Shocking News: ಪ್ರೀತಿಸಿದ ವ್ಯಕ್ತಿಯೊಂದಿಗೆ ಮದುವೆಯಾಗಲು ಅಡ್ಡಿಯಾದ 5 ವರ್ಷದ ಮಗಳನ್ನೇ ಕೊಂದ ತಾಯಿ!

ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಾನು ಪ್ರೀತಿಸುತ್ತಿದ್ದ ಪುರುಷ ತನ್ನ ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಎಂಬ ಕಾರಣಕ್ಕೆ ತಾಯಿಯೊಬ್ಬಳು ಆತನನ್ನು ಮದುವೆಯಾಗುವ ಸಲುವಾಗಿ ತನ್ನ 5 ​​ವರ್ಷದ ಮಗಳ ಕತ್ತು ಹಿಸುಕಿ ಕೊಂದಿದ್ದಾಳೆ. ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

Shocking News: ಪ್ರೀತಿಸಿದ ವ್ಯಕ್ತಿಯೊಂದಿಗೆ ಮದುವೆಯಾಗಲು ಅಡ್ಡಿಯಾದ 5 ವರ್ಷದ ಮಗಳನ್ನೇ ಕೊಂದ ತಾಯಿ!
ಮಗು
Follow us
ಸುಷ್ಮಾ ಚಕ್ರೆ
|

Updated on: Nov 23, 2024 | 9:11 PM

ನವದೆಹಲಿ: ದೆಹಲಿಯ ಅಶೋಕ್ ವಿಹಾರ್‌ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮಹಿಳೆಯೊಬ್ಬರು ತನ್ನ ಐದು ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹಿತರಾಗಿದ್ದ ವ್ಯಕ್ತಿಯನ್ನು ಆಕೆ ಮದುವೆಯಾಗಲು ಬಯಸಿದ್ದಳು. ಆದರೆ, ಆತ ಆಕೆಯ ಮಗಳನ್ನು ಸ್ವೀಕರಿಸಲು ಸಿದ್ಧನಿರಲಿಲ್ಲ. ಹೀಗಾಗಿ, ಆತನ ಜೊತೆ ಹೋಗುವ ಸಲುವಾಗಿ ಆಕೆ ಹೆತ್ತ ಮಗಳನ್ನೇ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀಪ್ ಚಂದ್ ಬಂಧು ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋದಾಗ ಮಗು ಸತ್ತಿದೆ ಎಂದು ಹೇಳಿದ್ದರು. ಈ ಬಗ್ಗೆ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸ್ ಅಧಿಕಾರಿಗಳು ಶವದ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದಾಗ, ಮಗುವಿನ ಕುತ್ತಿಗೆಯಲ್ಲಿ ಕತ್ತು ಹಿಸುಕಿದ ಗುರುತುಗಳು ಪತ್ತೆಯಾಗಿವೆ.

ಇದನ್ನೂ ಓದಿ: ನಿಜ್ಜರ್​ ಹತ್ಯೆಯಲ್ಲಿ ಮೋದಿ, ದೋವಲ್ ಕೈವಾಡ ಆರೋಪ: ವರದಿಯಲ್ಲಿ ಹುರುಳಿಲ್ಲವೆಂದ ಕೆನಡಾ

ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಮತ್ತು ಮಗುವಿನ ತಾಯಿ ಮತ್ತು ಇತರ ಸಂಬಂಧಿಕರನ್ನು ವಿಚಾರಣೆಗಾಗಿ ಕರೆಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ತೀವ್ರ ವಿಚಾರಣೆಯ ಸಮಯದಲ್ಲಿ ತಾಯಿ ತನ್ನ ಸ್ವಂತ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮದುವೆಯಾಗುವುದಿಲ್ಲ ಎಂದಿದ್ದಕ್ಕೆ ಶಾಲೆಯಲ್ಲೇ ಶಿಕ್ಷಕಿಗೆ ಚಾಕುವಿನಿಂದ ಇರಿದು ಕೊಲೆ

ಆಕೆಯ ಮೊದಲ ಪತಿ ಅವಳನ್ನು ತೊರೆದ ನಂತರ, ಮಹಿಳೆ ಇನ್​ಸ್ಟಾಗ್ರಾಂನಲ್ಲಿ ರಾಹುಲ್ ಎಂಬ ವ್ಯಕ್ತಿಯನ್ನು ಭೇಟಿಯಾಗಿ ಸ್ನೇಹ ಬೆಳೆಸಿದ್ದಳು. ಇದರ ನಂತರ, ಮಹಿಳೆ ತನ್ನ ಇನ್​ಸ್ಟಾಗ್ರಾಂ ಸ್ನೇಹಿತನನ್ನು ಮದುವೆಯಾಗಲು ದೆಹಲಿಗೆ ತೆರಳಲು ನಿರ್ಧರಿಸಿದಳು. ಆದರೆ ಆ ವ್ಯಕ್ತಿ ಮತ್ತು ಆತನ ಕುಟುಂಬದವರು ಆಕೆಯ ಮಗುವನ್ನು ಸ್ವೀಕರಿಸಲು ನಿರಾಕರಿಸಿದರು. ಇದರಿಂದ ಹತಾಶಳಾದ ಮಹಿಳೆ ತನ್ನ ಮಗುವನ್ನು ಕತ್ತು ಹಿಸುಕಿ ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!