ಜೆಎನ್​​ಯು ಕ್ಯಾಂಪಸ್​​ನಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

JNU ಸುಮಾರು ನಲುವತ್ತು ವರ್ಷ ಹರೆಯದ ಮೃತದೇಹ ಇದಾಗಿದ್ದು , ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲವು ದಿನಗಳ ಹಿಂದೆ ಈತ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ

ಜೆಎನ್​​ಯು ಕ್ಯಾಂಪಸ್​​ನಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಸಾಂಕೇತಿಕ ಚಿತ್ರ
Updated By: ರಶ್ಮಿ ಕಲ್ಲಕಟ್ಟ

Updated on: Jun 03, 2022 | 10:01 PM

ದೆಹಲಿ: ಜವಾಹರ್ ಲಾಲ್ ನೆಹರು ವಿಶ್ವ ವಿದ್ಯಾನಿಲಯದ (JNU) ಆವರಣದಲ್ಲಿರುವ ಮರಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ  ಮೃತದೇಹವೊಂದು ಪತ್ತೆಯಾಗಿದೆ. ಸುಮಾರು ನಲುವತ್ತು ವರ್ಷ ಹರೆಯದ ಮೃತದೇಹ ಇದಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೆಲವು ದಿನಗಳ ಹಿಂದೆ ಈತ ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ದೆಹಲಿ ಪೊಲೀಸರ ಅಪರಾಧ ಮತ್ತು ಫಾರೆನ್ಸಿಕ್ ತಂಡ ಸ್ಥಳಕ್ಕೆ ತಲುಪಿ ತಪಾಸಣೆ ನಡೆಸಿದೆ. ವ್ಯಕ್ತಿಯ ಗುರುತು ಈವರೆಗೆ ಪತ್ತೆಯಾಗಿಲ್ಲ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಈ ವಿಷಯದ ಕುರಿತು ಮಾಹಿತಿ ನೀಡಿ ದೆಹಲಿ ಪೊಲೀಸರು ಇಂದು ಬೆಳಿಗ್ಗೆ 6:30 ರ ಸುಮಾರಿಗೆ ಪಿಸಿಆರ್ ಕರೆ ಬಂದಿದೆ. ಅದರಲ್ಲಿ “ಜೆಎನ್‌ಯು ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ” ಎಂದು ತಿಳಿಸಲಾಗಿದೆ. ಅದರಂತೆ ಎಸ್‌ಎಚ್‌ಒ ವಿಕೆ ನಾರ್ತ್ ನೇತೃತ್ವದಲ್ಲಿ ಪೊಲೀಸರು ಕಾರ್ಯನಿರ್ವಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ತಂಡ ಪರಿಶೀಲನೆ ನಡೆಸಿದಾಗ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತೀರಾ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರ ವಯಸ್ಸು ಸುಮಾರು 40-45 ವರ್ಷಗಳಾಗಿರಬೇಕು ಎಂದು ಹೇಳಿರುವುದಾಗಿ  ಇಂಡಿಯಾ ಟಿವಿ ವರದಿ ಮಾಡಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:51 pm, Fri, 3 June 22