆ ಅತ್ಯಾಚಾರ
Follow us
ನಯನಾ ರಾಜೀವ್
|

Updated on: Mar 24, 2023 | 9:53 AM

ಐದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ಶಾಲೆಯ ಪ್ಯೂನ್​ ಅನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯು ದೆಹಲಿಯ ಶಾಲೆಯೊಂದರಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದಳು, ಪ್ಯೂನ್ ಹಾಗೂ ಆತನ ಮೂವರು ಸಹಚರರು ಮೊದಲು ಬಾಲಕಿಯ ಪ್ರಜ್ಞೆ ತಪ್ಪಿಸಿ ಬಳಿಕ ಅತ್ಯಾಚಾರವೆಸಗಿದ್ದಾರೆ. ಅಜಯ್ ಎನ್ನುವ ಪ್ಯೂನ್​ ಅನ್ನು ಬಂಧಿಸಲಾಗಿದೆ, ಆತನ ಸಹಚರರನ್ನು ಹಿಡಿಯುವ ಪ್ರಯತ್ನ ಮುಂದುವರೆದಿದೆ.

ಗಾಜಿಯಾಬಾದ್‌ನಲ್ಲಿ ವಾಸಿಸುತ್ತಿದ್ದ ಉತ್ತರ ಪ್ರದೇಶದ ಜೌನ್‌ಪುರ ಮೂಲದ ಅಜಯ್ ಕಳೆದ 10 ವರ್ಷಗಳಿಂದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಯಲ್ಲಿ ಪ್ಯೂನ್ ಆಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ನಗರ ಪೊಲೀಸರು ಮತ್ತು ಎಂಸಿಡಿಗೆ ನೋಟಿಸ್ ಜಾರಿ ಮಾಡಿದೆ.

ಪೊಲೀಸರ ಪ್ರಕಾರ, ಘಟನೆ ಮಾರ್ಚ್ 14 ರಂದು ನಡೆದಿದೆ. ಘಟನೆಯ ನಂತರ, ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು ಮತ್ತು ತನ್ನ ಅಂತಿಮ ಪರೀಕ್ಷೆಯನ್ನು ಸಹ ತಪ್ಪಿಸಿದ್ದಳು.

ಮತ್ತಷ್ಟು ಓದಿ: ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಶೀಘ್ರ ಕ್ರಮ ಕೈಗೊಳ್ಳದಿದ್ದಕ್ಕಾಗಿ ಅಂದರೆ ಕೂಡಲೇ ಮೇಲಧಿಕಾರಿಗಳಿಗೆ ಮಾಹಿತಿ ನೀಡದ ಕಾರಣ ಶಾಲೆಯ ಪ್ರಾಂಶುಪಾಲರಿಗೆ ಹಾಗೂ ತರಗತಿ ಶಿಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಎಂಸಿಡಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯಾರ್ಥಿನಿಯ ಶಿಕ್ಷಕಿ ಆಕೆಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಗೈರಾಗಿರುವ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಬಗ್ಗೆ ಆಕೆಯ ಸಹೋದರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಪ್ರಕಾರ, ಆರೋಪಿಯು ಬಾಲಕಿಯನ್ನು ಶಾಲೆಯಿಂದ ಅಜ್ಞಾತ ಸ್ಥಳಕ್ಕೆ ಕರೆದೊಯ್ದು, ಮತ್ತು ಬರುವ ಔಷಧಿ ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಸಂತ್ರಸ್ತೆಯನ್ನು ಲಾಲ್ ಬಹದ್ದೂರ್ ಶಾಸ್ತ್ರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು ಅಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಆಕೆಗೆ ಕೌನ್ಸೆಲಿಂಗ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲೆಯ ಪ್ರಾಂಶುಪಾಲರು ಆರೋಪಿಗಳ ವಿರುದ್ಧ ದೂರು ನೀಡಲು ಶಾಲೆಗೆ ಬರುವಂತೆ ಬಾಲಕಿಯ ಪೋಷಕರನ್ನು ಮನವೊಲಿಸಲು ಪ್ರಯತ್ನಿಸಿದರು, ಆದರೆ ಅವರು ಶಾಲೆಗೆ ಮತ್ತು ಪೊಲೀಸರಿಗೆ ಯಾವುದೇ ದೂರು ನೀಡಲು ಹಿಂಜರಿಯುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ