ದೆಹಲಿ: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಪಾರ್ಶ್ವವಾಯು ಪೀಡಿತ ಅಪ್ಪನನ್ನು ಹೊಡೆದು ಕೊಂದ ಮಗ

ತನಿಖೆಯ ಸಂದರ್ಭದಲ್ಲಿ, ಘಟನೆಯ ದಿನದಂದು ಸಂಜೆ 6.30 ರವರೆಗೆ ಶರ್ಮಾ ಮತ್ತು ಅವರ ಮಗನೊಂದಿಗೆ ಮದ್ಯಪಾನ ಮಾಡುತ್ತಿದ್ದ ನೆರೆಹೊರೆಯವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ಶ್ವೇತಾ ಚೌಹಾಣ್ ಹೇಳಿದ್ದಾರೆ.

ದೆಹಲಿ: ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಪಾರ್ಶ್ವವಾಯು ಪೀಡಿತ ಅಪ್ಪನನ್ನು ಹೊಡೆದು ಕೊಂದ ಮಗ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Feb 06, 2023 | 9:47 PM

ದೆಹಲಿ: ದೆಹಲಿಯ (Delhi) ಆನಂದ್ ಪರ್ಬತ್ ಪ್ರದೇಶದಲ್ಲಿ ಪಾರ್ಶ್ವವಾಯು ಪೀಡಿತ ತಂದೆಯನ್ನು ಕೊಂದ ಆರೋಪದ ಮೇಲೆ 20 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.ಆರೋಪಿಯನ್ನು ಸುಮಿತ್ ಶರ್ಮಾ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಜಿತೇಂದ್ರ ಶರ್ಮಾ ಎಂಬ ವ್ಯಕ್ತಿಯ ಸಾವಿನ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಅವರು ಸ್ಥಳವನ್ನು ತಲುಪಿದಾಗ, ಶರ್ಮಾ ತನ್ನ ಹಾಸಿಗೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಅವರನ್ನು ಆರ್‌ಎಂಎಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಶನಿವಾರ ಶವಪರೀಕ್ಷೆ ನಡೆಸಲಾಯಿತು . ಶವಪರೀಕ್ಷೆಯಲ್ಲಿ ಇದು ಕತ್ತು ಹಿಸುಕಿದ ಪ್ರಕರಣ ಎಂದು ತಿಳಿದುಬಂದಿದೆ.

ತನಿಖೆಯ ಸಂದರ್ಭದಲ್ಲಿ, ಘಟನೆಯ ದಿನದಂದು ಸಂಜೆ 6.30 ರವರೆಗೆ ಶರ್ಮಾ ಮತ್ತು ಅವರ ಮಗನೊಂದಿಗೆ ಮದ್ಯಪಾನ ಮಾಡುತ್ತಿದ್ದ ನೆರೆಹೊರೆಯವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ) ಶ್ವೇತಾ ಚೌಹಾಣ್ ಹೇಳಿದ್ದಾರೆ. ತಮ್ಮ ನೆರೆಹೊರೆಯವರು ತಂದೆಯನ್ನು ಕೊಂದಿದ್ದಾರೆ ಎಂದು ಆರೋಪಿ ಶರ್ಮಾ ಆರೋಪಿಸಿದ್ದಾರೆ. ಆದರೆ, ನಿರಂತರ ವಿಚಾರಣೆ ಬಳಿಕ ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಸಿಕ್ಕಿಮೀಸ್ ನೇಪಾಳಿಗಳನ್ನು ವಲಸಿಗರು ಎಂದು ಉಲ್ಲೇಖ; ಸುಪ್ರೀಂಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಕೇಂದ್ರ

ತನ್ನ ತಂದೆ ಪಾರ್ಶ್ವವಾಯು ಪೀಡಿತರಾಗಿದ್ದು, ಅವರನ್ನು ಒಬ್ಬರೇ ನೋಡಿಕೊಳ್ಳಬೇಕು ಎಂದು ಆರೋಪಿ ಹೇಳಿದ್ದಾನೆ.ಶರ್ಮಾ ಮದ್ಯವ್ಯಸನಿಯಾಗಿದ್ದು, ಘಟನೆ ನಡೆದ ದಿನ ಬೆಳಗ್ಗೆಯಿಂದ ಇಬ್ಬರೂ ಮದ್ಯ ಸೇವಿಸಿದ್ದರು. ಸಂಜೆ ಶರ್ಮಾ ತನ್ನ ಹಾಸಿಗೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಆರೋಪಿ ಹತಾಶೆಯಿಂದ ಕತ್ತು ಹಿಸುಕಿದ್ದಾನೆ ಎಂದು ಚೌಹಾಣ್ ಹೇಳಿದ್ದಾರೆ.

ಶರ್ಮಾ ಮದ್ಯ ಸೇವಿಸಿದ ಪತ್ನಿಗೆ ಹೊಡೆಯುತ್ತಿದ್ದ ಕಾರಣ ಅವರ ಪತ್ನಿ ವರ್ಷಗಳ ಹಿಂದೆ ಕುಟುಂಬವನ್ನು ತೊರೆದಿದ್ದರು. ಇವರು ಆಟೋರಿಕ್ಷಾ ಓಡಿಸುವ ಮೊದಲು ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. 2020 ರಲ್ಲಿ ಪಾರ್ಶ್ವವಾಯುವಿಗೆ ಒಳಗಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
Video: ಕಜಾಕಿಸ್ತಾನ ವಿಮಾನ ಪತನದ ಮೊದಲು ಹಾಗೂ ನಂತರದ ಭಯಾನಕ ವಿಡಿಯೋ
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಸುಖಾಸುಮ್ಮನೆ ವಿರಾಟ್ ಕೊಹ್ಲಿ ಕಿರಿಕ್: ತಿರುಗಿ ನಿಂತ ಸ್ಯಾಮ್ ಕೊನ್​ಸ್ಟಾಸ್
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಬಡತನದಿಂದ ಮುಕ್ತಿ ಹೊಂದಲು, ಮನೆಯಲ್ಲಿ ನೆಮ್ಮದಿಗೆ ಇಲ್ಲಿದೆ ಸುಲಭ ಉಪಾಯ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಸಫಲ ಏಕಾದಶಿಯ ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ನೋಡಿ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ