ಧಾರವಾಡ: ಸುತ್ತಿಗೆಯಿಂದ ಹೊಡೆದು ಮಕ್ಕಳ ಬರ್ಬರ ಕೊಲೆ, ಹೆಂಡತಿ ಗಂಭೀರ, ಆರೋಪಿ ಪತಿ ಆತ್ಮಹತ್ಯೆ

| Updated By: Rakesh Nayak Manchi

Updated on: Feb 01, 2023 | 9:00 PM

ಹೆಂಡತಿ ಮತ್ತು ಮಕ್ಕಳ ಮೇಲೆ ಸುತ್ತಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದು, ಮಕ್ಕಳ ತಾಯಿ ಸ್ಥಿತಿ ಗಂಭೀರವಾಗಿದೆ. ಆರೋಪಿ ಪತಿ ಅತ್ಮಹತ್ಯೆ ಮಾಡಿಕೊಂಡಿದ್ದಾನೆ.

ಧಾರವಾಡ: ಸುತ್ತಿಗೆಯಿಂದ ಹೊಡೆದು ಮಕ್ಕಳ ಬರ್ಬರ ಕೊಲೆ, ಹೆಂಡತಿ ಗಂಭೀರ, ಆರೋಪಿ ಪತಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Follow us on

ಧಾರವಾಡ: ಹೆಂಡತಿ ಮತ್ತು ಮಕ್ಕಳ ಮೇಲೆ ಸುತ್ತಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳದಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಮೂವರು ಮಕ್ಕಳು ಸಾವನ್ನಪ್ಪಿದರೆ, ಮಕ್ಕಳ ತಾಯಿ ಆರೋಗ್ಯ ಗಂಭೀರವಾಗಿದೆ. ಶ್ರಾವಣಿ (8), ಶ್ರೇಯಸ್ (6), ಸೃಷ್ಟಿ (4) ಹತ್ಯೆಯಾದ ಮಕ್ಕಳಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಮಕ್ಕಳ ತಾಯಿ ಮುದಕವ್ವಗೆ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಫಕೀರಪ್ಪ ಮಾದರ ಆತ್ಮಹತ್ಯೆ ಮಾಡಿಕೊಂಡ ಆರೋಪಿಯಾಗಿದ್ದಾನೆ.

ಹಲ್ಲೆ ಮತ್ತು ಬರ್ಬರ ಹತ್ಯೆ ಬಗ್ಗೆ ಮಾಹಿತಿ ನೀಡಿದ ಎಸ್​ಪಿ ಲೋಕೇಶ್ ಜಗಲಾಸರ, ಇಂದು ಬೆಳಗಿನ ಜಾವ ಪಕ್ಕೀರಪ್ಪ ಮಾದರ ಹೆಂಡತಿ‌ ಮಕ್ಕಳ ಮೇಲೆ ಸುತ್ತಿಗೆ ಇಂದ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ. ಹಲ್ಲೆ ಮಾಡಿದ ಬಳಿಕ ಆತನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಯಾಳು ಹೆಂಡತಿ ಮುದಕವ್ವ ಹುಬ್ಬಳ್ಳಿ ಕಿಮ್ಸ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಇದನ್ನೂ ಓದಿ: Shocking News: ಗಂಡನ ಸಾವಿನ ಬಗ್ಗೆ ಪ್ರಶ್ನಿಸಿದ ಮಹಿಳೆಗೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ!

ಬೆಳಗ್ಗೆ 5 ಗಂಟೆ ಸುಮಾರಿಗೆ ಕೋಣೆಯಲ್ಲಿ ಮಕ್ಕಳು ಮತ್ತು ತಾಯಿ ಮಲಗಿದ್ದಾಗ ಸುತ್ತಿಗೆಯಿಂದ ದಾಳಿ ನಡೆಸಿದ ಪಕೀರಪ್ಪ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಗೆ ಕಾರಣ ಏನು ಅನ್ನೋದು ತಿಳಿದುಬಂದಿಲ್ಲ, ತನಿಖೆ ನಂತರವಷ್ಟೇ ತಿಳಿದುಬರಲಿದೆ. ಹೀಗಾಗಿ ಈಗಲೇ ಏನೂ ಹೇಳಲು ಸಾಧ್ಯವಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

IAS ಅಧಿಕಾರಿ ಮನೆಯಲ್ಲಿ ಕಳ್ಳತನ ಪ್ರಕರಣ, ಮೂವರು ಅರೆಸ್ಟ್

ಬೆಂಗಳೂರು: ಐಎಎಸ್​ ಅಧಿಕಾರಿ ಸ್ಮಿತಾ ಗೋಪಾಲನ್‌ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ನಗರದ ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಕರಣ್, ವಿಕಾಸ್, ಬೀರ್ ಬಲ್ ಬಂಧಿತ ಆರೋಪಿಗಳಾಗಿದ್ದಾರೆ. ಒಂದು ತಿಂಗಳ ಹಿಂದೆ ಡಾಲರ್ಸ್ ಕಾಲೋನಿಯಲ್ಲಿರುವ ಅಕೌಂಟ್ಸ್‌ ಆಡಿಟ್ ಸರ್ವಿಸ್‌ನಲ್ಲಿ ಎಜಿಯಾಗಿರುವ ಸ್ಮಿತಾ ಅವರ ನಿವಾಸಕ್ಕೆ ನುಗ್ಗಿದ್ದ ಖದೀಮರು 200 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಸದ್ಯ ಆರೋಪಿಗಳನ್ನ ಬಂಧಿಸಿದ್ದು ಕದ್ದ ಚಿನ್ನಾಭರಣಗಳ ಜಪ್ತಿಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Wed, 1 February 23