ಬೆಂಗಳೂರು: ಒಂಟಿಯಾಗಿ ನೆಲೆಸಿದ್ದ ಮಹಿಳಾ ಅಧಿಕಾರಿಯ ಮನೆಗೆ ನುಗ್ಗಿ ಕುತ್ತಿಗೆ ಕೊಯ್ದು ಬರ್ಬರ ಕೊಲೆ

ಪ್ರತಿಮಾ ಶನಿವಾರ ರಾತ್ರಿ 8 ಗಂಟೆಗೆ ಇಲಾಖೆಯ ವಾಹನದಲ್ಲಿ ಕಚೇರಿಯಿಂದ ಮನೆಗೆ ಬಂದಿದ್ದರು. ರಾತ್ರಿ ಅಣ್ಣ ​ಕರೆ ಮಾಡಿದಾಗ ಸ್ವೀಕರಿಸಿ ಮಾತನಾಡಿದ್ದರು. ಬೆಳಿಗ್ಗೆ ಅಕ್ಕಪಕ್ಕದ ಮನೆಯವರು ಮನೆಗೆ ಬಂದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಪ್ರತಿಮಾ ನೆಲೆಸಿದ್ದ ಮನೆಯಲ್ಲಿ ಯಾವುದೇ ವಸ್ತು ಕಳ್ಳತನವಾಗಿಲ್ಲ. ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಒಂಟಿಯಾಗಿ ನೆಲೆಸಿದ್ದ ಮಹಿಳಾ ಅಧಿಕಾರಿಯ ಮನೆಗೆ ನುಗ್ಗಿ ಕುತ್ತಿಗೆ ಕೊಯ್ದು ಬರ್ಬರ ಕೊಲೆ
ಕೊಲೆಯಾದ ಅಧಿಕಾರಿ ಪ್ರತಿಮಾ
Follow us
Shivaprasad
| Updated By: ವಿವೇಕ ಬಿರಾದಾರ

Updated on:Nov 05, 2023 | 12:28 PM

ಬೆಂಗಳೂರು ನ.05: ಮನೆಗೆ ನುಗ್ಗಿ ಗಣಿ-ಭೂವಿಜ್ಞಾನ ಇಲಾಖೆಯ (Department of Mines and Geology) ಅಧಿಕಾರಿಯನ್ನು (Officers) ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ (Police Station) ವ್ಯಾಪ್ತಿಯಲ್ಲಿ ನಡೆದಿದೆ. ಗಣಿ-ಭೂವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ (37) ಕೊಲೆಯಾದ ಅಧಿಕಾರಿ. ಮೃತ ಪ್ರತಿಮಾ, ತೀರ್ಥಹಳ್ಳಿ ತಾಲೂಕಿನ ಮಾರಿಗುಣಿ ಕೊಂಡ್ಲೂರು ನಿವಾಸಿಯಾಗಿದ್ದು, 10 ವರ್ಷದ ಹಿಂದೆ ಮದುವೆ ಆಗಿತ್ತು. ದಂಪತಿಗೆ 10 ವರ್ಷ ಒಬ್ಬ ಮಗ ಇದ್ದಾನೆ. ಪತಿಯಿಂದ ವಿಚ್ಛೇದನ ಪಡೆದಿದ್ದ ಪ್ರತಿಮಾ ಕಳೆದ 8 ವರ್ಷಗಳಿಂದ ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು. ಪತಿ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ.

ಇನ್ನು ಪ್ರತಿಮಾ ತಂದೆ ಸಾಲೂರು ಸುಬ್ಬೇಗೌಡ ಸ್ವಗ್ರಾಮದಲ್ಲಿ ನೆಲೆಸಿದ್ದಾರೆ. ಮೃತ ಪ್ರತಿಮಾ ಅಣ್ಣ ಪ್ರತೀಶ್​​ ಬಿಬಿಎಂಪಿ ಗುತ್ತಿಗೆದಾರ ನಾಗಿದ್ದು, ಮತ್ತೊಬ್ಬ ಅಣ್ಣ ಪ್ರತೀವ್​​​​​​ ತೀರ್ಥಹಳ್ಳಿಯಲ್ಲಿ ಶಾಲಾ ಶಿಕ್ಷಕನಾಗಿದ್ದಾನೆ. ಮಹಿಳಾ ಅಧಿಕಾರಿ ಪ್ರತಿಮಾ ಇತ್ತೀಚೆಗೆ ತೀರ್ಥಹಳ್ಳಿಯಲ್ಲಿ ಮನೆ ನಿರ್ಮಿಸಿ ಗೃಹಪ್ರವೇಶ ಮಾಡಿದ್ದರು. ಕುವೆಂಪು ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರೂ, ಪ್ರತಿಮಾ ಅಕ್ಕಪಕ್ಕದ ಮನೆಯವರ ಜೊತೆ ಆತ್ಮೀಯವಾಗಿದ್ದರು.

ಇದನ್ನೂ ಓದಿ: ಬೆಳಗಾವಿ: ಗಂಡನನ್ನೇ ಕೊಲೆ ಮಾಡಿ ಸಹಜ ಸಾವೆಂದು ನಾಟಕ; ತನಿಖೆ ಬಳಿಕ ಹೊರಬಿತ್ತು ಹತ್ಯಗೆ ಕಾರಣ?

ಶನಿವಾರ ರಾತ್ರಿ 8 ಗಂಟೆಗೆ ಇಲಾಖೆಯ ವಾಹನದಲ್ಲಿ ಪ್ರತಿಮಾ ಕಚೇರಿಯಿಂದ ಮನೆಗೆ ಬಂದಿದ್ದರು. ರಾತ್ರಿ ಅಣ್ಣ ​ಕರೆ ಮಾಡಿದಾಗ ಸ್ವೀಕರಿಸಿ ಮಾತನಾಡಿದ್ದರು. ಬಳಿಕ ದುಷ್ಕರ್ಮಿಗಳು ಪ್ರತಿಮಾ ಅವರ ಮನೆಗೆ ನುಗ್ಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳಿಗ್ಗೆ ಅಕ್ಕಪಕ್ಕದ ಮನೆಯವರು ಮನೆಗೆ ಬಂದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಪ್ರತಿಮಾ ನೆಲೆಸಿದ್ದ ಮನೆಯಲ್ಲಿ ಯಾವುದೇ ವಸ್ತು ಕಳ್ಳತನವಾಗಿಲ್ಲ. ಮೇಲ್ನೋಟಕ್ಕೆ ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎಫ್​ಎಸ್​ಎಲ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶನಿವಾರ ಸಂಜೆ 8 ಗಂಟೆಗೆ ಸಮಯಕ್ಕೆ ಮನೆಗೆ ಬಂದಿದ್ದಾರೆ. ಇವತ್ತು ಬೆಳಗ್ಗೆ ಪೋನ್ ಮಾಡಿದ್ದರು ತೆಗೆಯಲಿಲ್ಲ. ಬೆಳಗ್ಗೆ ಮನೆಗೆ ಬಂದು ನೋಡಿದಾಗ ಕೊಲೆಯಾಗಿದೆ ಅನ್ನೋದು ಗೊತ್ತಾಗಿದೆ. ಮೊದಲು ಉಸಿರುಗಟ್ಟಿಸಿ ನಂತರ ಕತ್ತು ಕೊಯ್ಡು ಕೊಲೆ ಮಾಡಲಾಗಿದೆ. ವಿವಿಧ ತಂಡಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಲಾಗಿದೆ. ಐದು ವರ್ಷ ದಿಂದ ಒಬ್ಬರೇ ವಾಸವಾಗಿದ್ದಾರೆ. ಮನೆಯಲ್ಲಿ ಯಾವುದೇ ವಸ್ತುಗಳು ಕಳ್ಳತನ ವಾಗಿಲ್ಲ. ಮೂರು ತಂಡಗಳು ತನಿಖೆ ನಡೆಸಲಾಗುತ್ತಿದೆ ಎಂದು ದಕ್ಷಿಣ ವಭಾಗ ಡಿಸಿಪಿ ರಾಹುಲ್ ಕುಮಾರ್ ಹೇಳಿದರು.

ಕೆಲಸದ ವಿಚಾರದಲ್ಲಿ ಡಿಡಿ ಪ್ರತಿಮಾಗೆ ಯಾವುದೇ ಅಸಮಾಧಾನವಿರಲಿಲ್ಲ. ಕೆಲಸದ ವಿಚಾರವಾಗಿ ಪ್ರತಿಮಾ ಯಾವುದೇ ಗಂಭೀರ ಆರೋಪ ಮಾಡಿರಲಿಲ್ಲ ಎಂದು ಬೆಂಗಳೂರು ನಗರ ಡಿಸಿ ಕೆ.ಎ.ದಯಾನಂದ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Sun, 5 November 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ