AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮನೆಕೆಲಸದವಳ ಮೇಲೆ ಹಲ್ಲೆ ನಡೆಸಿ, ಕೂದಲು ಕತ್ತರಿಸಿದ ಮಾಲೀಕರು!

ಮನೆ ಕೆಲಸದಾಕೆ ರಜನಿ ಪಶ್ಚಿಮ ಬಂಗಾಳದ ಸಿಲಿಗುರಿ ಮೂಲದವರಾಗಿದ್ದು, ದೆಹಲಿಯಲ್ಲಿ ಮನೆಗೆಲಸದಲ್ಲಿ ಕೆಲಸ ಮಾಡುತ್ತಿದ್ದರು. ಆಕೆ ಚಿಕಿತ್ಸೆ ಪಡೆಯುತ್ತಿದ್ದು, ಸಿಲಿಗುರಿಯಲ್ಲಿರುವ ಆಕೆಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ.

Crime News: ಮನೆಕೆಲಸದವಳ ಮೇಲೆ ಹಲ್ಲೆ ನಡೆಸಿ, ಕೂದಲು ಕತ್ತರಿಸಿದ ಮಾಲೀಕರು!
ಸಾಂದರ್ಭಿಕ ಚಿತ್ರImage Credit source: India Today
TV9 Web
| Edited By: |

Updated on: May 20, 2022 | 4:18 PM

Share

ನವದೆಹಲಿ: ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿ ಮನೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಯೊಬ್ಬರನ್ನು ಆಕೆಯ ಮಾಲೀಕರು ಥಳಿಸಿರುವ ಘಟನೆ ಭಾನುವಾರ ನಡೆದಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಮನೆ ಕೆಲಸದಾಕೆ ರಜನಿ ಪಶ್ಚಿಮ ಬಂಗಾಳದ (West Bengal) ಸಿಲಿಗುರಿ ಮೂಲದವರಾಗಿದ್ದು, ದೆಹಲಿಯಲ್ಲಿ ಮನೆಗೆಲಸದಲ್ಲಿ ಕೆಲಸ ಮಾಡುತ್ತಿದ್ದರು. ಆಕೆ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ ಆ ಮಹಿಳೆಗೆ ತಿಂಗಳಿಗೆ 7 ಸಾವಿರ ರೂ. ಸಂಬಳ ನೀಡುತ್ತಿದ್ದರು.

ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮಿಷನರ್ ಘನಶ್ಯಾಮ್ ಬನ್ಸಾಲ್, ಮೇ 17ರಂದು ಸಫ್ದರ್‌ಜಂಗ್ ಆಸ್ಪತ್ರೆಯಿಂದ ಮಾಹಿತಿ ಸಿಕ್ಕಿದ್ದು, ಕೆಲಸದಾಕೆಯ ಮೇಲೆ ಆಕೆಯ ಮಾಲೀಕರು ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಸಿಕ್ಕಿತು. ಹೀಗಾಗಿ, ಆಸ್ಪತ್ರೆಗೆ ಹೋಗಿ ರಜನಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಯಿತು. ಅದರಲ್ಲಿ ತನ್ನ ಉದ್ಯೋಗದಾತ ಅಭಿನೀತ್ ಮತ್ತು ಅವನ ಹೆಂಡತಿ ತನ್ನ ಮೇಲೆ ಹಲ್ಲೆ ನಡೆಸಿ ಅವಳ ಕೂದಲನ್ನು ಕತ್ತರಿಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.

ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು, ಅಕ್ರಮ ಬಂಧನ ಮತ್ತು ಹಲ್ಲೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ದಂಪತಿಯನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಕೆಲಸದಾಕೆ ರಜನಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಹೀಗಾಗಿ, ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿ ಎಂದು ಆಕೆಯ ಮನೆಯವರಿಗೆ ಮಾಲೀಕರು ಫೋನ್ ಮಾಡಿದರು. ಆಗ ಆಕೆಯ ಮನೆಯವರು ಬಂದಾಗ ರಜನಿಯ ಕೂದಲು ಕತ್ತರಿಸಿ, ಆಕೆಯ ಮೇಲೆ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ. ತಕ್ಷಣ ಆಕೆಯ ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Viral News: ಬರೋಬ್ಬರಿ 30 ವರ್ಷ ಗಂಡಿನ ವೇಷದಲ್ಲಿ ಬದುಕಿದ ತಮಿಳುನಾಡಿನ ಮಹಿಳೆ!; ಕಾರಣವೇನು ಗೊತ್ತಾ?

ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯಕೀಯ ಪರೀಕ್ಷೆಯ ವರದಿಯು ಮಹಿಳೆ ಮೇಲೆ ದೈಹಿಕ ಹಲ್ಲೆಯಾಗಿದೆ. ಆಕೆಗೆ ಮಾನಸಿಕ ಆಘಾತ ಮತ್ತು ವಾಂತಿ ಆಗಿತ್ತು ಎಂದು ಹೇಳಿದೆ. ಆಕೆಯ ಕಣ್ಣುಗಳು, ಮುಖ, ಕೈಕಾಲುಗಳು, ಹೊಟ್ಟೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮಹಿಳೆ ದಂಪತಿಯ ಮನೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದಳು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು