ದೆಹಲಿಯಲ್ಲಿ 50ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬಾಲಕನ ಹತ್ಯೆ, ಆರೋಪಿ ಕೂಡ ಅಪ್ರಾಪ್ತ

ದೆಹಲಿಯಲ್ಲಿ ಅಪ್ರಾಪ್ತ ಬಾಲಕನನ್ನು ಚಾಕುವಿನಿಂದ 50ಕ್ಕೂ ಹೆಚ್ಚು  ಬಾರಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಆರೋಪಿ ಕೂಡ ಅಪ್ರಾಪ್ತನಾಗಿದ್ದು, ಈ ಘಟನೆ ದೆಹಲಿ ಜನತೆಯನ್ನೇ ಬೆಚ್ಚಿ ಬೀಳಿಸಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಸ್ತುತ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಈ ವಿಷಯದ ತನಿಖೆಯಲ್ಲಿ ನಿರತರಾಗಿದ್ದಾರೆ.

ದೆಹಲಿಯಲ್ಲಿ  50ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬಾಲಕನ ಹತ್ಯೆ, ಆರೋಪಿ ಕೂಡ ಅಪ್ರಾಪ್ತ
ಅಪರಾಧ

Updated on: Nov 23, 2023 | 10:54 AM

ದೆಹಲಿಯಲ್ಲಿ ಅಪ್ರಾಪ್ತ ಬಾಲಕನನ್ನು ಚಾಕುವಿನಿಂದ 50ಕ್ಕೂ ಹೆಚ್ಚು  ಬಾರಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಆರೋಪಿ ಕೂಡ ಅಪ್ರಾಪ್ತನಾಗಿದ್ದು, ಈ ಘಟನೆ ದೆಹಲಿ ಜನತೆಯನ್ನೇ ಬೆಚ್ಚಿ ಬೀಳಿಸಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಸ್ತುತ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಮತ್ತು ಈ ವಿಷಯದ ತನಿಖೆಯಲ್ಲಿ ನಿರತರಾಗಿದ್ದಾರೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಯುವಕ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ವಿಷಯ ಬೆಳಕಿಗೆ ಬಂದ ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣದಲ್ಲಿ ಕೊಲೆಯಾದವನು 16 ವರ್ಷದ ಅಪ್ರಾಪ್ತ ಬಾಲಕ.

ಆರೋಪಿ ಈ ಘಟನೆಗೆ ಬಳಸಿರುವ ಚಾಕುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದರೋಡೆ ಮಾಡುವುದೇ ಆತನ ಉದ್ದೇಶವಾಗಿತ್ತು ಎಂದು ಆರೋಪಿ ಹೇಳಿದ್ದಾನೆ. ಆರೋಪಿ ಹಣ ದೋಚಲು ಯತ್ನಿಸುತ್ತಿದ್ದ. ಆದರೆ ಬಾಲಕ ಹಣ ಕೊಡಲು ನಿರಾಕರಿಸಿದಾಗ ಮೊದಲು ಕತ್ತು ಹಿಸುಕಿ, ಬಳಿಕ ಚಾಕುವಿನಿಂದ ಇರಿದಿದ್ದಾನೆ.ದೆಹಲಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: ಆಸ್ತಿ ಹಸ್ತಾಂತರಿಸದ ತಂದೆಯ ಕಣ್ಣುಗಳನ್ನು ಕಿತ್ತಿದ್ದ ಮಗನಿಗೆ 9 ವರ್ಷ ಜೈಲುಶಿಕ್ಷೆ ವಿಧಿಸಿದ ನ್ಯಾಯಾಲಯ

ಈಶಾನ್ಯ ದೆಹಲಿಯ ಉಪ ಪೊಲೀಸ್ ಆಯುಕ್ತ ಜಾಯ್ ಟಿರ್ಕಿ ಪ್ರಕಾರ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಘಟನೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂದು ಕೇಳಿದಾಗ. ಎರಡನೇ ಹಂತಕನ ಪತ್ತೆಗೆ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:53 am, Thu, 23 November 23