AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನರ್ಸ್ ದೇಹ​ ​ಪತ್ತೆ

ಆಗ್ರಾದ ಗೆಸ್ಟ್​ಹೌಸ್​ನಲ್ಲಿ 32 ವರ್ಷದ ನರ್ಸ್ ಕೋಣೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಹಿಳೆ ಕುಸುಮ್ ಕುಮಾರಿ ಆಗ್ರಾ ಮೂಲದವಳಾದರೂ ದೆಹಲಿಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಎಸಿಪಿ ನ್ಯೂ ಆಗ್ರಾ ಆದಿತ್ಯ ಸಿಂಗ್ ಪ್ರಕಾರ, ಕುಸುಮ್ ಕುಮಾರಿ ಆಗ್ರಾದಲ್ಲಿ ತನ್ನ ಪೋಷಕರನ್ನು ಭೇಟಿ ಮಾಡಲು ಬಂದಿದ್ದರು. ನಂತರದಲ್ಲಿ ಆಕೆ ಎಲ್ಲಿಗೆ ಹೋಗುತ್ತಿದ್ದೇನೆಂದು ಯಾರಿಗೂ ತಿಳಿಸದೆ ಮನೆಯಿಂದ ಹೋಗಿದ್ದರು.

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ನರ್ಸ್ ದೇಹ​ ​ಪತ್ತೆ
ನಯನಾ ರಾಜೀವ್
|

Updated on: Feb 06, 2024 | 7:55 AM

Share

ಆಗ್ರಾದ ಗೆಸ್ಟ್​ಹೌಸ್​ನಲ್ಲಿ ದೆಹಲಿಯ ನರ್ಸ್​ ಒಬ್ಬರು ನೇಣುಬಿಗಿದ ಸ್ಥಿತಿಯಲ್ಲಿ  ಪತ್ತೆಯಾಗಿದ್ದಾರೆ. ಕುಸುಮ್ ಕುಮಾರಿ ಆಗ್ರಾ ಮೂಲದವಳಾದರೂ ದೆಹಲಿಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕುಸುಮ್ ಕುಮಾರಿ ಆಗ್ರಾದಲ್ಲಿ ತನ್ನ ಪೋಷಕರನ್ನು ಭೇಟಿಯಾಗಲು ಬಂದಿದ್ದರು. ಅವರನ್ನು ಭೇಟಿಯಾದ ಬಳಿಕ ಅವರು ಎಲ್ಲಿಗೆ ಹೋಗುತ್ತಿದ್ದಾರೆಂದಯ ಯಾರಿಗೂ ತಿಳಿಸದೆ ಮನೆಯಿಂದ ಹೊರಟುಹೋಗಿದ್ದಳು. ಕೆಲವು ಗಂಟೆಗಳ ನಂತರ, ಕಮಲಾ ನಗರ ಪ್ರದೇಶದಲ್ಲಿರುವ ತೋರನ್ ಅತಿಥಿ ಗೃಹದ ಕೊಠಡಿಯೊಳಗೆ ಆಕೆ ಶವವಾಗಿ ಪತ್ತೆಯಾಗಿದ್ದಾಳೆ.

ಮಹಿಳೆಯೊಬ್ಬರು ತಮ್ಮ ರೈಲು ತಡವಾಗಿದ್ದರಿಂದ ಕೆಲವು ಗಂಟೆಗಳ ಕಾಲ ವಿಶ್ರಾಂತಿ ಬೇಕು ಎಂದು ಹೇಳಿ ಕೆಲವು ಗಂಟೆಗಳ ಕಾಲ ಕೊಠಡಿಯನ್ನು ಕಾಯ್ದಿರಿಸಿದ್ದರು ಎಂದು ಅತಿಥಿ ಗೃಹದ ಸಿಬ್ಬಂದಿಯಿಂದ ಪೊಲೀಸರು ಮಾಹಿತಿ ಪಡೆದಿದ್ದಾರೆ ಎಂದು ಸಿಂಗ್ ಹೇಳಿದರು. ಚೆಕ್‌ಔಟ್‌ ಸಮಯ ಕಳೆದು ಹಲವು ಗಂಟೆಗಳಾದರೂ ಆಕೆ ಕೊಠಡಿಯಿಂದ ಹೊರಗೆ ಬರದ ಹಿನ್ನೆಲೆಯಲ್ಲಿ ಅತಿಥಿ ಗೃಹದ ವ್ಯವಸ್ಥಾಪಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆಗ ಕುಸುಮ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪೊಲೀಸರಿಗೆ ಪತ್ತೆಯಾಗಿದ್ದಾರೆ. ಆಕೆಯ ಸಾವಿನ ಬಗ್ಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಆಕೆ ಅತಿಥಿ ಗೃಹದಲ್ಲಿ ಯಾರನ್ನಾದರೂ ಭೇಟಿಯಾಗಿದ್ದಾರಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಸುಮ್ ಅವರ ಪತಿ ಗಬ್ಬರ್ ದೆಹಲಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದು, ಆಕೆಯೊಂದಿಗೆ ಹೋಗಲು ಸಾಧ್ಯವಾಗದ ಕಾರಣ ಆಕೆ ಒಬ್ಬಳೇ ಆಗ್ರಾಕ್ಕೆ ಬಂದಿದ್ದರು ಎಂದು ಆಕೆಯ ಪೋಷಕರು ಹೇಳಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಮಲ್ಲೇಶ್ವರಂ ರೈಲ್ವೆ ಟ್ರ್ಯಾಕ್​ ಬಳಿ ವ್ಯಕ್ತಿಯ ಶವ ಪತ್ತೆ

ಪ್ರಾಥಮಿಕ ತನಿಖೆಯ ಪ್ರಕಾರ, ಪೊಲೀಸರು ಪ್ರಕರಣವನ್ನು ಆತ್ಮಹತ್ಯೆ ಎಂದು ಪರಿಗಣಿಸುತ್ತಿದ್ದಾರೆ ಆದರೆ ಅತಿಥಿ ಗೃಹದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್