ದೆಹಲಿ: ಬಾಲಕಿ ಮೇಲೆ ಆ್ಯಸಿಡ್ ಎರಚಿದ ಅತ್ಯಾಚಾರ ಪ್ರಕರಣ ಆರೋಪಿ; ಕೃತ್ಯವೆಸಗಿದ ನಂತರ ಆತ್ಮಹತ್ಯೆ
ಅತ್ಯಾಚಾರ ಪ್ರಕರಣದ ಆರೋಪಿ ಜಾಮೀನು ಪಡೆದು ಹೊರಗಿದ್ದ. ಆತ ಗುರುವಾರ ಸಂಜೆ, ತನ್ನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ ಮಹಿಳೆಗೆ ತನ್ನ ವಿರುದ್ಧದ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಆಕೆ ನಿರಾಕರಿಸಿದಾಗ ಆ ವ್ಯಕ್ತಿ ಆಕೆಯ 17 ವರ್ಷದ ಮಗಳ ಮೇಲೆ ಆ್ಯಸಿಡ್ ಎರಚಿ ತಾನೂ ಕುಡಿದಿದ್ದಾನೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
ದೆಹಲಿ ಡಿಸೆಂಬರ್ 08: ಆತ ಅತ್ಯಾಚಾರ ಆರೋಪಿ(Rape accused), ಜಾಮೀನಿನ ಮೇಲೆ ಜೈಲಿನಿಂದ ಹೊರಬಂದು ದೂರುದಾರರ ಅಪ್ರಾಪ್ತ ಮಗಳ ಮೇಲೆ ಆ್ಯಸಿಡ್ (Acid Attack)ದಾಳಿ ನಡೆಸಿ ನಂತರ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮಧ್ಯ ದೆಹಲಿಯಲ್ಲಿ (Delhi) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬ ವಿವಾಹದಲ್ಲಿ ಪಾಲ್ಗೊಳ್ಳಲು ಪ್ರೇಮ್ ಸಿಂಗ್ ಎಂಬಾತನಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿತ್ತು.
ಆತ ಗುರುವಾರ ಸಂಜೆ, ತನ್ನ ಮೇಲೆ ಅತ್ಯಾಚಾರದ ಆರೋಪ ಹೊರಿಸಿದ ಮಹಿಳೆಗೆ ತನ್ನ ವಿರುದ್ಧದ ದೂರನ್ನು ಹಿಂಪಡೆಯುವಂತೆ ಕೇಳಿದ್ದಾನೆ. ಆಕೆ ನಿರಾಕರಿಸಿದಾಗ ಆ ವ್ಯಕ್ತಿ ಆಕೆಯ 17 ವರ್ಷದ ಮಗಳ ಮೇಲೆ ಆ್ಯಸಿಡ್ ಎರಚಿ ತಾನೂ ಕುಡಿದಿದ್ದಾನೆ.
ಪ್ರೇಮ್ ಸಿಂಗ್ ಮತ್ತು ಮಹಿಳೆ ದೆಹಲಿಯ ಆನಂದ್ ಪರ್ಬತ್ ಪ್ರದೇಶದಲ್ಲಿ ನೆರೆಹೊರೆಯವರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವನ್ನು ಹಿಂಪಡೆಯುವಂತೆ ಸಂತ್ರಸ್ತೆಯ ತಾಯಿಗೆ ಬೆದರಿಕೆ ಹಾಕಿದಾಗ ವ್ಯಕ್ತಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದ. ಆಕೆ ನಿರಾಕರಿಸಿದಾಗ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕಲಬುರಗಿ ವಕೀಲನ ಹತ್ಯೆ ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಹೆಡೆಮುರಿಕಟ್ಟಿದ ಪೊಲೀಸರು
ಆರೋಪಿ ಮತ್ತು ಹದಿಹರೆಯದ ಬಾಲಕಿಯನ್ನು ಕಾಲೋನಿಯಲ್ಲಿದ್ದ ಜನರು ಆಸ್ಪತ್ರೆಗೆ ಸಾಗಿಸಿದರು. ಚಿಕಿತ್ಸೆ ವೇಳೆ ಪ್ರೇಮ್ ಸಿಂಗ್ ಮೃತಪಟ್ಟರೆ, ಚಿಕಿತ್ಸೆ ನಂತರ ಬಾಲಕಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:31 pm, Fri, 8 December 23