AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಬಾತ್​ರೂಂನಲ್ಲಿ ಸ್ನಾನ ಮಾಡುತ್ತಿದ್ದ ಬಾಲಕಿಯ ವಿಡಿಯೋ; ಕೆಲಸಗಾರನ ಬಂಧನ

Crime News: ದೆಹಲಿಯಲ್ಲಿ ಅಪ್ರಾಪ್ತ ಬಾಲಕಿ ಬಾತ್​ರೂಂನಲ್ಲಿ ಸ್ನಾನ ಮಾಡುತ್ತಿದ್ದ ದೃಶ್ಯವನ್ನು ಚಿತ್ರೀಕರಿಸಿದ ವ್ಯಕ್ತಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಆ ಹುಡುಗಿ ತನ್ನ ಸುತ್ತಮುತ್ತ ಯಾರೋ ಇರುವುದನ್ನು ಗ್ರಹಿಸಿ ಜೋರಾಗಿ ಕಿರುಚಿಕೊಂಡಿದ್ದಾಳೆ. ಆಗ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Crime News: ಬಾತ್​ರೂಂನಲ್ಲಿ ಸ್ನಾನ ಮಾಡುತ್ತಿದ್ದ ಬಾಲಕಿಯ ವಿಡಿಯೋ; ಕೆಲಸಗಾರನ ಬಂಧನ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Jul 08, 2024 | 8:23 PM

Share

ನೊಯ್ಡಾ: ರಾಷ್ಟ್ರ ರಾಜಧಾನಿ ದೆಹಲಿಯ ಕಪಶೇರಾ ಪ್ರದೇಶದಲ್ಲಿ 15 ವರ್ಷದ ಬಾಲಕಿ ಬಾತ್​ರೂಂನಲ್ಲಿ ಸ್ನಾನ ಮಾಡುತ್ತಿದ್ದಾಗ ಆಕೆಯ ವಿಡಿಯೋ ರೆಕಾರ್ಡ್ ಮಾಡಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯವರಾದ ಅನೂಪ್ ಕುಮಾರ್ ಎಂದು ಗುರುತಿಸಲಾಗಿದ್ದು, ನೈಋತ್ಯ ದೆಹಲಿಯ ಫಾರ್ಮ್‌ಹೌಸ್‌ನಲ್ಲಿ ತೋಟದ ಮೇಲ್ವಿಚಾರಣೆ ಕೆಲಸ ಮಾಡುತ್ತಿದ್ದ ಎಂದು ಅವರು ತಿಳಿಸಿದ್ದಾರೆ.

ಜುಲೈ 7ರಂದು ನೈಋತ್ಯ ದೆಹಲಿಯ ಸಲಾಪುರ್ ಖೇಡಾದಲ್ಲಿರುವ ತನ್ನ ನಿವಾಸದಲ್ಲಿ ಸ್ನಾನ ಮಾಡುತ್ತಿದ್ದಾಗ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬಾತ್​ರೂಂ ಕಿಟಕಿಯ ಬಳಿ ಯಾರೋ ಇದ್ದಾರೆ ಎಂಬ ಅನುಮಾನ ಮೂಡಿತು. ಈ ಬಗ್ಗೆ ಮನೆಯವರಿಗೆ ತಿಳಿಸಿದಾಗ ಅವರು ಆತನನ್ನು ಹಿಡಿದಿದ್ದಾರೆ. ಬಳಿಕ ಆಕೆ ದೂರು ದಾಖಲಿಸಿದ್ದಳು ಎಂದು ಉಪ ಪೊಲೀಸ್ ಆಯುಕ್ತರಾದ ರೋಹಿತ್ ಮೀನಾ ತಿಳಿಸಿದ್ದಾರೆ.

ಇದನ್ನೂ ಓದಿ: Armstrong Death: ಬಿಎಸ್​ಪಿ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಬರ್ಬರ ಹತ್ಯೆ

ತನ್ನ ಬಾತ್​ರೂಂ ಬಳಿ ಯಾರೋ ಇದ್ದಾರೆಂದು ಆಕೆ ಕೂಗುತ್ತಿದ್ದಂತೆ ಆ ವ್ಯಕ್ತಿ ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆದರೆ ಹುಡುಗಿಯ ಕುಟುಂಬ ಸದಸ್ಯರು ಮತ್ತು ಕೆಲವು ನೆರೆಹೊರೆಯವರು ಆತನನ್ನು ಹಿಡಿದಿದ್ದಾರೆ. ಕಪಸೆಹ್ರಾ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ಆಗಮಿಸಿ ಆತನನ್ನು ಬಂಧಿಸಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

ಇದನ್ನೂ ಓದಿ: Crime News: ಪ್ರೇಮಿಯ ಮೇಲಿನ ಕೋಪಕ್ಕೆ 7 ವರ್ಷದ ಮಗುವನ್ನು ಗೋಡೆಗೆ ಬಡಿದು ಕೊಲೆ

ಆತನ ಮೊಬೈಲ್ ಫೋನ್ ಪರಿಶೀಲಿಸಿದಾಗ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 77 (ಮಹಿಳೆಯರ ಖಾಸಗಿ ಚಿತ್ರಗಳನ್ನು ಆಕೆಯ ಒಪ್ಪಿಗೆಯಿಲ್ಲದೆ ವೀಕ್ಷಿಸುವುದು, ಸೆರೆಹಿಡಿಯುವುದು ಅಥವಾ ಪ್ರಸಾರ ಮಾಡುವುದು) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ತಡೆಗಟ್ಟುವಿಕೆ ಕಾಯ್ದೆಯ ಸೆಕ್ಷನ್ 12 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:23 pm, Mon, 8 July 24