ನವದೆಹಲಿ: ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿ ಮನೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ 48 ವರ್ಷದ ಮಹಿಳೆಯೊಬ್ಬರನ್ನು ಆಕೆಯ ಮಾಲೀಕರು ಥಳಿಸಿರುವ ಘಟನೆ ಭಾನುವಾರ ನಡೆದಿದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ. ಮನೆ ಕೆಲಸದಾಕೆ ರಜನಿ ಪಶ್ಚಿಮ ಬಂಗಾಳದ (West Bengal) ಸಿಲಿಗುರಿ ಮೂಲದವರಾಗಿದ್ದು, ದೆಹಲಿಯಲ್ಲಿ ಮನೆಗೆಲಸದಲ್ಲಿ ಕೆಲಸ ಮಾಡುತ್ತಿದ್ದರು. ಆಕೆ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ ಆ ಮಹಿಳೆಗೆ ತಿಂಗಳಿಗೆ 7 ಸಾವಿರ ರೂ. ಸಂಬಳ ನೀಡುತ್ತಿದ್ದರು.
ಪಶ್ಚಿಮ ವಿಭಾಗದ ಉಪ ಪೊಲೀಸ್ ಕಮಿಷನರ್ ಘನಶ್ಯಾಮ್ ಬನ್ಸಾಲ್, ಮೇ 17ರಂದು ಸಫ್ದರ್‌ಜಂಗ್ ಆಸ್ಪತ್ರೆಯಿಂದ ಮಾಹಿತಿ ಸಿಕ್ಕಿದ್ದು, ಕೆಲಸದಾಕೆಯ ಮೇಲೆ ಆಕೆಯ ಮಾಲೀಕರು ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಸಿಕ್ಕಿತು. ಹೀಗಾಗಿ, ಆಸ್ಪತ್ರೆಗೆ ಹೋಗಿ ರಜನಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಯಿತು. ಅದರಲ್ಲಿ ತನ್ನ ಉದ್ಯೋಗದಾತ ಅಭಿನೀತ್ ಮತ್ತು ಅವನ ಹೆಂಡತಿ ತನ್ನ ಮೇಲೆ ಹಲ್ಲೆ ನಡೆಸಿ ಅವಳ ಕೂದಲನ್ನು ಕತ್ತರಿಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.
ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು, ಅಕ್ರಮ ಬಂಧನ ಮತ್ತು ಹಲ್ಲೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ದಂಪತಿಯನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಕೆಲಸದಾಕೆ ರಜನಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಹೀಗಾಗಿ, ಆಕೆಯನ್ನು ಮನೆಗೆ ಕರೆದುಕೊಂಡು ಹೋಗಿ ಎಂದು ಆಕೆಯ ಮನೆಯವರಿಗೆ ಮಾಲೀಕರು ಫೋನ್ ಮಾಡಿದರು. ಆಗ ಆಕೆಯ ಮನೆಯವರು ಬಂದಾಗ ರಜನಿಯ ಕೂದಲು ಕತ್ತರಿಸಿ, ಆಕೆಯ ಮೇಲೆ ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ. ತಕ್ಷಣ ಆಕೆಯ ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Viral News: ಬರೋಬ್ಬರಿ 30 ವರ್ಷ ಗಂಡಿನ ವೇಷದಲ್ಲಿ ಬದುಕಿದ ತಮಿಳುನಾಡಿನ ಮಹಿಳೆ!; ಕಾರಣವೇನು ಗೊತ್ತಾ?
ಸಫ್ದರ್‌ಜಂಗ್ ಆಸ್ಪತ್ರೆಯ ವೈದ್ಯಕೀಯ ಪರೀಕ್ಷೆಯ ವರದಿಯು ಮಹಿಳೆ ಮೇಲೆ ದೈಹಿಕ ಹಲ್ಲೆಯಾಗಿದೆ. ಆಕೆಗೆ ಮಾನಸಿಕ ಆಘಾತ ಮತ್ತು ವಾಂತಿ ಆಗಿತ್ತು ಎಂದು ಹೇಳಿದೆ. ಆಕೆಯ ಕಣ್ಣುಗಳು, ಮುಖ, ಕೈಕಾಲುಗಳು, ಹೊಟ್ಟೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮಹಿಳೆ ದಂಪತಿಯ ಮನೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸಿದಳು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ