ಮಂಗಳೂರು, ಜ.16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಮಂಗಳೂರಿನ (Mangaluru) ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಎಲ್ ಕಾರ್ಡ್ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ನಿಂದಿಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಆರಂಭದಲ್ಲಿ ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಲಾಗಿದೆ. ಸುರತ್ಕಲ್ ಮೂಲದ ಯುವಕ ಈ ವಿಡಿಯೋ ಮಾಡಿದ್ದು ಎನ್ನಲಾಗುತ್ತಿದೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್ಐಆರ್ ದಾಖಲು
ಈ ಬಗ್ಗೆ ಎನ್ಎಸ್ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ಪೊಲೀಸ್ ಆಯುಕ್ತ ಅವರಿಗೆ ದೂರು ನೀಡಿದ್ದು, ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ದೂರು ಸ್ವೀಕರಿಸಿದ್ದಾರೆ. ಸದ್ಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:37 pm, Tue, 16 January 24